ಶ್ರೀಮಂಗಲ, ಮಾ. ೮: ಬಾಳೆಲೆ ವ್ಯಾಪ್ತಿಯಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡುವ ಮಹತ್ವಕಾಂಕ್ಷೆಯಿAದ ರೂ. ೨೭.೨೩ ಕೋಟಿ ವೆಚ್ಚದಲ್ಲಿ ೬೬/೧೧ ಕೆವಿಎ ಸಾಮರ್ಥ್ಯದ ವಿದ್ಯುತ್ ವಿತರಣಾ ಕೇಂದ್ರದ ಸ್ಥಾಪನೆಗೆ ಭೂಮಿ ಪೂಜೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕ್ಷೇತ್ರಾದ್ಯಂತ ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಲು ಸುಮಾರು ರೂ.೨೦೦ ಕೋಟಿಗೂ ಅಧಿಕ ಅನುದಾನವನ್ನು ಕರ್ನಾಟಕ ಸರಕಾರ ನೀಡಿದ್ದು, ಹಂತ ಹಂತವಾಗಿ ಕ್ಷೇತ್ರ ವ್ಯಾಪಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತಿದೆ. ಬಾಳೆಲೆಯಲ್ಲಿ ಸ್ಥಾಪನೆಗೊಳ್ಳಲಿರುವ ಈ ವಿದ್ಯುತ್ ವಿಚಾರಣಾ ಕೇಂದ್ರದಿAದ ಈ ಭಾಗದ ರೈತರಿಗೆ ಹಾಗೂ ಸಾರ್ವಜನಿಕರಿಗೆ ಗುಣಮಟ್ಟದ ಹಾಗೂ ನಿರಂತರ ವಿದ್ಯುತ್ ಪೂರೈಕೆ ಆಗಲು ಸಹಕಾರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭ ರಾಜ್ಯ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಚೆಪ್ಪುಡಿರ ಅರುಣ್ ಮಾಚಯ್ಯ, ಚೀಫ್ ಎಲೆಟ್ರಿಕಲ್ ಆಫೀಸರ್ ತೀತಿರ ರೋಷನ್ ಅಪ್ಪಚ್ಚು, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೀದೇರಿರ ನವೀನ್, ತಾಲೂಕು ಬಗರ್ ಹುಕುಂ ಅಧ್ಯಕ್ಷ ಅಣ್ಣಳಮಾಡ ಲಾಲಾ ಅಪ್ಪಣ್ಣ, ಜಿಲ್ಲಾ ಕಾಂಗ್ರೆಸ್ ವಕ್ತಾರ ಆಪಟ್ಟಿರ ಟಾಟು ಮೊಣ್ಣಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಾನಂಡ ಪ್ರತ್ಯು, ವಲಯ ಅಧ್ಯಕ್ಷ ಕೋದಂಡ ಸೋಮಣ್ಣ, ಪಂಚಾಯಿತಿ ಸದಸ್ಯ ವಿನು ಉತ್ತಪ್ಪ, ನಿಟ್ಟೂರು ವಲಯ ಅಧ್ಯಕ್ಷ ಪವನ್, ರಂಜಿ, ಅಚ್ಚುತ್ತ್, ಅಜ್ಜಿಕುಟ್ಟಿರ ಗಿರೀಶ್, ಹರೀಶ್ ಪೂವಯ್ಯ, ಸಿದ್ದು ನಾಚಪ್ಪ, ಮನು, ಇಲಾಖೆಯ ಅಧಿಕಾರಿಗಳು ಚೋಂದಮ್ಮ ಹಾಗೂ ಪ್ರಮುಖರು ಉಪಸ್ಥಿತರಿದ್ದರು.