ಕುಶಾಲನಗರ, ಮಾ. ೫: ಬಿಜೆಪಿ ಮಂಗಳೂರು ವಿಭಾಗದ ಪ್ರಭಾರಿಯಾಗಿ ಕೊಡಗು ಜಿಲ್ಲಾ ಪಂಚಾಯಿತಿಯ ಮಾಜಿ ಸದಸ್ಯ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ರಾಜ್ಯದ ಎಲ್ಲಾ ವಿಭಾಗಗಳಿಗೂ ಪ್ರಭಾರಿ ಮತ್ತು ಸಹ ಪ್ರಭಾರಿಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.