ಮಡಿಕೇರಿ, ಮಾ. ೬: ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಗ್ರಾಮ ಗೌಡ ಸಮಿತಿ ಹಾಗೂ ಗೌಡ ಮಹಿಳಾ ಘಟಕ ಮಡಪ್ಪಾಡಿ ಅವರ ಸಹಯೋಗದಲ್ಲಿ ಅರೆಭಾಷೆ ಗ್ರಾಮೋತ್ಸವ-೨೦೨೬ ಕಾರ್ಯಕ್ರಮವು ತಾ. ೮ ರಂದು ಬೆಳಿಗ್ಗೆ ೯.೩೦ ಗಂಟೆಗೆ ಸುಳ್ಯ ತಾಲೂಕಿನ ಮಡಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಗೋಳ್ಯಾಡಿ ತಮ್ಮಪ್ಪ ಗೌಡ ರಂಗಮAದಿರದಲ್ಲಿ ನಡೆಯಲಿದೆ.
ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ನಿತ್ಯಾನಂದ ಬಳ್ಳಡ್ಕ ಅವರು ಚಾಲನೆ ನೀಡಲಿದ್ದಾರೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಪೂರ್ವಾಧ್ಯಕ್ಷ ಪಿ.ಸಿ. ಜಯರಾಮ, ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಡಪ್ಪಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ್ ಮುಳುಗಾಡು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ವಳಲಂಬೆ ಶ್ರೀಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ, ಸುಳ್ಯ ಗೌಡರ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ, ಮಡಪ್ಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಸದಾನಂದ ಬಲ್ಕಜೆ, ಇತರರು ಪಾಲ್ಗೊಳ್ಳಲಿದ್ದಾರೆ.
ನಂತರ ಬೆಳಿಗ್ಗೆ ೧೧ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮದ ಸಮಾರೋಪ ಸಮಾರಂಭ ಸಂಜೆ ೪ ಗಂಟೆಗೆ ನಡೆಯಲಿದೆ.
ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಬೆಳ್ತಂಗಡಿ ಪ್ರಸನ್ನ ಕಾಲೇಜಿನ ಉಪನ್ಯಾಸಕರಾದ ಸುಶ್ಮಿತಾ ಆದಿತ್ಯ ಚಿದ್ಗಲ್, ಸುಳ್ಯ ಗೌಡರ ಯುವ ಸೇವಾ ಸಂಘದ ಸ್ಥಾಪಕಾಧ್ಯಕ್ಷ ನಿತ್ಯಾನಂದ ಮುಂಡೋಡಿ ಇತರರು ಪಾಲ್ಗೊಳ್ಳಲಿದ್ದಾರೆ.