ಪೊನ್ನಂಪೇಟೆ: ಹಳ್ಳಿಗಟ್ಟು ಕೂರ್ಗ್ ಇನ್ಸಿ÷್ಟಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ ವೃತ್ತಿಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಬೆಂಗಳೂರಿನ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಮಾಜಿ ಮುಖ್ಯ ಪಿಆರ್‌ಒ ಮತ್ತು ನವದೆಹಲಿಯ ರಕ್ಷಣಾ ಸಂಶೋಧನಾ ಸಂಸ್ಥೆ ಮತ್ತು ಅಭಿವೃದ್ಧಿ ಕೇಂದ್ರ ಡಿ.ಆರ್.ಡಿ.ಒ ಪ್ರಾದೇಶಿಕ ಪಿ.ಆರ್.ಒ ಆಗಿ ಸೇವೆ ಸಲ್ಲಿಸಿದ ಜಯಪ್ರಕಾಶ್ ರಾವ್ ಅವರು ಪಾಲ್ಗೊಂಡು, ಮಾತನಾಡಿ, ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಅಭೂತಪೂರ್ವ ಪ್ರಗತಿಯನ್ನು ಸಾಧಿಸುತ್ತಿರುವ ಸಂದರ್ಭ ದೇಶದ ಸರ್ವತೋಮುಖ ಅಭ್ಯುದಯಕ್ಕೆ ಪ್ರತಿಯೊಬ್ಬ ಪ್ರಜೆಯೂ ಕೊಡುಗೆಯನ್ನು ನೀಡಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದ ಜೊತೆಗೆ ಸಂಶೋಧನೆಯ ಕ್ಷೇತ್ರದಲ್ಲಿಯೂ ವಿದ್ಯಾರ್ಥಿಗಳು ಆಸಕ್ತಿಯನ್ನು ವಹಿಸಬೇಕು ಎಂದರು.

ಸಿ.ಐ.ಟಿ. ಕಾಲೇಜಿನ ಬೇಸಿಕ್ ಸೈನ್ಸ್ ಆ್ಯಂಡ್ ಹ್ಯುಮ್ಯಾನಿಟಿಸ್ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಎಂ.ಬಸವರಾಜ್ ಅವರು ವಹಿಸಿದ್ದರು.

ಈ ಸಂದರ್ಭ ಕಾರ್ಯಕ್ರಮ ಸಂಚಾಲಕಿ ಕಾವೇರಿ ಚಂಗಪ್ಪ, ಬೋಧಕ, ಬೋಧಕೇತರ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.