ಸೋಮವಾರಪೇಟೆ: ಸಮೀಪದ ನೇರುಗಳಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ಶಿಕ್ಷಕರು ಹಾಗೂ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿ ಇದೀಗ ವರ್ಗಾವಣೆಗೊಂಡ ಹಿಂದಿ ಭಾಷಾ ಶಿಕ್ಷಕಿ ಸರೋಜ ಹಾಗೂ ಸಮಾಜ ವಿಜ್ಞಾನ ಶಿಕ್ಷಕಿ ಸುನೀತ ಅವರುಗಳನ್ನು ಗೌರವಿಸಿ ಸನ್ಮಾನಿಸಲಾಯಿತು. ಎಸ್. ಎಸ್. ಎಲ್.ಸಿ. ವಿದ್ಯಾರ್ಥಿಗಳಿಗೆ ಶುಭಕೋರಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷ ರವಿಕುಮಾರ್, ಶಾಲಾಡಳಿತ ಮಂಡಳಿ ಅಧ್ಯಕ್ಷ ಎಸ್. ಎಂ. ಡಿಸಿಲ್ವಾ, ನೇರುಗಳಲೆ ಗ್ರಾ.ಪಂ. ಪಂಚಾಯಿತಿ ಅಧ್ಯಕ್ಷ ವಿನೋದ್ ಕುಮಾರ್, ಮಾಜಿ ಅಧ್ಯಕ್ಷೆ ಪುಷ್ಪ, ಲಲಿತಾ, ಪಾಪೇಗೌಡ, ಮುಖ್ಯಶಿಕ್ಷಕಿ ರಾಜೇಶ್ವರಿ ಸೇರಿದಂತೆ ಇತರರು ಇದ್ದರು.