ವೀರಾಜಪೇಟೆ, ಮಾ.೯: ವೀರಾಜಪೇಟೆಯ ಮಗ್ಗುಲ ಗ್ರಾಮದಲ್ಲಿರುವ ಲಿಟಲ್ ಸ್ಕಾಲರ್ಸ್ ಅಕಾಡೆಮಿಯಲ್ಲಿ ರಾಷ್ಟಿçÃಯ ವಿಜ್ಞಾನ ದಿನಾಚರಣೆಯನ್ನು ಆಚರಿಸಲಾಯಿತು.

ರಾಷ್ಟಿçÃಯ ವಿಜ್ಞಾನ ದಿನವನ್ನು ಅಧ್ಯಯನ ಹಬ್ಬ ಎನ್ನುವ ದೃಷ್ಟಿಕೋನದಿಂದ ಆಚರಿಸಲಾಯಿತು. ಶಾಲಾ ವಿದ್ಯಾರ್ಥಿಗಳು ವಿಜ್ಞಾನ ದಿನಾಚರಣೆಯ ಪ್ರಯುಕ್ತ ವಿಜ್ಞಾನ ಹಾಗೂ ಗಣಿತಕ್ಕೆ ಸಂಬAಧಿಸಿದ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವೀರಾಜಪೇಟೆಯ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ರಸಾಯನಶಾಸ್ತç ವಿಭಾಗದ ಪ್ರಾಧ್ಯಾಪಕಿ ನಿಶಾ ಅವರು ಮಾತನಾಡಿ, ರಾಷ್ಟಿçÃಯ ವಿಜ್ಞಾನ ದಿನಾಚರಣೆಯ ಪ್ರಯುಕ್ತ ಇಂದು ವಿದ್ಯಾರ್ಥಿಗಳು ವಿಜ್ಞಾನ ಮಾದರಿಗಳನ್ನು ಉತ್ತಮವಾಗಿ ತಯಾರಿಸಿ, ತಾವು ತಯಾರಿಸಿದ ಮಾದರಿಗಳಿಗೆ ಸೂಕ್ತವಾದ ವಿವರಣೆಯನ್ನು ಸಹ ನೀಡಿದ್ದಾರೆ. ವಿಜ್ಞಾನವು ನಿಂತ ನೀರಾಗದೇ ಸಂಶೋಧನಾ ಪ್ರವೃತ್ತಿಗೆ ಒಳಪಟ್ಟಿದೆ. ವಿಜ್ಞಾನವು ರಾಷ್ಟçದ ಪ್ರಗತಿಗೆ ಬುನಾದಿಯಾಗಿದೆ ಎಂದು ಹೇಳಿದರು.

ಶಾಲಾ ವಿದ್ಯಾರ್ಥಿ ನಾಯಕಿ ಶಿಖಾ ಮುತ್ತಮ್ಮ ಮಾತನಾಡಿ, ಶಾಲೆಯಲ್ಲಿ ವಿನೂತನ ಕಾರ್ಯಕ್ರಮಗಳು ನಡೆಯುತ್ತಿದ್ದು ಹೊಸ ಹೊಸ ವಿಚಾರಗಳನ್ನು ಅರಿತುಕೊಳ್ಳಲು ಸಾಧ್ಯವಾಗಿದ್ದು, ಜ್ಞಾನದ ಬೆಳವಣಿಗೆ ಆಗುತ್ತಿದೆ ಎಂದು ಹೇಳಿದರು. ವಿದ್ಯಾರ್ಥಿನಿ ಅಸ್ಮಿತಾ ಮಾತನಾಡಿ, ಶಿಕ್ಷಕರು ಹಾಗೂ ಪೋಷಕರ ಸಹಕಾರದಿಂದ ವಿಜ್ಞಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುತ್ತಿದ್ದು ಹೊಸ ಅರಿವನ್ನು ಪಡೆಯಲು ಉತ್ತಮ ಅವಕಾಶ ದೊರೆತಂತಾಗಿದೆ ಎಂದರು.

ಶಾಲಾ ಮುಖ್ಯ ಶಿಕ್ಷಕಿ ಮೀರಾ ಪೂಣಚ್ಚ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲಿ ಎನ್ನುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ. ವಿದ್ಯಾರ್ಥಿಗಳು ಎಲ್ಲಾ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಇದರ ಸದುಪಯೋಗವನ್ನು ಪಡೆದುಕೊಳ್ಳಿ ಎಂದು ಕಿವಿಮಾತನ್ನು ಹೇಳಿದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ವಿವಿಧ ಶೈಲಿಯ ಆಕರ್ಷಕವಾದ ವಿಜ್ಞಾನ ಮಾದರಿಗಳನ್ನು ತಯಾರಿಸಿದ್ದರು. ಅತಿಥಿಗಳು ಹಾಗೂ ಶಿಕ್ಷಕರು ವಿದ್ಯಾರ್ಥಿಗಳು ನಿರ್ಮಿಸಿದ ಮಾದರಿಗಳಿಗೆ ಪ್ರಶಂಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥೆ ಪೂಜಾ ಸಜೇಶ್, ಕಾರ್ಯದರ್ಶಿ ಪ್ರತಿಮಾ, ಶಿಕ್ಷಕರು, ಸಿಬ್ಬಂದಿಗಳು, ಪೋಷಕರು ಉಪಸ್ಥಿತರಿದ್ದರು.