ಮಡಿಕೇರಿ, ಮಾ. ೬ : ಕೊಡಗು ಜಿಲ್ಲೆಯ ಪಾಲಿಬೆಟ್ಟ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಕೆಎಸ್‌ಆರ್‌ಟಿಸಿ ಬಸ್ ಇಲ್ಲದೆ ಪರಿತಪಿಸುತ್ತಿದ್ದಾರೆ. ಈ ಹಿನ್ನೆಲೆ ಕೂಡಲೇ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷÀ ತೀತಿರ ಧರ್ಮಜ ಉತ್ತಪ್ಪ ಸೂಚಿಸಿದರು.

ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬAಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ವೀರಾಜಪೇಟೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷÀ ಪಿ.ವಿ.ಜಾನ್ಸನ್, ಪಿರಿಯಾಪಟ್ಟಣ ಮಾಲ್ದಾರೆ, ಚೆನ್ನಂಗಿ, ಚೆನ್ನಯ್ಯನಕೋಟೆ, ಪಾಲಿಬೆಟ್ಟ, ಅಮ್ಮತ್ತಿ, ವೀರಾಜಪೇಟೆ ಮಾರ್ಗ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಸರ್ಕಾರಿ ಬಸ್‌ನ್ನು ಕಲ್ಪಿಸುವಂತೆ ಅಲ್ಲಿನ ಸಾರ್ವಜನಿಕರು ಮನವಿ ಮಾಡಿದ್ದು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಗಮನ ಸೆಳೆದರು.

ಈ ಬಗ್ಗೆ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಸದಸ್ಯÀ ಕೆ.ಜಿ.ಪೀಟರ್, ಕೊಡಗು ಜಿಲ್ಲಾ ಕೇಂದ್ರದಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಇಲ್ಲದಿರುವುದು ಬೇಸರದ ಸಂಗತಿ ಎಂದು ಹೇಳಿದರು.

ರಾಜ್ಯದ ೩೦ ಜಿಲ್ಲಾ ಕೇಂದ್ರಗಳಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಇದೆ. ಆದರೆ ಮಡಿಕೇರಿಯಲ್ಲಿ ವಿಭಾಗೀಯ ಕೇಂದ್ರ ಇಲ್ಲದಿರುವುದು ನೋವಿನ ಸಂಗತಿ. ಆದ್ದರಿಂದ ಈ ಕಚೇರಿ ತೆರೆಯಬೇಕು. ಇದರಿಂದ ಸರ್ಕಾರಿ ಬಸ್‌ಗಳ ನಿಯೋಜನೆಗೆ ಅನುಕೂಲವಾಗಲಿದೆ ಎಂದು ಅವರು ಹೇಳಿದರು.

ಈ ಕುರಿತು ಮಾತನಾಡಿದ ಸೋಮವಾರಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷÀ ಕಾಂತರಾಜು, ಮಡಿಕೇರಿಯಲ್ಲಿ ಕೆಎಸ್‌ಆರ್‌ಟಿಸಿ ವಿಭಾಗೀಯ ಕಚೇರಿ ಆರಂಭಿಸಲು ಸಾರಿಗೆ ಸಚಿವರು ಮತ್ತು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಲು ನಿಯೋಗ ತೆರಳುವಂತಾಗಬೇಕು. ಆ ನಿಟ್ಟಿನಲ್ಲಿ ಜಿಲ್ಲಾಧ್ಯಕ್ಷರು ಪ್ರಯತ್ನಿಸುವಂತೆ ಸಲಹೆ ನೀಡಿದರು.

ಈ ಸಂಬAಧ ಕೆಎಸ್‌ಆರ್‌ಟಿಸಿ ಘಟಕ ವ್ಯವಸ್ಥಾಪಕರಾದ ಈರಸಪ್ಪ ಅವರು ಸಾರ್ವಜನಿಕರ ಮನವಿ ಮೇರೆಗೆ ಹಲವು ಕಡೆಗಳಲ್ಲಿ ಬಸ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ ಹಲವು ಗ್ರಾಮಗಳಿಗೆ ಬೇಡಿಕೆ ಇದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪಿ.ವಿ.ಜಾನ್ಸನ್, ಈ ಹಿಂದೆ ಕೋಲಾರ ಜಿಲ್ಲೆಯ ಕೆಜಿಎಫ್‌ಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರವಿತ್ತು, ಕಳೆದ ಹಲವು ತಿಂಗಳಿನಿAದ ಬಸ್ ಸಂಚಾರ ಸ್ಥಗಿತಗೊಂಡಿದೆ. ಆದ್ದರಿಂದ ಈ ಬಸ್ಸು ಮಾರ್ಗವನ್ನು ಮುಂದುವರಿಸಬೇಕು ಎಂದು ಕೋರಿದರು.

ಆಹಾರ ಇಲಾಖೆಗೆ ಸಂಬAಧಿಸಿದAತೆ ಮಾತನಾಡಿದ ಧರ್ಮಜ ಉತ್ತಪ್ಪ, ಹಲವು ಕಡು ಬಡವರಿಗೆ ಎಪಿಎಲ್ ಕಾರ್ಡ್ ದೊರೆತಿದ್ದು, ಇದನ್ನು ಸರಿಪಡಿಸುವಂತೆ ಹಲವು ಸಭೆಗಳಲ್ಲಿ ಹೇಳಲಾಗಿದೆ. ಈ ಕೆಲಸ ಪ್ರಗತಿ ಸಾಧಿಸಿಲ್ಲ ಎಂದು ಅತೃಪ್ತಿ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಆಹಾರ ನಿರೀಕ್ಷಕಿÀ ಶೀಲಕುಮಾರಿ ಅವರು ಸರ್ಕಾರದಿಂದ ಆದಾಯ ತೆರಿಗೆ ಪಾವತಿಸುವ ೧.೨೦ ಲಕ್ಷ ಮೇಲ್ಪಟ್ಟ ಆದಾಯ ಹೊಂದಿರುವ ಮತ್ತು ಇತರೆ ಮಾನದಂಡಗಳಡಿ ಜಿಲ್ಲೆಯಲ್ಲಿ ಒಟ್ಟು ೪,೫೧೧ ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆಗೊಂಡಿವೆ ಎಂದು ಮಾಹಿತಿ ನೀಡಿದರು.

ಪರಿವರ್ತನೆಗೊಂಡಿರುವ ಪೈಕಿ ಅರ್ಹ ಫಲಾನುಭವಿಗಳ ಪಡಿತರ ಚೀಟಿಗಳು ಎಪಿಎಲ್ ಆಗಿ ಪರಿವರ್ತನೆಗೊಂಡಿದ್ದಲ್ಲಿ ಅಂತಹ ಪಡಿತರ ಚೀಟಿದಾರರು ಅಗತ್ಯ ದಾಖಲೆಗಳೊಂದಿಗೆ ಸಂಬAಧಪಟ್ಟ ತಾಲೂಕು ತಹಶೀಲ್ದಾರರು, ಆಹಾರ ನಿರೀಕ್ಷಕರಿಗೆ ಅರ್ಜಿ ಸಲ್ಲಿಸಿದ್ದಲ್ಲಿ ಸ್ಥಳ ಪರಿಶೀಲಿಸಿ ಬಿಪಿಎಲ್‌ಗೆ ವರ್ಗಾಯಿಸಲು ಕ್ರಮಕೈಗೊಳ್ಳಲಾಗುವುದು ಎಂದು ಶೀಲಕುಮಾರಿ ಮಾಹಿತಿ ನೀಡಿದರು.

ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಮಾತನಾಡಿ, ಗೋಣಿಕೊಪ್ಪದಲ್ಲಿ ಸರ್ಕಾರಿ ಬಸ್ ಇಲ್ಲದೆ ಪ್ರತಿನಿತ್ಯ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಭಾನುವಾರದಂದು ಬಸ್‌ಗಳ ಸಂಚಾರ ಕಡಿಮೆ ಇರುತ್ತದೆ ಎಂದರು.

ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಶಾಂತ್ ಅವರು ಶ್ರೀಮಂಗಲ ವ್ಯಾಪ್ತಿಯಲ್ಲಿ ಲೈನ್‌ಮೆನ್‌ಗಳ ಕೊರತೆ ಇದ್ದು, ಕೂಡಲೇ ಲೈನ್‌ಮೆನ್‌ಗಳನ್ನು ನಿಯೋಜಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಕ್ರಮವಹಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಧರ್ಮಜ ಉತ್ಪಪ್ಪ ಅವರು ಜಿಲ್ಲೆಯಲ್ಲಿ ೨೯೧ ಲೈನ್‌ಮೆನ್ ಹುದ್ದೆಗಳಲ್ಲಿ ೫೧ ಹಿರಿಯ ಲೈನ್‌ಮೆನ್‌ಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸದ್ಯ ೧೯ ಜನ ಲೈನ್‌ಮೆನ್‌ಗಳು ನಿಯೋಜನೆಗೊಂಡಿದ್ದು, ಸ್ವಲ್ಪ ಸುಧಾರಣೆಯಾಗಲಿದೆ ಎಂದು ತಿಳಿಸಿದರು.

ಗೃಹಲಕ್ಷಿö್ಮ ಯೋಜನೆ ಸಂಬAಧಿಸಿದAತೆ ಮೇ ತಿಂಗಳಲ್ಲಿ ತಲುಪಿಲ್ಲ. ತಲುಪದಿರುವವರಿಗೆ ತಲುಪಿಸಬೇಕು ಎಂದು ಕಾಂತರಾಜು ಅವರು ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಪ್ರಸನ್ನ ಕುಮಾರ್ ಅವರು ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು. ಗೃಹಲಕ್ಷಿö್ಮ ಯೋಜನೆಯಡಿ ಜಿಲ್ಲೆಯಲ್ಲಿ ಶೇ.,೭೮ ರಷ್ಟು ಪ್ರಗತಿ ಸಾಧಿಸಲಾಗಿದೆ. ನವೆಂಬರ್ ಅಂತ್ಯದವರೆಗೆ ಗೃಹಲಕ್ಷಿö್ಮ ಯೋಜನೆಯಡಿ ಹಣ ಪಾವತಿ ಮಾಡಲಾಗಿದ್ದು, ಶೇ.೯೮.೮೧ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಗೃಹಜ್ಯೋತಿ ಯೋಜನೆಯಡಿ ಶೇ.೯೯.೨ ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಸೆಸ್ಕ್ ಕಾರ್ಯಪಾಲಕ ಇಂಜಿನಿಯರ್ ರಾಮಚಂದ್ರ ಮಾಹಿತಿ ನೀಡಿದರು. ಯುವನಿಧಿ ಯೋಜನೆ ಸಂಬAಧಿಸಿದAತೆ ಮಾಹಿತಿ ನೀಡಿದ ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್ ಅವರು ಫೆಬ್ರವರಿ ಮಾಸಾಂತ್ಯಕ್ಕೆ ಪದವೀಧರರು ಮತ್ತು ಡಿಪ್ಲೋಮ ಪದವೀಧರರು ಸೇರಿ ೧೭೧೯ ಫಲಾನುಭವಿಗಳಿಗೆ ೫.೦೬ ಕೋಟಿ ಹಣವನ್ನು ಡಿಬಿಟಿ ಮೂಲಕ ಜಮೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬAಧಿಸಿದAತೆ ಹಲವು ಮಾಹಿತಿ ನೀಡಿದರು. ವಿವಿಧ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದ್ದಲ್ಲಿ ಇನ್ನಷ್ಟು ಪ್ರಗತಿ ಸಾಧಿಸಬಹುದಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷರುಗಳಾದ ಶರೀ ಗಿರೀಶ್, ಕೆ.ಸಿ.ಭೀಮಯ್ಯ, ಪಂಕಜ, ಸದಸ್ಯರಾದ ಮಂದ್ರೀರ ಮೋಹನ್ ದಾಸ್, ಪಿ.ಎಲ್.ಸುರೇಶ್, ಕೆ.ಎಂ.ಬಶೀರ್, ಇತರರು ಇದ್ದರು.