ಮಡಿಕೇರಿ, ಮಾ. ೧೨: ಪ್ರಕೃತಿಯ ನಡುವಿನ ಚಾರಣ ವಿದ್ಯಾರ್ಥಿಗಳಲ್ಲಿ ಸಾಹಸ ಮನೋಭಾವ ಮತ್ತು ಆತ್ಮವಿಶ್ವಾಸವನ್ನು ಬೆಳೆಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷೆ ಈರಮಂಡ ಹರಿಣಿ ವಿಜಯ್ ಅವರು ಅಭಿಪ್ರಾಯಪಟ್ಟರು.
ಕೋಡಂಬೂರು ಮೂರ್ನಾಡು ಜ್ಞಾನಜ್ಯೋತಿ ವಿದ್ಯಾಸಂಸ್ಥೆಯ ಸಹಕಾರದೊಂದಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮಡಿಕೇರಿ ಸ್ಥಳೀಯ ಸಂಸ್ಥೆಯ ವತಿಯಿಂದ ಇತ್ತೀಚೆಗೆ ವೀರಾಜಪೇಟೆಯ ಮಲೆತಿರಿಕೆ ಬೆಟ್ಟದಲ್ಲಿ ನಡೆದ ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಚಾರಣವು ಹಸಿರ ಪ್ರಕೃತಿ ಸೌಂದರ್ಯವನ್ನು ಸವಿಯಲು ಉತ್ತಮ ಅವಕಾಶವಾಗಿದೆ. ಅಲ್ಲದೆ ಮಾನಸಿಕ ಶಾಂತಿ ಮತ್ತು ದೈಹಿಕ ಸದೃಢತೆ ಹೆಚ್ಚಾಗುತ್ತದೆ. ಬೆಟ್ಟಗುಡ್ಡಗಳ ಮತ್ತು ಕಾಡುಗಳ ನಡುವಿನ ಪಯಣ ಹೊಸ ಅನುಭವವನ್ನು ನೀಡುತ್ತದೆ ಎಂದರು.
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ಮಡಿಕೇರಿ ಸ್ಥಳೀಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆರ್.ಪಿ ಚಂದ್ರಶೇಖರ್ ಮಾತನಾಡಿ, ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳ ಶಿಸ್ತುಬದ್ಧ ನಡವಳಿಕೆ ಶ್ಲಾಘನೀಯ. ಇದಕ್ಕೆ ಕಾರಣಕರ್ತರಾದ ಶಾಲಾ ಶಿಕ್ಷಕರು ಹಾಗೂ ಸ್ಕೌಟ್ಸ್, ಗೈಡ್ಸ್ನ ಶಿಕ್ಷಕರು ಅಭಿನಂದನಾರ್ಹರು ಎಂದರು.
ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕರಾದ ಗುಲ್ಶನ್ ತೇಲಪಂಡ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಕಷ್ಟಗಳು ಎದುರಾದರೂ ಅದನ್ನು ಎದುರಿಸುವ ಧೈರ್ಯವನ್ನು ಸ್ಕೌಟ್ಸ್ ಮತ್ತು ಗೈಡ್ಸ್ ನೀಡುತ್ತದೆ. ಸಂಸ್ಥೆಯ ಕಾರ್ಯಚಟುವಟಿಕೆಗಳ ಲಾಭವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದರು. ಜ್ಞಾನಜ್ಯೋತಿ ಶಾಲೆಯ ಮುಖ್ಯ ಶಿಕ್ಷಕಿ ಶಿಲ್ಪಾ ಪೊನ್ನಮ್ಮ ಅವರು ಮಾತನಾಡಿ, ಶಿಸ್ತುಬದ್ಧ ಜೀವನವು ಯಶಸ್ಸು, ಆರೋಗ್ಯ ಮತ್ತು ನೆಮ್ಮದಿಗೆ ಮೂಲಾಧಾರವಾಗಿದೆ. ಇದು ಸಮಯಪಾಲನೆ, ಸ್ವಯಂ-ನಿಯAತ್ರಣ ಹಾಗೂ ಉತ್ತಮ ನಿಯಮಗಳ ಪಾಲನೆಯನ್ನು ಒಳಗೊಂಡಿದೆ. ಕಠಿಣ ಪರಿಶ್ರಮ, ಆತ್ಮವಿಶ್ವಾಸ ಮತ್ತು ಸ್ಪಷ್ಟ ಗುರಿಗಳನ್ನು ಸಾಧಿಸಲು ವ್ಯಕ್ತಿಯನ್ನು ಸಬಲೀಕರಣಗೊಳಿಸುತ್ತದೆ ಎಂದು ತಿಳಿಸಿದರು.
ಪ್ರಬಂಧ ಸ್ಪರ್ಧೆ
ಚಾರಣಕ್ಕೆ ಸಂಬAಧಿಸಿದAತೆ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಮತ್ತು ಕ್ರೀಡೆಗಳನ್ನು ಆಯೋಜಿಸಲಾಗಿತ್ತು. ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಚಾರಣದಲ್ಲಿ ಪಾಲ್ಗೊಂಡ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಹಿಮಾಲಯನ್ ವುಡ್ ಬ್ಯಾಡ್ಜ್ ಪಡೆದ ಗುಲ್ಶನ್ ಹಾಗೂ ಸ್ಕೌಟ್ಸ್ ಮತ್ತು ಗೈಡ್ಸ್ನ ಶಿಕ್ಷಕಿಯರು ಪ್ರಾರ್ಥಿಸಿದರು. ಗೈಡ್ಸ್ ವಿದ್ಯಾರ್ಥಿನಿ ಪೂರ್ವಿ ಸ್ವಾಗತಿಸಿ, ಹನ್ಸಿಕ ನಿರೂಪಿಸಿ, ಶಾಲಾ ವಿದ್ಯಾರ್ಥಿ ದಕ್ಷ ಪ್ರಿಯ ವಂದಿಸಿದರು. ಸ್ಕೌಟ್ಸ್ ವಿದ್ಯಾರ್ಥಿ ನಿತಿನ್ ಕೆ.ಆರ್ ಹಾಗೂ ಗೈಡ್ಸ್ ವಿದ್ಯಾರ್ಥಿನಿ ಶಿಲ್ಪಿತ ಚಾರಣದ ಕುರಿತು ಅಭಿಪ್ರಾಯ ಹಂಚಿಕೊAಡರು. ಸ್ಕೌಟ್ಸ್ ಮತ್ತು ಗೈಡ್ಸ್ನ ಸಹ ಕಾರ್ಯದರ್ಶಿ ಸೂರಜ್ ತಿಮ್ಮಯ್ಯ, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.