ವೀರಾಜಪೇಟೆ: ವಿದ್ಯಾರ್ಥಿ ಜೀವನವು ಹಲವು ಒತ್ತಡಗಳಿಂದ ನಿರ್ಮಾಣವಾಗುತ್ತಿದೆ ಎನ್ನುವುದು ಸುಳ್ಳು. ಕಲಿಕೆ ಮತ್ತು ಸಾಮಾಜಿಕ ಚಿಂತನೆಯನ್ನು ಸಮಾನವಾಗಿ ಕಾಣುವಂತಾಗಬೇಕು ಎಂದು ಲಿಟಲ್ ಸ್ಕಾಲರ್ಸ್ ಅಕಾಡೆಮಿಯ ಮುಖ್ಯಸ್ಥರಾದ ಪೂಜಾ ಸಜೇಶ್ ಹೇಳಿದರು.
ಕೊಡಗು ವಿಶ್ವವಿದ್ಯಾನಿಲಯ, ರಾಷ್ಟಿçÃಯ ಸೇವಾ ಯೋಜನೆ ಘಟಕ, ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಕಲ್ತೋಡು ನಾಂಗಾಲ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ವಾರ್ಷಿಕ ವಿಶೇಷ ಶಿಬಿರ ೨೦೨೫-೨೬ ಗೆ ಚಾಲನೆ ನೀಡಿ ಮಾತನಾಡಿ ಪೂಜಾ ಸಜೇಶ್ ಅವರು ಕಲಿಕೆಯೊಂದಿಗೆ ಸಮಾಜದ ಆಗು ಹೋಗುಗಳಿಗೆ ಪ್ರತಿಸ್ಪಂದಿಸುವ ಗುಣಗಳನ್ನು ವಿದ್ಯಾರ್ಥಿ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನ ಒತ್ತಡದಲ್ಲಿದೆ ಎಂದು ಹೇಳುವುದು ಸುಳ್ಳು. ಒತ್ತಡಗಳನ್ನು ನಾವು ಸೃಷ್ಟಿ ಮಾಡಿಕೊಳ್ಳುವುದು. ನಿರ್ದಿಷ್ಟವಾದ ಗುರಿ ಹೊಂದಿದಲ್ಲಿ ಒತ್ತಡದ ಗೊಂದಲದಿAದ ಹೊರಬರಲು ಸಾಧ್ಯ ಎಂದರು.
ಶಿಬಿರದ ಧ್ವಜರೋಹಣಗೈದು ಮಾತನಾಡಿದ ಬಿಟ್ಟಂಗಾಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮೂಕಚಂಡ ಪ್ರಸನ್ನ ಸುಬ್ಬಯ್ಯ, ಉತ್ತಮ ಸಮಾಜ ನಿರ್ಮಾಣಕ್ಕೆ ನಿಸ್ವಾರ್ಥ ಸೇವೆ ಮುಖ್ಯ ಎಂದು ಹೇಳಿದರು.
ಸಂತ ಅನ್ನಮ್ಮ ದೇವಾಲಯದ ಪ್ರಧಾನ ಧರ್ಮಗುರು ಮತ್ತು ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕರಾದ ಜೇಮ್ಸ್ ಡೊಮಿನಿಕ್ ಮಾತನಾಡಿ ಗ್ರಾಮಗಳಲ್ಲಿ ವಾರ್ಷಿಕ ಶಿಬಿರಗಳ ಆಯೋಜನೆಯಿಂದಾಗಿ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು ಪ್ರಯತ್ನಿಸಬಹುದಾಗಿದೆ ಎಂದರು.
ಶಿಬಿರದ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿದ ಸಂತ ಅನ್ನಮ್ಮ ಪದವಿ ಕಾಲೇಜಿನ ವ್ಯವಸ್ಥಾಪಕರಾದ ಮದಲೈ ಮುತ್ತು, ಸ್ವಾರ್ಥ ವ್ಯಕಿತ್ವ ಬಿಟ್ಟು ನಿಸ್ವಾರ್ಥ ಸೇವೆಗೆ ಅಣಿಯಾಗಬೇಕು. ಸಮಾಜ ರೂಪಿಸಲು ಏಕೈಕ ವ್ಯಕ್ತಿಯಿಂದ ಸಾಧ್ಯವಾಗುವುದಿಲ್ಲ. ಬದಲಿಗೆ ಸಹೋದರ ಭಾವ, ಸಂಬAಧಗಳು, ಬಾಂಧವ್ಯದಿAದ ಮಾತ್ರ ಉತ್ತಮ ಸಮಾಜ ರೂಪಿಸಲು ಸಾಧ್ಯ ಎಂದು ಹೇಳಿದರು.
ಕಲ್ತೋಡು ನಾಂಗಾಲ ಸ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷೆ ಆಶಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಶಾಲಾ ಸ್ಥಳ ದಾನಿಗಳಾದ ಕುಪ್ಪಂಡ ಗೋಪಾಲ್ ಬೋಪಯ್ಯ, ಸಂತ ಅನ್ನಮ್ಮ ಪದವಿ ಕಾಲೇಜಿನ ಪ್ರಾಂಶುಪಾಲರಾದ ತೃಪ್ತಿ ಬೋಪಣ್ಣ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಲ್ತೋಡು ನಾಂಗಾಲ ಗ್ರಾಮದ ಸ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯರಾದ ಫ್ಯಾನ್ಸಿ ಲೋಬೋ, ಸಹ ಶಿಕ್ಷಕಿ ಗೌರಿ, ಶಿಬಿರಾಧಿಕಾರಿ ಬಿ.ಎನ್. ಶಾಂತಿಭೂಷಣ್, ಸಂತ ಅನ್ನಮ್ಮ ಪದವಿ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿಗಳು, ರಾಷ್ಟಿçÃಯ ಸೇವಾ ಯೋಜನೆ ಘಟಕದ ಶಿಭಿರಾರ್ಥಿಗಳು, ಗ್ರಾಮಸ್ಥರು, ಹಾಗೂ ಸ.ಹಿ.ಪ್ರಾ. ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.