ಸೋಮವಾರಪೇಟೆ, ಮಾ. ೧೩: ಇಲ್ಲಿನ ಯಡೂರು ಗ್ರಾಮದ ವೈಸಿಸಿ ಕ್ರಿಕೆಟ್ ಕ್ಲಬ್ ಆಶ್ರಯದಲ್ಲಿ ತಾ.೧೪ (ಇಂದು) ಮತ್ತು ೧೫ ರಂದು ಸ್ಥಳೀಯ ಬಿಟಿಸಿಜಿ ಕಾಲೇಜು ಮೈದಾನದಲ್ಲಿ ಜಿಲ್ಲಾ ಮಟ್ಟದ ವೈಸಿಸಿ ಕಪ್ ಕ್ರಿಕೆಟ್ ಪಂದ್ಯಾಟ ನಡೆಯಲಿದೆ.
ಕ್ಲಬ್ ವತಿಯಿಂದ ೨೬ನೇ ವರ್ಷದ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ್ದು, ಪ್ರಥಮ ಸ್ಥಾನ ಪಡೆಯುವ ತಂಡಕ್ಕೆ ರೂ.೩೦ ಸಾವಿರ ನಗದು ಹಾಗೂ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ೨೦ ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯುಕ್ತಿಕ ವಿಭಾಗ ದಲ್ಲಿಯೂ ಪ್ರಶಸ್ತಿಗಳನ್ನು ನೀಡಲಾಗುವುದು.
ಪಂದ್ಯಾವಳಿಯಲ್ಲಿ ಭಾಗವಹಿಸುವ ತಂಡಗಳು ಹೆಚ್ಚಿನ ಮಾಹಿತಿಗೆ ೯೦೬೬೩೮೨೦೧೩ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ಪಂದ್ಯಾವಳಿಯ ಉದ್ಘಾಟನೆಯನ್ನು ತಾ. ೧೪ ರಂದು (ಇಂದು) ಬೆಳಿಗ್ಗೆ ೯.೩೦ಕ್ಕೆ ಯಡೂರು ಗ್ರಾಮ ಸಮಿತಿ ಅಧ್ಯಕ್ಷ ವೈ.ಡಿ. ಮೋಹನ್ ನೆರವೇರಿಸಲಿದ್ದು, ಬಿಟಿಸಿಜಿ ಕಾಲೇಜು ಪ್ರಾಂಶುಪಾಲ ಡಾ. ಬಿ.ಡಿ. ಹರ್ಷ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನಿವೃತ್ತ ಸರ್ಕಾರಿ ನೌಕರ ಸಿ.ಹೆಚ್. ಚಂದ್ರಪ್ಪ, ಉಪನ್ಯಾಸಕ ವಿನೋದ್, ಬೆಳೆಗಾರ ವೈ.. ವಿಜಯಕುಮಾರ್, ವೈ.ಪಿ. ಲೋಕೇಶ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
ತಾ. ೧೫ ರಂದು ಸಂಜೆ ೫ ಗಂಟೆಗೆ ಬಹುಮಾನ ವಿತರಣೆ ಮತ್ತು ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಡಾ. ಮಂತರ್ ಗೌಡ, ಉದ್ಯಮಿ ಅರುಣ್ ಕೊತ್ನಳ್ಳಿ, ಗುತ್ತಿಗೆದಾರ ಕೆ.ಟಿ. ಸತೀಶ್, ಜಿ.ಪಂ. ಮಾಜೀ ಸದಸ್ಯ ಬಿ.ಜೆ. ದೀಪಕ್ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಕ್ಲಬ್ ಅಧ್ಯಕ್ಷ ಹೆಚ್.ಬಿ. ಕಿರಣ್ ಗೌಡ ತಿಳಿಸಿದ್ದಾರೆ.