ಕೂಡಿಗೆ, ಮಾ. ೧೨: ಕೂಡಿಗೆ ಕೊಪ್ಪಲು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷೆಯಾಗಿ ಮಮತ ಅವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ಜಯಶ್ರೀ ಅವಿರೋಧವಾಗಿ ಆಯ್ಕೆಯಾದರು.
ಚುನಾವಣೆಯಲ್ಲಿ ೨ ಸ್ಥಾನಗಳಿಗೂ ಒಂದೊAದೇ ನಾಮಪತ್ರಗಳು ಸಲ್ಲಿಕೆಯಾದ ಹಿನ್ನೆಲೆಯಲ್ಲಿ ಮಮತ ಮತ್ತು ಜಯಶ್ರೀ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣಾ ಅಧಿಕಾರಿ ಪ್ರದೀಪ್ ಕಾರ್ಯನಿರ್ವಹಿಸಿದರು. ಕಾರ್ಯದರ್ಶಿ ಸುಮಾ ಹಾಗೂ ನಿರ್ದೇಶಕರು ಹಾಜರಿದ್ದರು.