ಮೈಸೂರು, ಮಾ. ೧೩: ಜಲ ಜೀವನ್ ಮಿಷನ್ (ಎಎಒ) ೨.೦ ಅಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಸರಬರಾಜು ವಲಯದಲ್ಲಿ ಸುಧಾರಣೆಗಳ ಮೇಲೆ ಗಮನಹರಿಸಿ, ಯೋಜನೆಯ ವೆಚ್ಚವನ್ನು ಹೆಚ್ಚಿಸುವ ಮೂಲಕ ಮತ್ತು ಅನುಷ್ಠಾನವನ್ನು ಮರು ರಚಿಸುವ ಮೂಲಕ ಜಲ ಜೀವನ್ ಮಿಷನ್ ಅವಧಿಯನ್ನು ಡಿಸೆಂಬರ್ ೨೦೨೮ ರವರೆಗೆ ವಿಸ್ತರಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದ ಯದುವೀರ್ ಒಡೆಯರ್, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ಸುಸ್ಥಿರ ಗ್ರಾಮೀಣ ಪೈಪ್‌ಲೈನ್ ಕುಡಿಯುವ ನೀರು ಪೂರೈಕೆಗಾಗಿ ‘ಜಲ ಜೀವನ್ ಮಿಷನ್’ (ಎಎಒ) ಯೋಜನೆಯನ್ನು ಮರುಸಂಘಟಿಸುವ ಜಲಶಕ್ತಿ ಸಚಿವಾಲಯದ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.

ಈ ನಿರ್ಧಾರದಿಂದ ಯೋಜನೆಯ ಗಮನವು ಕೇವಲ ‘ಮೂಲಸೌಕರ್ಯ ನಿರ್ಮಾಣ’ ಮಾತ್ರ ಆಗಿರುವುದಿಲ್ಲ ‘ಸೇವಾ ವಿತರಣೆ’ಯೂ (Seಡಿviಛಿe ಆeಟiveಡಿಥಿ) ಆಗಿರಲಿದೆ. ಕುಡಿಯುವ ನೀರು ಪೂರೈಕೆಗೆ ಹೆಚ್ಚು ಆದ್ಯತೆ ನೀಡಲಿದೆ ಎಂದು ಹೇಳಿದ್ದಾರೆ

ಈ ನಿಟ್ಟಿನಲ್ಲಿ ತಕ್ಷಣ ಸಂಬAಧಪಟ್ಟ ಅಧಿಕಾರಿಗಳ ಸಭೆ ಕರೆದು ಕ್ರಿಯಾ ಯೋಜನೆ ರೂಪಿಸಲು ಸೂಚಿಸಲಾಗುವುದು. ಗ್ರಾಮೀಣ ಭಾಗದ ಜನರಿಗೆ ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.