ನಾಪೋಕ್ಲು, ಮಾ. ೧೦: ಸಮೀಪದ ವಾಟೆಕಾಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪದವಿ ದಿನಾಚರಣೆ ಹಾಗೂ ಪೋಷಕರ ಸಭೆ ನಡೆಯಿತು. ಹೊದ್ದೂರು ಗ್ರಾಮ ಪಂಚಾಯಿತಿ ವಾಟೆಕಾಡು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿಯಿಂದ ತೇರ್ಗಡೆ ಹೊಂದಿದ ಮಕ್ಕಳಿಗೆ ಪದವಿ ದಿನವನ್ನು ಮತ್ತು ಪೋಷಕರ ಸಭೆಯ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷ ಹೆಚ್. ಸುರೇಶ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಹೊದ್ದೂರು ಗ್ರಾಮ ಪಂಚಾಯಿತಿ ಪಿಡಿಓ ವತ್ಸಲಾ ಕುಮಾರಿ ಉಪಸ್ಥಿತರಿದ್ದು, ಮಕ್ಕಳಿಗೆ ಪದಕ ಹಾಗೂ ಪ್ರಮಾಣ ಪತ್ರವನ್ನು ವಿತರಿಸಿದರು.

ಈ ಸಂದರ್ಭ ಮಕ್ಕಳು ವಿಜ್ಞಾನದ ಮಾದರಿಗಳನ್ನು ತಯಾರಿಸಿ ಗಮನ ಸೆಳೆದರು. ಉತ್ತಮ ವಿಜ್ಞಾನ ಮಾದರಿ ತಯಾರಿಸಿದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ವೇದಿಕೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಎಸ್‌ಡಿಎಂಸಿ ಸದಸ್ಯ ಸುಬ್ರಮಣಿ ವಿ.ಎಂ, ಮುಖ್ಯ ಶಿಕ್ಷಕಿ ದೇಚಮ್ಮ ಇದ್ದರು. ಶಿಕ್ಷಕಿ ಶ್ವೇತಾ ಸ್ವಾಗತಿಸಿದರು. ಸೌಮ್ಯ ಕಾರ್ಯಕ್ರಮದಲ್ಲಿ ನಿರೂಪಿಸಿ, ವಂದಿಸಿದರು.