ಮಡಿಕೇರಿ, ಮಾ. ೬: ಕೊಡಗಿನಲ್ಲಿ ಪ್ರಮುಖ ಜನಾಂಗವಾಗಿರುವ ಕೊಡವ ಸಮುದಾಯದ ಪಾಲಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ರಾಜ್ಯ ಬಜೆಟ್ ಮೂಲಕ ಆಗಿದೆ. ಇದು ಬಹಳ ವರ್ಷಗಳ ಬೇಡಿಕೆಯನ್ನು ಈಡೇರಿಸುವಲ್ಲಿ ಸಫಲವಾಗಿದೆ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ತಿಳಿಸಿದ್ದಾರೆ.

ರಾಜ್ಯ ಬಜೆಟ್ ಅನ್ನು ಮುಖ್ಯಮಂತ್ರಿಗಳು ಸೂಕ್ಷö್ಮತೆ-ದೂರದೃಷ್ಟಿಯೊಂದಿಗೆ ಮಂಡಿಸಿದ್ದಾರೆ. ಕೊಡಗು ಜಿಲ್ಲೆಗೂ ಹಲವು ಯೋಜನೆಗಳನ್ನು ನೀಡಲಾಗಿದೆ. ಇದರೊಂದಿಗೆ ರಾಜ್ಯ ವ್ಯಾಪಿಯ ಯೋಜನೆಗಳು ಜಿಲ್ಲೆಗೆ ಅನ್ವಯವಾಗಲಿದ್ದು, ಜನೋಪಕಾರಿಯಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಕರ್ನಾಟಕ ಬಜೆಟ್ ೨೦೨೬-೨೭ ನಮ್ಮ ರಾಜ್ಯವನ್ನು ಜವಾಬ್ದಾರಿಯುತ ತಾಂತ್ರಿಕ ನಾವೀನ್ಯತೆಯಲ್ಲಿ ನಾಯಕನಾಗಿ ಸ್ಥಾಪಿಸುವತ್ತ ಒಂದು ಪ್ರಮುಖ ಹೆಜ್ಜೆ - ಸರ್ವರಪಾಲಿನ ಕಲ್ಯಾಣದ ಬಜೆಟ್ ಇದಾಗಿದೆ ಎಂದು ಡಾ. ಮಂತÀರ್ ಗೌಡ ಅಭಿಪ್ರಾಯಪಟ್ಟಿದ್ದಾರೆ.

ಆರ್ಥಿಕ ಶಿಸ್ತಿನಿಂದ ಕೂಡಿದ ಬಜೆಟ್ ಇದಾಗಿದ್ದು, ತಮ್ಮ ಸುದೀರ್ಘವಾದ ೧೭ನೇ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳಿಗೆ ಅನುದಾನವನ್ನು ಒದಗಿಸುವ ಮೂಲಕ ಇತರ ಕ್ಷೇತ್ರಗಳಿಗೂ ಸಮಾನ ಆದ್ಯತೆ ನೀಡಿದ್ದಾರೆ.

ವಿಶೇಷವಾಗಿ ಆರೋಗ್ಯ, ಶಿಕ್ಷಣ, ಕೃಷಿ, ಜಲಸಂಪನ್ಮೂಲ ಮತ್ತು ಉದ್ಯೋಗ ಸೃಷ್ಟಿ ಸೇರಿದಂತೆ ಮೂಲಭೂತ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಿರುವುದು ರಾಜ್ಯದ ಅಭಿವೃದ್ಧಿಗೆ ಬಲ ನೀಡಲಿದೆ. ಪ್ರತಿಯೊಂದು ವರ್ಗಕ್ಕೂ ನ್ಯಾಯ ಒದಗಿಸುವ ದೂರದೃಷ್ಟಿ ಬಜೆಟ್ ಆಗಿದೆ. ಈ ಮೂಲಕ ಸರ್ಕಾರ ಎಲ್ಲಾ ವUðದವರ ಹಿತಕಾಯಲು ಬದ್ದ ಎಂದು ನಿರೂಪಿಸಿದೆ ಎಂದು ಅವರು ಹೇಳಿದ್ದಾರೆ.

೧೬ ವರ್ಷಗಳ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಕೂಡ ದೇಶದಲ್ಲಿಯೇ ದಿಟ್ಟ ಹೆಜ್ಜೆಯಾಗಿದ್ದು, ಮಕ್ಕಳ ಕೈಯಲ್ಲಿ ಮೊಬೈಲ್ ನಿಂದ ಉಂಟಾಗಿರುವ ಅನಾಹುತಗಳ ತಡೆಗೆ ಈ ಕ್ರಮ ಸಕಾಲಿಕವಾಗಿದೆ. ಮಕ್ಕಳ ಕೈಯಲ್ಲಿ ಮೊಬೈಲ್ ಬದಲಿಗೆ ಪುಸ್ತಕ ಕೊಡಿ ಎಂಬ ಆಂದೋಲನಕ್ಕೆ ಇದು ಸಹಕಾರಿಯಾಗಿದೆ.

ಸೌರ ಕೃಷಿ ಯೋಜನೆ ಎಂಬ ಹೊಸ ಕಾರ್ಯಕ್ರಮವನ್ನು ಘೋಷಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ರೈತರ ಕೃಷಿ ಪಂಪ್ ಸೆಟ್‌ಗಳಿಗೆ ಹಗಲು ವೇಳೆ ೭ ತಾಸು ವಿದ್ಯುತ್ ಪೂರೈಸುವ ಬದ್ಧತೆಯನ್ನು ಸಾಕಾರಗೊಳಿಸುತ್ತಿದ್ದಾರೆ.

ಕೃಷಿ ಪಂಪ್ ಸೆಟ್‌ಗಳಿಗೆ ೧೦ ಅಶ್ವಶಕ್ತಿವರೆಗೆ ಉಚಿತ ವಿದ್ಯುತ್ ಒದಗಿಸುವ ಯೋಜನೆಗೆ ೧೯,೨೯೦ ಕೋಟಿ ರೂ. ಮೀಸಲಿಡುವ ಮೂಲಕ ಮುಖ್ಯಮಂತ್ರಿಗಳು ರೈತರ ಕುರಿತಾಗಿ ಇರುವ ಬದ್ಧತೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ ಅಂಗನವಾಡಿ ಕೇಂದ್ರಗಳ ಸಮಗ್ರ ಅಭಿವೃದ್ಧಿಗಾಗಿ ಉನ್ನತ ಮಟ್ಟದ ಸಮಿತಿ ರಚಿಸುವ ನಿರ್ಧಾರ ಮಹತ್ವದ್ದಾಗಿದೆ. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿಯೇ ಪೌಷ್ಠಿಕ ಆಹಾರ ಒದಗಿಸುವ ಯೋಜನೆ ಪುನಃ ಆರಂಭಿಸುವುದು ತಾಯಿ ಮತ್ತು ಮಕ್ಕಳ ಆರೋಗ್ಯಕ್ಕೆ ದೊಡ್ಡ ಸಹಾಯವಾಗಲಿದೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಹೆಚ್ಚುವರಿಯಾಗಿ ಒಂದು ಜೋಡಿ ಸಮವಸ್ತ್ರ ನೀಡುವ ನಿರ್ಧಾರವೂ ಶ್ಲಾಘನೀಯ. ನೀರಾವರಿ, ಹಿಂದುಳಿದ ವರ್ಗ, ಶೋಷಿತರ ವರ್ಗಗಳಿಗೆ ನೆರವು ನೀಡಲಾಗಿದೆ.

ಅಬಕಾರಿ ಇಲಾಖೆಯಲ್ಲಿ ನಾವು ಕೈಗೊಂಡಿರುವ ಸುಧಾರಣೆಯ ಅಂಶಗಳನ್ನು ಬಜೆಟ್‌ನಲ್ಲಿ ಘೋಷಿಸಲಾಗಿದ್ದು, ಹೊಸ ಅಬಕಾರಿ ಕಾಯ್ದೆ ಜಾರಿ ಬಗ್ಗೆಯೂ ಉಲ್ಲೇಖಿಸಿದ್ದಾರೆ. ಸೋರಿಕೆ ತಡೆಗಟ್ಟಲು ಡಿಜಿಟಲ್ ಟ್ಯ್ರಾಕಿಂಗ್, ಡಿಜಿಟಲ್ ಲಾಕ್ ವ್ಯವಸ್ಥೆ, ದರ ನಿಗದಿಯ ಸ್ಲ್ಯಾಬ್‌ಗಳನ್ನು ತರ್ಕಬದ್ದಗೊಳಿಸಲು ೧೬ ರಿಂದ ೮ಕ್ಕೆ ಇಳಿಸುವುದಾಗಿ ಮುಖ್ಯಮಂತ್ರಿ ತಿಳಿಸಿದ್ದಾರೆ. ಈಗಾಗಲೇ ಇಲಾಖೆಯ ವರ್ಗಾವಣೆಯಲ್ಲಿ ಕೌನ್ಸ್ಲಿಂಗ್ ಜಾರಿಗೆ ತಂದಿದ್ದು ಇನ್ಮುಂದೆ ಅಬಕಾರಿ ಅಧೀಕ್ಷಕರು ಹಾಗೂ ಉಪ ಅಧೀಕ್ಷಕರುಗಳ ವರ್ಗಾವಣೆ ಕೂಡ ಆನ್‌ಲೈನ್ ಕೌನ್ಸ್ಲಿಂಗ್ ವ್ಯಾಪ್ತಿಗೆ ತರುವುದಾಗಿ ಹೇಳಿದ್ದಾರೆ. ಅಬಕಾರಿ ಇಲಾಖೆಯಲ್ಲಿ ಮತ್ತಷ್ಟು ಸುಧಾರಣೆ ಮತ್ತು ಪಾರದರ್ಶಕತೆ ತರಲು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.

ರಾಜ್ಯಾದ್ಯಂತ ಏತ ನೀರಾವರಿ, ಚೆಕ್‌ಡ್ಯಾಂ ಹಾಗೂ ಕೆರೆಗಳ ಪುನಶ್ಚೇತನದ ಕಾಮಗಾರಿಗಳಿಗೆ ಬರೋಬ್ಬರಿ ೧,೭೯೩ ಕೋಟಿ ರೂ. ಮೀಸಲಿಟ್ಟಿರುವುದು ಐತಿಹಾಸಿಕ ಹೆಜ್ಜೆ. ರಾಜ್ಯದ ಭವಿಷ್ಯದ ತಂತ್ರಜ್ಞಾನಕ್ಕೆ ಪೂರಕವಾಗಿ ೧೦ ಕೋಟಿ ರೂ. ವೆಚ್ಚದಲ್ಲಿ ‘ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್’ ಜಾರಿಗೊಳಿಸಲಾಗುತ್ತಿದೆ. ಕೃತಕ ಬುದ್ಧಿಮತ್ತೆಯಲ್ಲಿನ ತ್ವರಿತ ಪ್ರಗತಿಗಳು ಜಾಗತಿಕ ಉತ್ಪಾದನಾ ವ್ಯವಸ್ಥೆಗಳು ಮತ್ತು ಆರ್ಥಿಕ ರಚನೆಗಳನ್ನು ಮರುರೂಪಿಸುತ್ತಿವೆ ಎಂಬುದನ್ನು ಗುರುತಿಸಿ, ಕೃಷಿ, ಶಿಕ್ಷಣ, ಆಡಳಿತ ಮತ್ತು ಕೌಶಲ್ಯ ಅಭಿವೃದ್ಧಿಯಂತಹ ಪ್ರಮುಖ ಕ್ಷೇತ್ರಗಳಲ್ಲಿ ಎಐ ಅನ್ನು ಸಂಯೋಜಿಸಲು ಸರ್ಕಾರವು ಸಮಗ್ರ ಕಾರ್ಯತಂತ್ರವನ್ನು ರೂಪಿಸಿದೆ. ಕೃಷಿ ಕ್ಷೇತ್ರದಲ್ಲಿ: ರೈತರಿಗೆ ಹವಾಮಾನ, ಮಾರುಕಟ್ಟೆ ಬೆಲೆಗಳು, ಬೆಳೆ ಸಲಹೆ ಮತ್ತು ಸರ್ಕಾರಿ ಯೋಜನೆಗಳ ಮಾಹಿತಿಯನ್ನು ತ್ವರಿತವಾಗಿ ಮತ್ತು ವಿಶ್ವಾಸಾರ್ಹವಾಗಿ ಒದಗಿಸಲು ಸರ್ಕಾರವು ರೈತ ಸಂಪರ್ಕ ಕೇಂದ್ರವನ್ನು ಎಐ ತಂತ್ರಜ್ಞಾನದೊAದಿಗೆ ಅಭಿವೃದ್ಧಿಪಡಿಸಲಿದೆ. ಈ ಮೂಲಕ ಕೃಷಿಕ್ಷೇತ್ರದಲ್ಲಿಯೂ ಕ್ರಾಂತಿಕಾರಿ ಹೆಜ್ಜೆಯನ್ನಿರಿಸಲಾಗಿದೆ ಎಂದೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ.