ಮಡಿಕೇರಿ ಮಾ.೧೦: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ.೧೧ ರಂದು (ಇಂದು) ಬೆಳಿಗ್ಗೆ ೧೧ ಗಂಟೆಯಿAದ ಮಧ್ಯಾಹ್ನ ೧ ಗಂಟೆಯವರೆಗೆ ವೀರಾಜಪೇಟೆ ತಾಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ವಿತರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡೆವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.

ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. ೦೮೨೭೨-೨೯೫೨೯೭ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.