ಮಡಿಕೇರಿ, ಮಾ.೧೫: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸಹಯೋಗದಲ್ಲಿ ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ೨೦೨೫ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.

ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್, ಸುಳ್ಯ ಲಯನ್ಸ್ ಮಾಜಿ ರಾಜ್ಯಪಾಲರಾದ ಎಂ.ಬಿ.ಸದಾಶಿವ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ಅಧ್ಯಕ್ಷರಾದ ಕೆ.ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷರಾದ ಟಿ.ಎಂ.ಶಾಹೀದ್ ತೆಕ್ಕಿಲ್, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಶಾಲೆಟ್ ಲವೀನಾ ಪಿಂಟೋ, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್.ಗಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ ಭಾಗವಹಿಸಿದ್ದರು. ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ದಕ್ಷಿಣ ಕನ್ನಡ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಭರತ್ ಮುಂಡೋಡಿ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಆನಂದ ಕರಂದ್ಲಾಜೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಲೋಕಯ್ಯ ಗೌಡ ಕೆ, ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘದ ಅಧ್ಯಕ್ಷರಾದ ಸೌಮ್ಯ ಸುಕುಮಾರ್, ಯುವ ಘಟಕದ ಅಧ್ಯಕ್ಷರಾದ ಕಿರಣ್ ಬುಡ್ಲೆಗುತ್ತು, ಇತರರು ಪಾಲ್ಗೊಂಡಿದ್ದರು.

ಸAಶೋಧನೆ ಮತ್ತು ಸಾಹಿತ್ಯ ಕ್ಷೇತ್ರ ಅನಂತರಾಜು ಗೌಡ, ಅರೆಭಾಷಿಕ ಸಂಘಟನೆ ಮತ್ತು ಸಮಾಜಸೇವೆ ಲೋಕೇಶ್ವರಿ ವಿನಯಚಂದ್ರ, ಅರೆಭಾಷೆ ಸಾಹಿತ್ಯ ಕ್ಷೇತ್ರ ಕಟ್ರತನ ಲಲಿತಾ ಅಯ್ಯಣ್ಣ ಅವರಿಗೆ ೨೦೨೫ನೇ ಸಾಲಿನ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.