ಮಡಿಕೇರಿ, ಮಾ. ೧೨: ಯುವಜನತೆ ಮತ್ತು ಸಾರ್ವಜನಿಕರಲ್ಲಿ ಸ್ವಚ್ಛತೆ ಮತ್ತು ಜವಾಬ್ದಾರಿಯುತ ತ್ಯಾಜ್ಯ ನಿರ್ವಹಣೆಯನ್ನು ಪ್ರೋತ್ಸಾಹಿಸುವ ನಿಟ್ಟನಲ್ಲ್ಲಿ, ವೀರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಮತ್ತು ಛಿoಜಚಿgu.ಛಿom ಸಹಯೋಗದಲ್ಲಿ ನಾಪೋಕ್ಲುವಿನ ಶಿಕ್ಷಣ ಸಂಸ್ಥೆಗಳು ಮತ್ತು ಇತರ ಸಂಘ-ಸAಸ್ಥೆಗಳಿಗೆ ೩೦ ಕಸದ ಬುಟ್ಟಿಗಳನ್ನು ವಿತರಿಸಲಾಗಿದೆ. ನಾಪೋಕ್ಲು ವ್ಯಾಪ್ತಿಯ ಮೂರು ಸರಕಾರಿ ಶಾಲೆಗಳು, ಒಂದು ಸರಕಾರಿ ಕಾಲೇಜು ಮತ್ತು ಒಂದು ಮಹಿಳಾ ಸಂಘಕ್ಕೆ ಕಸದ ಬುಟ್ಟಿಗಳನ್ನು ಒದಗಿಸಲಾಗಿದೆ.

ತಮ್ಮ ಮನೆಗಳನ್ನು ಸ್ವಚ್ಛವಾಗಿಡುವಂತೆಯೇ ತಮ್ಮ ಸುತ್ತಮುತ್ತಲಿನ ಪ್ರದೇಶಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವ ಜವಾಬ್ದಾರಿಯನ್ನು ತೆಗೆದುಕೊಳ್ಳುವಂತೆ ಪ್ರೋತ್ಸಾಹಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ. ಸರಿಯಾದ ತ್ಯಾಜ್ಯ ವಿಲೇವಾರಿ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಶಿಕ್ಷಣ ಸಂಸ್ಥೆಗಳು ಮತ್ತು ಇತರ ಗುಂಪುಗಳಲ್ಲಿ ನೈರ್ಮಲ್ಯದ ಬಗ್ಗೆ ಜಾಗೃತಿ ಬೆಳೆಸುವ ಉದ್ದೇಶದಿಂದ ಈ ಸ್ವಚ್ಛತಾ ಆಂದೋಲನವನ್ನು ಮೂರು ತಿಂಗಳ ಹಿಂದೆ ಪ್ರಾರಂಭಿಸಲಾಯಿತು. ಶಾಲೆಗಳು, ಕಾಲೇಜುಗಳು ಮತ್ತು ಮಹಿಳಾ ಗುಂಪುಗಳನ್ನು ಒಳಗೊಳ್ಳುವ ಮೂಲಕ ಸ್ವಚ್ಛತೆ ಮತ್ತು ಪರಿಸರದ ಬಗ್ಗೆ ಜವಾಬ್ದಾರಿಯ ಸಂದೇಶ ಸಾರುವುದೇ ಈ ಕಾರ್ಯಕ್ರಮದ ಉದ್ದೇಶ ಎಂಬುದಾಗಿ ಪ್ರಕಟಣೆ ತಿಳಿಸಿದೆ.