ಬೆಂಗಳೂರು, ಮಾ. ೬; ರಾಜ್ಯದ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಅವರು ೨೦೨೬-೨೦೨೭ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಂಡನೆ ಮಾಡಿದ್ದು, ಆರೋಗ್ಯ, ಶಿಕ್ಷಣ ಹಾಗೂ ಕೃಷಿ ವಲಯಕ್ಕೆ ಆದ್ಯತೆ ನೀಡಲಾಗಿದೆ. ೪.೪೮ ಕೋಟಿ ಗಾತ್ರದ ಬಜೆಟ್ ೯೭,೪೪೯ ಕೋಟಿ ವಿತ್ತೀಯ ಕೊರತೆ ಎದುರಿಸುತ್ತಿದೆ. ಬೆಂಗಳೂರು ನಗರ ಸೇರಿದಂತೆ ಅಲ್ಪ ಸಂಖ್ಯಾತ ವಿಭಾಗಕ್ಕೆ ಕೊಡುಗೆ ನೀಡಲಾಗಿದೆ.
ಆರೋಗ್ಯ ಇಲಾಖೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಬಜೆಟ್ನಲ್ಲಿ ರೂ.೧೭,೮೧೭ ಕೋಟಿ ಅನುದಾನ ಒದಗಿಸಲಾಗಿದೆ. ಈ ಪೈಕಿ ಆರೋಗ್ಯ ಇಲಾಖೆಯ ಮೂಲಸೌಕರ್ಯ ಅಭಿವೃದ್ಧಿಗಾಗಿ ರೂ.೯೦೦ ಕೋಟಿ,
ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ (ಂಃ-Aಡಿಏ) ಯೋಜನೆಯಡಿ ಊಃP-೨೦೨೨ ಚಿಕಿತ್ಸಾ ಪ್ಯಾಕೇಜ್ ದರಗಳ ಜಾರಿಗೆ ಹೆಚ್ಚುವರಿ ೪೦೦ ಕೋಟಿ ರೂ., ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳ ತುರ್ತು ಚಿಕಿತ್ಸಾ ವಿಭಾಗಗಳ ಮೇಲ್ದರ್ಜೆಗಾಗಿ ೪೫ ಕೋಟಿ ರೂ., ತೀವ್ರ ಅಪೌಷ್ಟಿಕತೆಯ ಮಕ್ಕಳಿಗಾಗಿ ೬೩ ತಾಲೂಕುಗಳಲ್ಲಿ ಪೌಷ್ಟಿಕ ಮನಶ್ವೇತನ ಕೇಂದ್ರಗಳ (ಓಖಅ) ವಿಸ್ತರಣೆಗೆ ೬ ಕೋಟಿ ರೂ., ಕಡಿಮೆ ಜನನ ತೂಕದ ಹಾಗೂ ಅನಾರೋಗ್ಯ ಪೀಡಿತ ಶಿಶುಗಳ ಸಮಗ್ರ ಆರೈಕೆಗೆ ೧೦ ಕೋಟಿ ರೂ.
೧೮ ವರ್ಷದವರೆಗಿನ ಖಿಥಿಠಿe-೧ ಆiಚಿbeಣes ಮಕ್ಕಳ ಆರೋಗ್ಯ ಸುಧಾರಣೆಗೆ ಉಚಿತ ಇನ್ಸುಲಿನ್ ಪೆನ್ಗಳ ವಿತರಣೆ.
ಏಏಖಆಃ ಒiಛಿಡಿo ಯೋಜನೆಯಲ್ಲಿ ಆರೋಗ್ಯ ಕ್ಷೇತ್ರಕ್ಕೆ ಆದ್ಯತೆ ಮೇಲೆ ಅನುದಾನ.
ಕೆ.ಎಂ.ಇ.ಆರ್.ಸಿ ಅನುದಾನದಡಿ ಗಣಿ ಬಾಧಿತ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರಿನ ಎಲ್ಲಾ ತಾಲೂಕುಗಳಲ್ಲಿ ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆ.
ಗಂಭೀರ ರೋಗಗಳಿಗೆ ಕೇರಳ ಮಾದರಿಯಲ್ಲಿ Pಚಿಟಟium Iಟಿಜiಚಿ ಸಹಯೋಗದಲ್ಲಿ ಗೃಹಾಧಾರಿತ ಉಪಶಮನ ಸೇವೆ
೫೦ ಡಯಾಲಿಸಿಸ್ ಕೇಂದ್ರಗಳ ಹಾಸಿಗೆ ಸಾಮರ್ಥ್ಯ ಹೆಚ್ಚಳ; ವಾರ್ಷಿಕ ೧.೩೫ ಲಕ್ಷ ಹೆಚ್ಚುವರಿ ಡಯಾಲಿಸಿಸ್ ಸೇವೆಗಾಗಿ ೨೦ ಕೋಟಿ ರೂ., ಡಿಜಿಟಲ್ ಆರೋಗ್ಯ ಕಾರ್ಯಕ್ರಮದಡಿ ವಹಿಗಳ ಡಿಜಿಟಲೀಕರಣ ರೋಗಿಗಳ ಸಂಪೂರ್ಣ ಗಣಕೀಕೃತ ನೋಂದಣಿ, ಆರೋಗ್ಯ ದಾಖಲೆಗಳ ಡಿಜಿಟಲೀಕರಣ; UPI ಆಧಾರಿತ ಶುಲ್ಕ ಪಾವತಿ ವ್ಯವಸ್ಥೆಗೆ ಆದ್ಯತೆ ನೀಡಲಾಗಿದೆ. ಇದರೊಂದಿಗೆ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ೨,೫೦೦ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ.
ವೈದ್ಯಕೀಯ ಶಿಕ್ಷಣಕ್ಕೆ
ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ ೬೨೦ ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ ೨೨೦ ಕೋಟಿ ರೂ.ಗಳ ಅನುದಾನ ಮೀಸಲಿಡಲಾಗಿದೆ.
ರೂ.೧೮೦ ಕೋಟಿ ವೆಚ್ಚದಲ್ಲಿ ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ೬೦೦ ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯಾಗಿ ಮೇಲ್ದರ್ಜೆಗೇರಿಸುವದು, ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ ೧೦೦ ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸ್ಥಾಪನೆ ಮಾಡಲಾಗುತ್ತಿದೆ. ಇದರೊಂದಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರನ್ನು ಬದಲಾಯಿಸಿ 'ಶಾಂತವೇರಿ ಗೋಪಾಲಗೌಡ ಆಸ್ಪತ್ರೆ' ಎಂದು ಮರುನಾಮಕರಣ ಮಾಡಲಾಗುತ್ತಿದೆ.
ಶಿಕ್ಷಣ ಕ್ಷೇತ್ರ
ಶಿಕ್ಷಣ ಕ್ಷೇತ್ರಕ್ಕೆ ರೂ.೪೭,೨೨೪ ಕೋಟಿ ಅನುದಾನ ಮೀಸಲಿರಿಸಲಾಗಿದೆ. ಮುಂದಿನ ೩ ವರ್ಷಗಳಲ್ಲಿ ರೂ.೩,೯೦೦ ಕೋಟಿ ಅನುದಾನದಡಿ ಉತ್ತಮ ಕಲಿಕೆ ಉಜ್ವಲ ಭವಿಷ್ಯ ಎಂಬ ಘೋಷವಾಕ್ಯದೊಂದಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡಲು ಒಟ್ಟಾರೆ ೮೦೦ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲಾಗುವುದು.
ಸರ್ಕಾರಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ ರೂ.೫೬೫ ಕೋಟಿ, ಶೌಚಾಲಯ ನಿರ್ಮಾಣಕ್ಕಾಗಿ ರೂ.೭೫ ಕೋಟಿ ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು ರೂ.೨೫ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳ ನಿರ್ವಹಣೆಗಾಗಿ ೧೨೫ ಕೋಟಿ ರೂ.ಗಳ ಅನುದಾನ. ೨೦೨೬-೨೭ ಸಾಲಿನಲ್ಲಿ ಶಾಲಾ - ಕಾಲೇಜುಗಳಲ್ಲಿ ಖಾಲಿ ಇರುವ ೧೫,೦೦೦ ಬೋಧಕ ಹುದ್ದೆಗಳ ಭರ್ತಿಗೆ ಕ್ರಮ ವಹಿಸಲಾಗಿದೆ.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು ೨೦೪ ಃಖಅ ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ.
ವಿಜಯಪುರದ ಸೈನಿಕ ಶಾಲೆಯ ಹಾಸ್ಟೆಲ್ ಕಟ್ಟಡಗಳನ್ನು ಹಂತ ಹಂತವಾಗಿ ಪುನರ್ ನಿರ್ಮಿಸಲು ಪ್ರಸಕ್ತ ಸಾಲಿನಲ್ಲಿ ರೂ.೧೦ ಕೋಟಿ ಅನುದಾನ ಒದಗಿಸಲಾಗಿದೆ.
ಉನ್ನತ ಶಿಕ್ಷಣ ಕ್ಷೇತ್ರಕ್ಕೆ
ರೂ.೨,೫೦೦ ಕೋಟಿ ವೆಚ್ಚದಲ್ಲಿ ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ ಅನುಷ್ಠಾನ. ಈ ಯೋಜನೆಯಡಿ ೪೦ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು ೧೧ ಪಾಲಿಟೆಕ್ನಿಕ್ಗಳು ಮಾದರಿ ಸಂಸ್ಥೆಗಳಾಗಿ ಅಭಿವೃದ್ಧಿ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯ ಪ್ರೋತ್ಸಾಹಕ್ಕಾಗಿ ೯ ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ.
ಸಾರ್ವಜನಿಕ ವಿಶ್ವ ವಿದ್ಯಾಲಯಗಳಲ್ಲಿ ೧,೦೦೦ ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ.
ರಾಜ್ಯದ ೨೫ ಸರ್ಕಾರಿ ಪದವಿ ಕಾಲೇಜು, ೪ಐದನೇ ಪುಟಕ್ಕೆ
ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿAಗ್ ಕಾಲೇಜುಗಳಲ್ಲಿ ಒಟ್ಟು ರೂ.೩೧ ಕೋಟಿ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯ ವ್ಯವಸ್ಥೆ ನಿರ್ಮಾಣ. ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಹಾಗೂ ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸ್ಥಾಪನೆಗೆ ಕ್ರಮ ವಹಿಸಲಾಗಿದೆ.
ಕೃಷಿ ಕ್ಷೇತ್ರದ ಅಭಿವೃದ್ಧಿ
ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ರೂ.೮,೩೭೩ಕೋಟಿ ಮೀಸಲಿರಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಬಬ್ಬೂರಿನ ಜಿಲ್ಲಾ ತರಬೇತಿ ಕೇಂದ್ರವನ್ನು ರಾಜ್ಯಮಟ್ಟದ ಕೃಷಿ ಉದ್ದಿಮೆ ತರಬೇತಿ ಕೇಂದ್ರವಾಗಿ ಉನ್ನತೀಕರಣ.
ಸಣ್ಣ, ಅತಿ ಸಣ್ಣ ರೈತರಿಗೆ ಸ್ಥಳೀಯವಾಗಿ ಅಗತ್ಯವಿರುವ ಎತ್ತು ಚಾಲಿತ ಹಾಗೂ ಕೈಚಾಲಿತ ಉಪಕರಣಗಳನ್ನು ಕೃಷಿ ಯಾಂತ್ರೀಕರಣ ಯೋಜನೆಯಡಿ ಒದಗಿಸಲಾಗುವುದು. ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಹಾಗೂ ಕೃಷಿ ಯಂತ್ರೋಪಕರಣಗಳು ಒಂದೇ ಸೂರಿನಡಿ ದೊರಕಿಸಲು ಪ್ರಾಯೋಗಿಕವಾಗಿ ಕೋಲಾರ ಜಿಲ್ಲೆಯ ಪ್ರತಿಯೊಂದು ತಾಲೂಕಿನಲ್ಲಿ ಒSIಐ ವತಿಯಿಂದ ರೈತ ಮಾಲ್ಗಳ ಸ್ಥಾಪನೆ ಮಾಡಲಾಗುವದು.
ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿ
ಉತ್ಕೃಷ್ಟ ಮೌಲ್ಯದ ತೋಟಗಳ ಅಭಿವೃದ್ಧಿ, ಕೊಯ್ಲೋತ್ತರ ಸೌಲಭ್ಯಗಳು ಹಾಗೂ ತೋಟಗಾರಿಕೆ ಆಧಾರಿತ ಕೈಗಾರಿಕೆಗಳು ಪಿಪಿಪಿ ಮಾದರಿಯಲ್ಲಿ ಸ್ಥಾಪನೆ. ಅಡಿಕೆ ಬೆಳೆಯ ಎಲೆ ಚುಕ್ಕಿ, ಹಳದಿ ಎಲೆ ಹಾಗೂ ಕೊಳೆ ರೋಗಗಳ ಮತ್ತು ತೆಂಗು ಬೆಳೆಯ ಕಪ್ಪು ತಲೆ ಹುಳು ಹಾಗೂ ಬಿಳಿ ನೊಣಗಳ ನಿಯಂತ್ರಣಕ್ಕಾಗಿ ರೂ.೧೦ ಕೋಟಿ ವೆಚ್ಚದಲ್ಲಿ ಸಮುದಾಯ ಆಧಾರಿತ ರೋಗ - ಕೀಟ ನಿಯಂತ್ರಣ ಕ್ರಮಗಳ ಜಾರಿ. ತೋಟಗಾರಿಕೆ ಉತ್ಪನ್ನಗಳ ಸಂಸ್ಕರಣೆಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು ಮತ್ತು ವಿಜಯಪುರ ಜಿಲ್ಲೆಯ ತೊರವಿಯಲ್ಲಿ ರೂ.೬೪ ಕೋಟಿ ವೆಚ್ಚದಲ್ಲಿ ಒಟ್ಟು ೧೨,೦೦೦ ಮೆಟ್ರಿಕ್ ಟನ್ ಸಾಮರ್ಥ್ಯದ ಎರಡು ಶೀತಲಗೃಹಗಳ ಸ್ಥಾಪನೆ. ಹೆಚ್ಚಿನ ಪ್ರವಾಸಿಗರನ್ನು ಹಾಗೂ ಪರಿಸರ ಪ್ರೇಮಿಗಳನ್ನು ಆಕರ್ಷಿಸುವ ದೃಷ್ಟಿಯಿಂದ ಮೈಸೂರಿನ ಲಿಂಗಾAಬುಧಿ ಸಸ್ಯ ತೋಟದ ಸಮಗ್ರ ಅಭಿವೃದ್ಧಿ. ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಉತ್ಪಾದಿಸುವ ರೇಷ್ಮೆಗೂಡನ್ನು ಸರ್ಕಾರದ ಯಾವುದೇ ರೇಷ್ಮೆಗೂಡಿನ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಪ್ರತಿ ಕೆ.ಜಿ. ಗೂಡಿಗೆ ಇರುವ ೧೦ ರೂ. ಸಾಗಾಣಿಕಾ ವೆಚ್ಚ ೨೦ ರೂ.ಗೆ ಹೆಚ್ಚಳ
ರಾಮನಗರ, ಶಿಡ್ಲಘಟ್ಟ, ಹಾವೇರಿ, ತಾಂಡವಪುರ (ಮೈಸೂರು) ಹಾಗೂ ಕಲಬುರಗಿಯಲ್ಲಿ ಸಿಲ್ಕ್ ಪಾರ್ಕ್ಗಳ ಸ್ಥಾಪನೆ.
ರೇಷ್ಮೆ ಇಲಾಖೆಯ ಆಯ್ದ ಕ್ಷೇತ್ರಗಳಲ್ಲಿ ಲಭ್ಯವಿರುವ ಜಮೀನಿನಲ್ಲಿ ರೈತ ಉದ್ಯಮಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಸಹಯೋಗದೊಂದಿಗೆ ಚಾಕಿ ಸಾಕಾಣಿಕೆ ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತಿದೆ.
ಲೋಕೋಪಯೋಗಿ ಇಲಾಖೆ
ಮುಂದಿನ ಎರಡು ವರ್ಷಗಳಲ್ಲಿ ೨,೦೦೦ ಕೋಟಿ ರೂ. ಮೊತ್ತದಲ್ಲಿ ಸೇತುವೆಗಳ ನಿರ್ಮಾಣ.
ಮಲೆನಾಡು ಮತ್ತು ಕರಾವಳಿ ಪ್ರದೇಶದ ಜನವಸತಿಗಳಿಗೆ ಸಂಪರ್ಕ ಕಲ್ಪಿಸುವ ೩೦೦ ಕಾಲು ಸಂಕಗಳ ನಿರ್ಮಾಣ.
ಇಲಾಖೆಯ ಆಸ್ತಿಗಳನ್ನು ಡಿಜಿಟಲೀಕರಣಗೊಳಿಸುವುದರೊಂದಿಗೆ ಸಂರಕ್ಷಿಸಲು ರೆಕಾರ್ಡ್ ರೂಮ್ ನಿರ್ಮಾಣ.
ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಹಂತ-೫ ಘಟ್ಟ-೨ರಡಿ ೫,೦೦೦ ಕೋಟಿ ರೂ. ಮೊತ್ತದಲ್ಲಿ ೧೮೪೬ ಕಿಮೀ ರಸ್ತೆಯ ಅಭಿವೃದ್ಧಿ. ಮುಂದುವರೆದ ಯೋಜನೆಗಳಡಿ ೨,೨೦೦ ಕಿ.ಮೀ ರಾಜ್ಯ ಹೆದ್ದಾರಿ ೩,೫೦೦ ಕಿ.ಮೀ ಜಿಲ್ಲಾ ರಸ್ತೆಗಳನ್ನು ೫,೭೭೬ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ. ಂಆಃ ನೆರವಿನ ಏSಊIP-Iಗಿ ಅಡಿಯಲ್ಲಿ ೫,೭೩೬ ಕೋಟಿ ರೂ.ಗಳ ವೆಚ್ಚದಲ್ಲಿ ೮೭೫ ಕಿ.ಮೀ ಉದ್ದದ ರಸ್ತೆ ನಿರ್ಮಾಣ ಮಾಡಲಾಗುವದು.
ಇಂದಿರಾ ಕಿಟ್ ವಿತರಣೆ
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ೫ ಕೆ.ಜಿ ಅಕ್ಕಿಯ ಬದಲಾಗಿ ಇಂದಿರಾ ಆಹಾರ ಕಿಟ್ ವಿತರಣೆ ಮಾಡಲಾಗುವದು.
ಲಾಭಾಂಶ ಪಾವತಿಯಲ್ಲಿ ವಿಳಂಬ ನಿವಾರಿಸಲು ಈISಖಿ ಂಠಿಠಿಟiಛಿಚಿಣioಟಿ ಮೂಲಕ ನೇರಪಾವತಿ.
ಇಲಾಖೆಯ ಸಹಾಯವಾಣಿ ೧೯೬೭ ವ್ಯವಸ್ಥೆಯನ್ನು ಂI ಆಧಾರಿತ “Smಚಿಡಿಣ ಂಟಿಟಿಚಿvಚಿಟಿi' ಯನ್ನಾಗಿ ಪರಿವರ್ತನೆ.
ದಾಸೋಹ ಯೋಜನೆಯಡಿ ೩೪ ಹೊಸ ಕಲ್ಯಾಣ ಸಂಸ್ಥೆಗಳ ಸೇರ್ಪಡೆಗೊಳಿಸಲಾಗುವದು.
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಆದ್ಯತೆ
೨೫ ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರಾರಂಭ.
ಅಃSಇ ಪಠ್ಯಕ್ರಮದಡಿ ೧೦ ಕೋಟಿ ರೂ. ಅನುದಾನದಲ್ಲಿ ೧೦ ಹೊಸ ಸಂತ ಶಿಶುನಾಳ ಶರೀಫ ವಸತಿ ಶಾಲೆಗಳ ಪ್ರಾರಂಭ.
೨೫ ಹೊಸ ಸಂತ ಶಿಶುನಾಳ ಶರೀಫರ ವಸತಿ ಶಾಲೆಗಳ ಪ್ರಾರಂಭ.
೧೦೦ ಮೌಲಾನಾ ಆಜಾದ್ ಮಾದರಿ ಶಾಲೆ ಹಾಗೂ ಉರ್ದು ಶಾಲೆಗಳನ್ನು ೪೦೦ ಕೋಟಿ ರೂ.ಗಳ ವೆಚ್ಚದಲ್ಲಿ ಕೆ.ಪಿ.ಎಸ್. ಮಾದರಿಯಲ್ಲಿ ಉನ್ನತೀಕರಣ. ೨೫ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಪಿ.ಯು.ಸಿ ವಿಜ್ಞಾನ ಮತ್ತು ವಾಣಿಜ್ಯ ವಿಭಾಗ ಪ್ರಾರಂಭ. ೧೮ ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ ವಾಣಿಜ್ಯ ವಿಭಾಗ ಪ್ರಾರಂಭ.
ಅಲ್ಪಸAಖ್ಯಾತರ ನಾಲ್ಕು ವಸತಿ ಶಾಲೆಗಳನ್ನು ಏ-ಅಇಖಿ/ಎಇಇ/ಓಇಇಖಿ ಪರೀಕ್ಷೆಗಳಿಗೆ ಅeಟಿಣeಡಿ ಜಿoಡಿ ಇxಛಿeಟಟeಟಿಛಿeನ್ನಾಗಿ ಸ್ಥಾಪನೆ. ೨೦ ವಸತಿ ಶಾಲೆಗಳ ಮಕ್ಕಳಿಗೆ ಏ-ಅಇಖಿ/ಎಇಇ/ಓಇಇಖಿ ಪರೀಕ್ಷೆಗಳಿಗೆ ವಿಶೇಷ ತರಬೇತಿ.
ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ಆಯ್ದ ವಕ್ಫ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗೂ ನಾಗರಿಕ ಸೇವಾ ಕೇಂದ್ರಗಳ ಪ್ರಾರಂಭ.
ಬೆAಗಳೂರಿನಲ್ಲಿ ೧೦೦ ಸಂಖ್ಯಾಬಲದ ನಾಲ್ಕು ಉದ್ಯೋಗಸ್ಥ ಮಹಿಳೆಯರ ವಸತಿನಿಲಯಗಳ ಪ್ರಾರಂಭ.
ಜೈನ್, ಬೌದ್ಧ ಮತ್ತು ಸಿಖ್ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ೧೦೦ ಕೋಟಿ ರೂ. ಅನುದಾನ.
ಅಲ್ಪಸಂಖ್ಯಾತರ ೫,೦೦೦ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಖರೀದಿಗೆ ತಲಾ ೫೦,೦೦೦ ರೂ.
ಕ್ರೈಸ್ತ ಸಂಸ್ಥೆಗಳು ನಡೆಸುವ ೧೦ ವೃದ್ಧಾಶ್ರಮಗಳಲ್ಲಿ ತಲಾ ೫೦ ಲಕ್ಷ ರೂ.ಗಳ ನೆರವಿನೊಂದಿಗೆ ಸಮಗ್ರ ಜೆರಿಯಾಟ್ರಿಕ್ ಪ್ಯಾಲಿಯೇಟಿವ್ ಕೇರ್ ಘಟಕಗಳ ಸ್ಥಾಪನೆ.
ಸಂವಿಧಾನ ಶಿಲ್ಪಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಇತರ ಸಮಾಜ ಸುಧಾರಕರ ಕೃತಿಗಳು ಮತ್ತು ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ.
ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳ ನಿರ್ಮಾಣ.
೩೧ ಮಹಿಳಾ ಪಿ.ಯು ಕಾಲೇಜುಗಳನ್ನು ಪದವಿ ಕಾಲೇಜುಗಳನ್ನಾಗಿ ಉನ್ನತೀಕರಣ. ಸವಣೂರಿನಲ್ಲಿ ಒಂದು ಹೊಸ ಮಹಿಳಾ ಪಿ.ಯು. ಕಾಲೇಜು ಪ್ರಾರಂಭ.
ಸಾರ್ವಜನಿಕ ಖಾಸಗಿ ಸಹಭಾಗಿತ್ವದಡಿ ವಕ್ಫ್ ಆಸ್ತಿಗಳ ಸಮಗ್ರ ಅಭಿವೃದ್ಧಿ
ಬೀದರ್'ನ ಶ್ರೀನಾನಕ್ ಝೀರಾ ಸಾಹೇಬ್ ಗುರುದ್ವಾರದಲ್ಲಿ ಗ್ರಂಥಾಲಯ ಸ್ಥಾಪನೆ
ಪ್ರವಾಸೋದ್ಯಮಕ್ಕೆ ಆದ್ಯತೆ
ಕರ್ನಾಟಕದ ಕರಾವಳಿ ಜಿಲ್ಲೆಗಳ ವಿಶೇಷ ಪ್ರವಾಸೋದ್ಯಮ ಸಾಮರ್ಥ್ಯವನ್ನು ಸದುಪಯೋಗಪಡಿಸಿಕೊಳ್ಳಲು ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯನ್ನು ರೂಪಿಸಲಾಗುವುದು. ಈ ತಾಣಗಳಲ್ಲಿ ವಾಯುಯಾನ ಹಾಗೂ ಜಲಸಾಹಸ ಪ್ರವಾಸೋದ್ಯಮ ಭಾಗೀದಾರರ ಸಹಯೋಗದೊಂದಿಗೆ ಸೀ ಪ್ಲೇನ್ ಹಾಗೂ ಹೆಲಿ ಟ್ಯಾಕ್ಸಿಗಳ ಮುಖಾಂತರ ಸಂಪರ್ಕ ಕಲ್ಪಿಸಲಾಗುವುದು. ಜೊತೆಗೆ ಜಾಯ್ ರೈಡ್, ರಿವರ್ ಕ್ರೂಸ್ ಚಟುವಟಿಕೆಗಳನ್ನು ಪ್ರೋತ್ಸಾಹಿಸಲಾಗುವುದು.
ನಮ್ಮ ರಾಜ್ಯಕ್ಕೆ ಆಗಮಿಸುವ ಎಲ್ಲಾ ಪ್ರವಾಸಿಗಳಿಗೆ ಸುಮಧುರ, ಸಕಾರಾತ್ಮಕ ಅನುಭವವನ್ನು ನೀಡುವ ಸಲುವಾಗಿ ಟ್ಯಾಕ್ಸಿ ಚಾಲಕರು, ಆಟೋ ಚಾಲಕರು ಹಾಗೂ ಭದ್ರತಾ ಪೊಲೀಸ್ ಸಿಬ್ಬಂದಿಗಳಿಗೆ ಮೃದು ಕೌಶಲ್ಯ ತರಬೇತಿ ನೀಡುವುದರ ಮೂಲಕ ವೃತ್ತಿಪರತೆಯನ್ನು ವೃದ್ಧಿಗೊಳಿಸಲು ಒಂದು ಕೋಟಿ ರೂ.ಗಳನ್ನು ಒದಗಿಸಲಾಗುವುದು.
ಪ್ರವಾಸ ಮಾರ್ಗದರ್ಶಕರಿಗೆ ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕೌಶಲ್ಯ ತರಬೇತಿ ನೀಡಲು ಡಿಪ್ಲೋಮಾ ಕೋರ್ಸ್ ಅನ್ನು ಪ್ರಾರಂಭಿಸಲಾಗುವುದು. ಪ್ರಮುಖ ಪ್ರವಾಸಿ ತಾಣವಾದ ಗದಗ-ಕಪ್ಪತಗುಡ್ಡ-ಲಕ್ಕುಂಡಿ ಪ್ರವಾಸೋದ್ಯಮ ಸರ್ಕ್ಯೂಟ್ ಅನ್ನು ಅಭಿವೃದ್ಧಿಪಡಿಸಲಾಗುವುದು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಮುಳ್ಳಯ್ಯನಗಿರಿ-ಸೀತಾಳಯ್ಯನಗಿರಿಯಿಂದ ಕೈಮರದವರೆಗೆ PPP ಮಾದರಿಯಲ್ಲಿ ರೋಪ್-ವೇ ನಿರ್ಮಿಸಲಾಗುವುದು. ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಸಮಗ್ರ ಮೂಲಸೌಕರ್ಯಗಳ ಅಭಿವೃದ್ಧಿಗಾಗಿ ೧೦ ಕೋಟಿ ರೂ.ಗಳನ್ನು ಒದಗಿಸಲಾಗುವುದು.
ರಾಜ್ಯದ ಸಂರಕ್ಷಿತ ೮೪೪ ಸ್ಮಾರಕಗಳ ಹಾಗೂ ೧,೦೦೦ ಅಸುರಕ್ಷಿತ ಸ್ಮಾರಕಗಳ ರಕ್ಷಣೆ ಮಾಡುವ ಹಿತದೃಷ್ಟಿಯಿಂದ ೧,೦೦೦ ಸ್ಮಾರಕ ಮಿತ್ರರನ್ನು ಗುರುತಿಸಿ ತರಬೇತಿ ನೀಡಲಾಗುವುದು. ಇವರುಗಳನ್ನು ಇಲಾಖೆಯ ಮಾನ್ಯತಾ ಪಟ್ಟಿಯಲ್ಲಿ ಸೇರ್ಪಡೆ ಮಾಡಲು ಕ್ರಮವಹಿಸಲಾಗುವುದು.
ಅಂಜನಾದ್ರಿ ಬೆಟ್ಟವನ್ನು ವಿಶ್ವ ಪ್ರಸಿದ್ಧ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲು ನಮ್ಮ ಸರ್ಕಾರವು ಸಮಗ್ರವಾದ ಯೋಜನೆಯನ್ನು ೧೦೦ ಕೋಟಿ ರೂ. ವೆಚ್ಚದಲ್ಲಿ ರೂಪಿಸಿದೆ. ಭಾರತ ಸರ್ಕಾರದಿಂದ ಅರಣ್ಯ ಮತ್ತು ಪರಿಸರ ತೀರುವಳಿ ಹಾಗೂ ಯುನೆಸ್ಕೋ ಸಹಮತಿ ಪಡೆದು ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲಾಗುವುದು.
ಬೆಂಗಳೂರಿಗೆ ಬಂಪರ್
ಈ ಬಾರಿ ರಾಜ್ಯ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಬಂಪರ್ ಘೋಷಣೆ ಮಾಡಲಾಗಿದೆ.
ಐದು ಪಾಲಿಕೆ ಮಾಡಿ ವಿಂಗಡಣೆ ಮಾಡಲಾಗಿದೆ. ೨೦೨೫-೨೬ನೇ ಸಾಲಿಗೆ ಬೆಂಗಳೂರು ಅಭಿವೃದ್ಧಿಗೆ ೩ ಸಾವಿರ ಕೋಟಿ ಬದಲು, ೭ ಸಾವಿರ ಕೋಟಿಗೆ ಅನುದಾನ ಹೆಚ್ಚಳ ಮಾಡಲಾಗಿದೆ.
೩ ಸಾವಿರ ಕೋಟಿ ವೆಚ್ಚದಲ್ಲಿ ೪೫೦ ಕಿ.ಮೀ ವೈಟ್ ಟಾಪಿಂಗ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ೧೭೫ ಜಂಕ್ಷನ್ ಸೌಂದರ್ಯೀಕರಣ, ೫೦೦ ಕಿ.ಮೀ ಪಾದಚಾರಿ ಮಾರ್ಗ ಮೇಲ್ದರ್ಜೆಗೆ, ೧೦೦ ಸ್ಕೈ ವಾಕ್ ನಿರ್ಮಾಣದ ಉದ್ದೇಶ ಇದೆ.
ಬೆಂಗಳೂರನ್ನ ವಿಶ್ವದ ಅತ್ಯುತ್ತಮ ವಾಸಯೋಗ್ಯ ನಗರ ಮಾಡುವ ಉದ್ದೇಶ ಇದೆ ಎಂದು ಸರ್ಕಾರ ಹೇಳಿದೆ.
ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ೧,೨೫೫ ಕೋಟಿ ರೂ.ಗಳ ಮೊತ್ತದ ವಾರ್ಡ್ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿ ಮಾಡಲಾಗಿದೆ.
೧,೭೦೦ ಕೋಟಿ ರೂ.ಗಳ ಮೊತ್ತದಲ್ಲಿ ೧೫೮ ಕಿ.ಮೀ. ಉದ್ದರ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ. ೧,೯೩೬ ಕೋಟಿ ರೂ.ಗಳ ಮೊತ್ತದ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಅಭಿವೃದ್ಧಿ, ಸಿಲ್ಕ್ ಬೋರ್ಡ್ ಜಂಕ್ಷನ್ನಿAದ ಕೆ.ಆರ್.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರ ವರ್ತುಲ ರಸ್ತೆಯನ್ನು ಅಭಿವೃದ್ಧಿಪಡಿಸುವ ೪೫೦ ಕೋಟಿ ರೂ.ಗಳ ಯೋಜನೆ, ೨೭೩ ಕೋಟಿ ರೂ.ಗಳ ಅಂದಾಜು ಮೊತ್ತದಲ್ಲಿ ರಾಜಕಾಲುವೆಗಳ ಮೇಲ್ದರ್ಜೆಗೇರಿಸುವುದು ಮತ್ತು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲು ಸರ್ಕಾರ ನಿರ್ಧಾರ ಮಾಡಿದೆ.
ಬೆಂಗಳೂರಿನಲ್ಲಿ ೨ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ. ಂAI ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಭಿಪ್ರಾಯ ಪಡೆಯಲಾಗುವುದು,
೨ನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕಾರ್ಯ ಸಾಧ್ಯತಾ ವರದಿ ಸಲ್ಲಿಸಲಾಗುವುದು, ೭ ದೇಶಿಯ ವಿಮಾನ ನಿಲ್ದಾಣ ಅಭಿವೃದ್ಧಿಗಾಗಿ ೧,೫೯೩ ಕೋಟಿ ರೂ. ಮೀಸಲಿಡಲಾಗುವುದು.