ಮಡಿಕೇರಿ, ಮಾ. ೮: ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಾಮಾನ್ಯ ಜ್ಞಾನ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ಅಭ್ಯಾಸ ಮಾಡಬೇಕು ಎಂದು ಜಿಲ್ಲೆಯ ದಾನಿ ಕೈಬುಲಿರ ಪಾರ್ವತಿ ಬೋಪಯ್ಯ ಕರೆ ನೀಡಿದರು.
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಹುದಿಕೇರಿ ಲಿಟಲ್ ಫ್ಲವರ್ಸ್ ಶಾಲೆ ಸಂಯುಕ್ತ ಆಶ್ರಯದಲ್ಲಿ ನಡೆದ ಕೈಬುಲಿರ ಬೋಪಯ್ಯ ಸ್ಮಾರಕ ನಡೆದ ದತ್ತಿ ಕಾರ್ಯಕ್ರಮದಲ್ಲಿ ೨೦೨೪-೨೫ನೇ ಸಾಲಿನ ೧೦ನೇ ತರಗತಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಅತಿ ಹೆಚ್ಚು ಅಂಕ ಪಡೆದ ಸೋಮವಾರಪೇಟೆ ತಾಲೂಕಿನ ನಿಡ್ತ ಗ್ರಾಮದ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ.ಎಸ್. ಪೂರ್ವಿಕ ಅವರನ್ನು ಸನ್ಮಾನಿಸಿ ಮಾvನಾಡಿದರು.
ವಿದ್ಯಾರ್ಥಿಗಳ ಪಾಲಿಗೆ ಶಿಕ್ಷಕರು ಶಿಲ್ಪಿಗಳಂತೆ ಪೋಷಕರು ಒಂದು ಕಲ್ಲಿನ ರೀತಿಯಲ್ಲಿರುವ ವಿದ್ಯಾರ್ಥಿಯನ್ನು ಶಾಲೆಗೆ ಒಪ್ಪಿಸಿದ ಸಂದರ್ಭದಲ್ಲಿ ಅಧ್ಯಾಪಕರು ಅವರನ್ನು ತಿದ್ದಿ ತೀಡಿ ಉತ್ತಮವಾದ ಶಿಲ್ಪವನ್ನಾಗಿ ಮಾಡುತ್ತಾರೆ. ಶಿಕ್ಷಕರ ಈ ಸೇವೆ ವಿದ್ಯಾರ್ಥಿಗಳು ಮರೆಯಕೂಡದು ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಶೈಕ್ಷಣಿಕ ವಿದ್ಯೆಯೊಂದಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ಕೂಡ ಗುರುತಿಸಿ ಬೆಳೆಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶ್ರಮ ಪಡಬೇಕು. ನಮ್ಮಲ್ಲಿರುವ ಪ್ರತಿಭೆಗೆ ಸರಿಯಾದ ಮಾರ್ಗದರ್ಶನ ದೊರೆತರೆ ಹಳ್ಳಿಗಾಡಿನಿಂದ ಬಂದ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟçಮಟ್ಟದಲ್ಲಿ ಹೆಸರು ಮಾಡಲು ಸಾಧ್ಯವಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಲಿಟಲ್ ಫ್ಲವರ್ಸ್ ಶಾಲೆಯ ಕಾರ್ಯದರ್ಶಿ ಆಶಾ ಜ್ಯೋತಿ ಸತೀಶ್ ಮಾತನಾಡಿದರು. ದತ್ತಿ ಆಶಯದಂತೆ ಶಿಕ್ಷಣದ ಅವಶ್ಯಕತೆಯ ಕುರಿತು ಮಾತನಾಡಿದ ಪೊನ್ನಂಪೇಟೆ ಕೆ.ಪಿ.ಎಸ್ ಪ್ರೌಢಶಾಲೆಯ ಅಧ್ಯಾಪಕಿ ನಳಿನಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾಭ್ಯಾಸದ ಅವಶ್ಯಕತೆ ತುಂಬಾ ಇದೆ, ಕಲಿತಷ್ಟು ಸಾಲುವುದಿಲ್ಲ. ವಿದ್ಯಾರ್ಥಿಗಳು ಪಠ್ಯೇತರ ವಿಚಾರಗಳನ್ನು ಕೂಡ ಅಭ್ಯಾಸ ಮಾಡುವ ಅಗತ್ಯವಿದೆ ಎಂದರು.
ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೋಳೆರ ದಯಾ ಚಂಗಪ್ಪ ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕುಲ್ಲಚಂದ ಪ್ರಮೋದ್ ಗಣಪತಿ, ಶ್ರೀಮಂಗಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಉಳುವಂಗಡ ಕಾವೇರಿ ಉದಯ, ಶಾಲಾ ಮುಖ್ಯ ಶಿಕ್ಷಕಿ ಕೆ.ಎಲ್ ರಶ್ಮಿ ಮಾತನಾಡಿದರು. ೧೦ನೇ ತರಗತಿಯಲ್ಲಿ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿ ಪೂರ್ವಿಕ ಅವರನ್ನು ಸನ್ಮಾನಿಸಲಾಯಿತು. ದತ್ತಿ ದಾನಿಗಳಾದ ಕೈಬುಲಿರ ಪಾರ್ವತಿ ಬೋಪಯ್ಯ ರವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.
ಸರ್ವೇ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಹುದಿಕೇರಿ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷÀ ಬಾನಂಗಡ ಅರುಣ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಕಿ ಪವಿತ್ರ ಕಾರ್ಯಕ್ರಮವನ್ನು ನಿರೂಪಿಸಿದರು, ನವ್ಯ ಸ್ವಾಗತಿಸಿ, ಪಾರ್ವತಿ ವಂದಿಸಿದರು.