ಕೊಡ್ಲಿಪೇಟೆ, ಮಾ. ೧೩: ವಿದ್ಯಾರ್ಥಿ ದಿಸೆಯಲ್ಲಿ ಸೇವಾ ಮನೋಭಾವದೊಂದಿಗೆ ನಾಯಕತ್ವದ ಗುಣಗಳನ್ನು ಮೈಗೂಡಿಸಿಕೊಳ್ಳಲು ರಾಷ್ಟಿçÃಯ ಸೇವಾ ಯೋಜನೆಯ ಶಿಬಿರಗಳು ಸಹಕಾರಿಯಾಗಿವೆ ಎಂದು ಹೈಕೋರ್ಟ್ನ ಹಿರಿಯ ವಕೀಲ ಹಾಗೂ ಕೊಡ್ಲಿಪೇಟೆ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಎಸ್. ಚಂದ್ರಮೌಳಿ ಅಭಿಪ್ರಾಯಿಸಿದರು.

ಕೊಡ್ಲಿಪೇಟೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಕೊಡ್ಲಿಪೇಟೆ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಪ್ರಥಮ ಬಾರಿಗೆ ಹಮ್ಮಿಕೊಂಡಿರುವ ಎನ್‌ಎಸ್‌ಎಸ್ ವಾರ್ಷಿಕ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ರಾಷ್ಟಿçÃಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಸೇವಾ ಮನೋಭಾವದಿಂದ ಜನರ ಮನಸು ಗೆಲ್ಲುವ ಮೂಲಕ ಸಮಾಜಕ್ಕೆ ಮಾದರಿಯಾಗಿರಬೇಕು ಎಂದು ಕಿವಿಮಾತು ಹೇಳಿದ ಅವರು, ವಿದ್ಯಾರ್ಥಿಗಳ ನಡೆ-ನುಡಿಗಳನ್ನು ತಿದ್ದಿಕೊಳ್ಳಲು ರಾಷ್ಟಿçÃಯ ಸೇವಾ ಯೋಜನೆಯ ಶಿಬಿರವು ವೇದಿಕೆಯಾಗುತ್ತದೆ ಎಂದರು.

ಶಿಬಿರಗಳಲ್ಲಿ ಭಾಗವಹಿಸುವ ಶಿಬಿರಾರ್ಥಿಗಳು ವಿವಿಧ ಶ್ರಮದಾನ ಕಾರ್ಯ ಮಾಡುವುದರ ಜೊತೆಯಲ್ಲಿ, ವಿವಿಧ ಸಾಮಾಜಿಕ ಪಿಡುಗುಗಳ ಬಗ್ಗೆಯೂ ಗ್ರಾಮಸ್ಥರನ್ನು ಜಾಗೃತಿಗೊಳಿಸಬೇಕೆಂದರು. ಶಿಬಿರದ ಯಶಸ್ಸಿಗೆ ಗ್ರಾಮಸ್ಥರೂ ಸಹ ಸಹಕಾರ ನೀಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ವಿದ್ಯಾಸಂಸ್ಥೆ ನಿರ್ದೇಶಕ ಬಿ.ಕೆ. ಯತೀಶ್ ಮಾತನಾಡಿ, ಗಾಂಧಿಜೀ ಅವರ ಗ್ರಾಮ ಉದ್ದಾರ, ಸ್ವಚ್ಚತೆ, ಜನ ಜಾಗೃತಿ, ವ್ಯಕ್ತಿತ್ವ ವಿಕಸನ ಮುಂತಾದ ಪರಿಕಲ್ಪನೆಯಂತೆ ಪದವಿ ಕಾಲೇಜು ಮಟ್ಟದಲ್ಲಿ ೧೯೬೯ ರಲ್ಲಿ ಸ್ಥಾಪಿತವಾದ ರಾಷ್ಟಿçÃಯ ಸೇವಾ ಯೋಜನೆಗೆ ೫೭ ವರ್ಷಗಳು ಸಂದಿವೆ. ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳಲ್ಲಿ ರಾಷ್ಟಿçÃಯ ಸೇವಾ ಯೋಜನೆಯೂ ಒಂದಾಗಿದೆ ಎಂದರು.

ಕಾಲೇಜು ಪ್ರಾಂಶುಪಾಲ ಎಂ.ಆರ್.ನಿರAಜನ್ ಮಾತನಾಡಿ, ವಿದ್ಯಾರ್ಥಿಗಳ ಸಮಸ್ಯೆ ನಿವಾರಣೆಗೆ ಹಾಗೂ ವಿಚಾರಗಳ ಅನುಭವಗಳಿಗೆ ರಾಷ್ಟಿçÃಯ ಸೇವಾ ಯೋಜನೆ ಶಿಬಿರ ದಾರಿದೀಪವಾಗುತ್ತದೆ. ವಿದ್ಯಾರ್ಥಿಗಳ ಮನಪರಿವರ್ತನೆ ಆಗಲು, ಸಮಾನತೆ, ಸಹಬಾಳ್ವೆ ಮುಂತಾದ ವಿಚಾರಗಳನ್ನು ತಿಳಿದುಕೊಳ್ಳಲು ಶಿಬಿರ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳು ಅವಕಾಶವನ್ನು ಸದ್ಬಳಕೆ ಮಾಡಿಕೊಂಡು ವ್ಯಕ್ತಿಗತವಾಗಿ ಬೆಳೆಯುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ವಸಂತ್, ಉಪಾಧ್ಯಕ್ಷೆ ಮಮತಾ ರಮೇಶ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಅಬ್ದುಲ್ ರಬ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಶೇಖರ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುಶೀಲಾ, ಶಿಬಿರಾಧಿಕಾರಿ ಕೆ.ಎಚ್. ಯೋಗೇಂದ್ರ ಸೇರಿದಂತೆ ಇತರರು ಇದ್ದರು.