ಸೋಮವಾರಪೇಟೆ, ಮಾ. ೮: ಬೆಳಕು ಸಂಸ್ಥೆ ಹಾಗೂ ತನುಶ್ರೀ ಸಂಸ್ಥೆಯ ಸಹಯೋಗದಲ್ಲಿ ದಾವಣಗೆರೆಯಲ್ಲಿ ನಡೆದ ರಾಷ್ಟçಮಟ್ಟದ ಕಲಾ ಸಮ್ಮೇಳನದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿನ ಸೇವೆಯನ್ನು ಪರಿಗಣಿಸಿ ಇಲ್ಲಿನ ಪಟ್ಟಣ ಪಂಚಾಯಿತಿ ಮಾಜಿ ಸದಸ್ಯೆ, ವಿವಿಧ ಸಂಘ-ಸAಸ್ಥೆಗಳಲ್ಲಿ ತೊಡಗಿಸಿಕೊಂಡಿರುವ ಶೀಲಾ ಡಿಸೋಜ ಅವರಿಗೆ ರಾಷ್ಟçಮಟ್ಟದ ‘ಕಾಯಕ ಕಣ್ಮಣಿ" ಪ್ರಶಸ್ತಿ ಪ್ರದಾನ ಮಾಡಲಾಯಿತು.

ದಾವಣಗೆರೆಯ ಕುವೆಂಪು ಕಲಾ ಮಂದಿರದ ಪ್ರೊ. ಎಸ್. ಬಿ. ರಂಗನಾಥ್ ವೇದಿಕೆಯಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು. ತನುಶ್ರೀ ಸಂಸ್ಥೆಯ ಅಧ್ಯಕ್ಷ ಎಸ್. ರಾಜು ಸುಲೇನಹಳ್ಳಿ, ಬೆಳಕು ಸಂಸ್ಥೆಯ ಅಧ್ಯಕ್ಷ ಅಣ್ಣಪ್ಪ ಮೇಟಿ ಗೌಡ ಸೇರಿದಂತೆ ಸಾಹಿತಿಗಳು, ಚಿತ್ರ ಕಲಾವಿದರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಪ್ರಶಸ್ತಿ ಪ್ರದಾನ ಮಾಡಿದರು.

ಶೀಲಾ ಡಿಸೋಜಾ ಅವರು ಪ್ರಸ್ತುತ ಸೋಮವಾರಪೇಟೆ ತಾಲೂಕಿನ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರಾಗಿ, ಓಎಲ್‌ವಿ ಚರ್ಚ್ನ ಸಲಹಾ ಸಮಿತಿ ಕಾರ್ಯದರ್ಶಿಯಾಗಿ, ಸ್ಕೌಟ್ ಮತ್ತು ಗೈಡ್ ಸಂಸ್ಥೆಯ ತಾಲೂಕು ಉಪಾಧ್ಯಕ್ಷೆಯಾಗಿ, ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.