ನಾಪೋಕ್ಲು, ಮಾ. ೯: ದೇವರಕೊಲ್ಲಿ ಕಂಟೈನರ್ ಲಾರಿ ಮತ್ತು ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದ ಪ್ರಯಾಣಿಕರಿಗೆ ತೀವ್ರ ಗಾಯವಾದ ಘಟನೆ ಸಂಭವಿಸಿದೆ.

ಮೈಸೂರು-ಮಂಗಳೂರು ರಾಷ್ಟಿçÃಯ ಹೆದ್ದಾರಿಯಲ್ಲಿಯ ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಸಮೀಪದ ತಿರುವಿನಲ್ಲಿ ಕಂಟೈನರ್ ಲಾರಿ ಮತ್ತು ಸ್ವಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.

ಮಂಗಳೂರಿನಿAದ ಮಡಿಕೇರಿ ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿ ಚಾಮುಂಡೇಶ್ವರಿ ದೇವಸ್ಥಾನದ ಬಳಿಯ ತಿರುವು ತಲುಪಿದಾಗ ಈ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಸುಳ್ಯದತ್ತ ತೆರಳುತ್ತಿದ್ದ ಸ್ವಿಫ್ಟ್ ಕಾರು ತಿರುವಿನಲ್ಲಿ ಚಾಲಕನ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ನಿಯಂತ್ರಣ ತಪ್ಪಿ, ನೇರವಾಗಿ ಲಾರಿಯ ಹಿಂಬದಿಯ ಚಕ್ರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯ ಬರೆಗೆ ಡಿಕ್ಕಿಯಾಗಿ ಕಾರಿನ ಮುಂಭಾಗ ಸಂಪೂರ್ಣವಾಗಿ ಜಖಂಗೊAಡಿದೆ.ಗಾಯಾಳುಗಳನ್ನು ತಕ್ಷಣವೇ ಆಂಬ್ಯುಲೆನ್ಸ್ ಮೂಲಕ ಸುಳ್ಯದ ಆಸ್ಪತ್ರೆಗೆ ದಾಖಲಿಸಲಾಗಿದೆ.