ಶನಿವಾರಸಂತೆ, ಮಾ. ೭: ಕೊಡಗು ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕ ಹಾಗೂ ಇತರೆ ಕೂಲಿ ಕಾರ್ಮಿಕರ ಸಂಘ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸಹಯೋಗದಲ್ಲಿ ಕಾನೂನು ಅರಿವು ಕಾರ್ಯಕ್ರಮವು ತಾ. ೮ ರಂದು (ಇಂದು) ಬೆಳಿಗ್ಗೆ ೧೧ ಗಂಟೆಗೆ ಶನಿವಾರಸಂತೆಯ ಹೊಸೂರು ರಸ್ತೆಯ ಸಂಘದ ಆವರಣದಲ್ಲಿ ನಡೆಯಲಿದೆ.

ಸಂಘದ ಗೌರವ ಅಧ್ಯಕ್ಷ ಎಂ.ಜೆ.ವಿಠಲ್ ನಾಗರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಡಾ.ಮಂತರ್ ಗೌಡ, ಮಾಜಿ ಶಾಸಕ ಎಂ.ಪಿ. ಅಪ್ಪಚ್ಚುರಂಜನ್ ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಜಿ.ಎಂ.ಕಾAತರಾಜ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಕಾರ್ಮಿಕಾಧಿಕಾರಿ ಕಾವೇರಿ ಇಲಾಖಾ ಮಾಹಿತಿ ನೀಡಲಿದ್ದು, ತಾಲೂಕು ವಕೀಲರ ಸಂಘದ ಅಧ್ಯಕ್ಷ ಅಭಿಮನ್ಯುಕುಮಾರ್, ಪ್ರಧಾನ ಕಾನೂನು ನೆರವು ಅಭಿರಕ್ಷಕ ಎಂ.ವೈ. ಮೈಮುನ, ಸಹಾಯಕ ಕಾನೂನು ನೆರವು ಅಭಿರಕ್ಷಕರಾದ ಕೆ.ಪಿ.ಪ್ರತಾಪ್ ಹಾಗೂ ಮಂಜುಳಾ ಕಾನೂನು ಅರಿವು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ವೃತ್ತನಿರೀಕ್ಷಕ ಕೃಷ್ಣರಾಜ್, ರಾಜ್ಯ ಕಾರ್ಮಿಕ ಮುಖಂಡ ನಾಪಂಡ ಮುತ್ತಪ್ಪ, ಕೆಡಿಪಿ ಸದಸ್ಯ ಪಿ.ಕೆ.ಗಂಗಾಧರ್, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.