ವೀರಾಜಪೇಟೆ, ಮಾ. ೧೨: ವೀರಾಜಪೇಟೆ ತಾಲೂಕಿನ ಕೆದಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಕೊಟ್ಟೋಳಿ ಗ್ರಾಮದ ಶ್ರೀ ಧಾರಾ ಮಹೇಶ್ವರ ದೇವಸ್ಥಾನಕ್ಕೆ ವೈಯಕ್ತಿಕ ರೂ. ೧ ಲಕ್ಷ ದೇಣಿಗೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ನೀಡಿದರು. ಶ್ರೀ ಧಾರಾಮಹೇಶ್ವರ ದೇವಾಲಯದಲ್ಲಿ ಶಾಸಕರು ದೇವರಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದರು. ಈ ಹಿಂದೆ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಸಂದರ್ಭ ದೇವಾಲಯಕ್ಕೆ ಭೇಟಿ ನೀಡಿದ್ದ ಸಂದರ್ಭ ದೇವಸ್ಥಾನ ಅಭಿವೃದ್ಧಿಗಾಗಿ ವೈಯಕ್ತಿಕ ಸಹಾಯ ಮಾಡುವ ಭರವಸೆ ನೀಡಿದ್ದರು. ಈ ಸಂಬAಧ ರೂ.೧ ಲಕ್ಷ ಮೊತ್ತದ ಚೆಕ್‌ಅನ್ನು ಆಡಳಿತ ಮಂಡಳಿಗೆ ನೀಡಿದರು. ಈ ಸಂದರ್ಭ ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಲಯ ಅಧ್ಯಕ್ಷ ನಡಿಕೇರಿಯಂಡ ಮಹೇಶ್, ಕೆಡಿಪಿ ಸದಸ್ಯ ಪ್ರಶಾಂತ್ ಉತ್ತಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಜಪ್ರಿ ಉತ್ತಪ್ಪ, ಪಂಚಾಯಿತಿ ಮಾಜಿ ಸದಸ್ಯರಾದ ಮಿತಲ್ತಂಡ ಇಸ್ಮಾಯಿಲ್, ಪವಿತ್ರ, ವನಿತಾ, ತಾಯಮ್ಮ, ಬೂತ್ ಅಧ್ಯಕ್ಷ ಮಾಳೇಟಿರ ಸುಬ್ಬಯ್ಯ, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.