ಮಡಿಕೇರಿ, ಮಾ.೧೦: ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ ತಾ. ೧೨ ರಂದು (ನಾಳೆ) ಮಧ್ಯಾಹ್ನ ೩ ಗಂಟೆಗೆ ಮಡಿಕೇರಿ ಕೊಡವ ಸಮಾಜ ಕಲ್ಚರಲ್ ಮತ್ತು ಸೋಶಿಯಲ್ ವೆಲ್‌ಫೇರ್ ಸೆಂಟರ್ ನಲ್ಲಿ “೫ ನೇ ಕೊಡವ ಪುಸ್ತಕ ಪತ್ತಾಯ” ಕಾರ್ಯಕ್ರಮ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಅಜ್ಜಿನಿಕಂಡ ಸಿ.ಮಹೇಶ್ ನಾಚಯ್ಯ ಅವರು ಉದ್ಘಾಟಿಸಲಿದ್ದಾರೆ. ಮಡಿಕೇರಿ ಕೊಡವ ಸಮಾಜ ಕಲ್ಚರಲ್ ಮತ್ತು ಸೋಶಿಯಲ್ ವೆಲ್‌ಫೇರ್ ಸೆಂಟರ್ ಅಧ್ಯಕ್ಷರಾದ ಮುಳ್ಳಂಡ ರತ್ತು ಚಂಗಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಶಾಲಾ ಶಿಕ್ಷಣ ಇಲಾಖೆಯ ಉಪ ಯೋಜನಾ ಸಮನ್ವಯಾಧಿಕಾರಿ ಅಜ್ಜಿಕುಟ್ಟಿರ ಸೌಮ್ಯ ಪೊನ್ನಪ್ಪ, ಮಡಿಕೇರಿ ಕೊಡವ ಸಮಾಜದ ಕಾರ್ಯದರ್ಶಿ ಬೊಪ್ಪಂಡ ಸರಳ ಕರುಂಬಯ್ಯ ಹಾಗೂ ಬರಹಗಾರ್ತಿ ಐಚಂಡ ರಶ್ಮಿ ಮೇದಪ್ಪ ಅವರು ಭಾಗವಹಿಸಲಿದ್ದಾರೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರು ಹಾಗೂ ಮಡಿಕೇರಿ ಕೊಡವ ಸಮಾಜ ಕಲ್ಚರಲ್ ಮತ್ತು ಸೋಶಿಯಲ್ ವೆಲ್‌ಫೇರ್ ಸೆಂಟರ್ ಸದಸ್ಯರುಗಳು ಭಾಗವಹಿಸಲಿದ್ದಾರೆ ಎಂದು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.