ಸಿದ್ದಾಪುರ, ಮಾ. ೬: ಅಮ್ಮತ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ಅಮ್ಮತ್ತಿ ಯ ಚೌಡೇಶ್ವರಿ ಲೋಕ ಸಂಘದ ವತಿಯಿಂದ ನಡೆಯುತ್ತಿರುವ ಪ್ರಥಮ ವರ್ಷದ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಯನ್ನು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಅವರು ಉದ್ಘಾಟಿಸಿದರು. ಗ್ರಾಮೀಣ ಕ್ರೀಡಾ ಪಟುಗಳ ಪ್ರತಿಭೆಗಳನ್ನು ಅನಾವರಣ ಮಾಡಲು ಇಂತಹ ಕ್ರೀಡಾಕೂಟಗಳು ಆಯೋಜಿಸಿರುವುದು ಉತ್ತಮ ಬೆಳವಣಿಗೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಇತ್ತೀಚಿನ ದಿನಗಳಲ್ಲಿ ಕ್ರಿಕೆಟ್ ಪಂದ್ಯಾವಳಿ ಎಲ್ಲಾ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದು ಕ್ರೀಡೆಯ ಮೂಲಕ ಮಕ್ಕಳು ತಮ್ಮ ಭವಿಷ್ಯವನ್ನು ಉಜ್ಜಲಗೊಳಿಸಲು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಸಮಾಜ ಸೇವಕ ಚೋಕಂಡ ಸಂಜು ಸುಬ್ಬಯ್ಯ ಹಾಗೂ ಸಂಘದ ಪದಾಧಿಕಾರಿಗಳು ಹಾಜರಿದ್ದರು.