ಪೊನ್ನಂಪೇಟೆ, ಮಾ. ೧೦: ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಇದರ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರಾಗಿ ಹೆಚ್.ಆರ್. ಜಗದೀಶ್ ಅವರನ್ನು ನೇಮಕ ಮಾಡಲಾಗಿದೆ.

ಪೊನ್ನಂಪೇಟೆ ಕರ್ನಾಟಕ ಪಬ್ಲಿಕ್ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಹಾಗೂ ಸಮಿತಿಯ ರಾಜ್ಯಾಧ್ಯಕ್ಷ ಡಾ. ಕೆ.ಎಂ. ಸಂದೇಶ್ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರನ್ನು ನೇಮಕ ಮಾಡಿದರು.

ನಂತರ ಮಾತನಾಡಿದ ಸಂದೇಶ್, ಕೊಡಗು ಜಿಲ್ಲೆಯಲ್ಲಿ ನಿವೇಶನ ರಹಿತರಾದ ನಮ್ಮ ಸಮುದಾಯದ ಜನಗಳಿಗೆ ಮುಂದಿನ ದಿನಗಳಲ್ಲಿ ಸರ್ಕಾರಿ ಜಾಗಗಳನ್ನು ಗುರುತಿಸಿ, ಆ ಬಗ್ಗೆ ಸರ್ಕಾರಕ್ಕೆ ಮಾಹಿತಿ ಒದಗಿಸಿಕೊಟ್ಟು, ಸರ್ಕಾರದ ವತಿಯಿಂದ ಮನೆಗಳನ್ನು ನಿರ್ಮಿಸಿಕೊಡುವಂತೆ ಒತ್ತಾಯಿಸಿ ಹೋರಾಟ ಮಾಡಲಾಗುವುದು ಎಂದರು.

ಈ ಸಂದರ್ಭ ಸಮಿತಿಯ ಪ್ರಮುಖರುಗಳಾದ ಸುರೇಶ್, ರಾಜು, ಪುಷ್ಪ, ಮುತ್ತಣ್ಣ, ಮಣಿ, ಗೋಪಾಲ್, ಮಂಜುನಾಥ್, ಛÀಲಪತಿ, ಗೋವಿಂದ ರಾಜು, ಸುಬ್ರಮಣಿ ಇನ್ನಿತರರು ಇದ್ದರು. ಎಸ್.ಟಿ. ಗಿರೀಶ್ ಸ್ವಾಗತಿಸಿ, ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.