ಮಡಿಕೇರಿ, ಮಾ. ೧೫: ೨೦೨೫-೨೬ನೇ ಸಾಲಿನಲ್ಲಿ ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯ ಸಹಾಯಧನ ಸೌಲಭ್ಯ ಒದಗಿಸಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಪ್ರವರ್ಗ-೩ಎ ನಲ್ಲಿ ಕ್ರಮ ಸಂಖ್ಯೆ ೧ರ (ಎ) ಯಿಂದ (ಟಿ)ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ, ಮರಸು ಒಕ್ಕಲಿಗ, ಗೌಡ/ ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ, ಕಮ್ಮ, ರೆಡ್ಡಿ, ಗೌಂಡರ್, ನಾಮಧಾರಿ ಗೌಡ, ಉಪ್ಪಿನಕೊಳಗ/ ಉತ್ತಮ ಕೊಳಗ ಸಮುದಾಯಕ್ಕೆ ಸೇರಿಗ ಜನರ ಅಭಿವೃದ್ಧಿಗಾಗಿ ೨೦೨೫-೨೬ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಆಹಾರ ವಾಹಿನಿ(ಆಹಾರ ಕಿಯೋಸ್ಟ್) ಯೋಜನೆಯಲ್ಲಿ ಸೌಲಭ್ಯ ಪಡೆಯಬಯಸುವವರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಹಾರ ವಾಹಿನಿ (ಆಹಾರ ಕಿಯೋಸ್ಕ್) ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಾಗಿದೆ. ನಿಗಮದಿಂದ ವಾಹನ ಖರೀದಿಗೆ ರೂ. ೩ ಲಕ್ಷಗಳ ಸಹಾಯಧನವನ್ನು ಬಿಡುಗಡೆ ಮಾಡಲಾಗುವುದು. ಉಳಿಕೆ ಮೊತ್ತವನ್ನು ಬ್ಯಾಂಕ್‌ಗಳು/ಹಣಕಾಸು ಸಂಸ್ಥೆಗಳಿAದ ಸಾಲ ಪಡೆಯಬಹುದಾಗಿದೆ.

ನಗರ ಪ್ರದೇಶದ ವಿಧಾನಸಭಾ ಕ್ಷೇತ್ರವಾದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಯೋಜನೆಯ ಸೌಲಭ್ಯ ಪಡೆಯ ಬಯಸುವವರು ಒಕ್ಕಲಿಗ ಸಮುದಾಯಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ರೂ.೩ ಲಕ್ಷಗಳ ಒಳಗಿರಬೇಕು. ಅರ್ಜಿದಾರರ ವಯಸ್ಸು ೨೧ ರಿಂದ ೪೫ ವರ್ಷಗಳ ಮಿತಿಯಲ್ಲಿರಬೇಕು. ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾAಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು (ಶ್ರೀ/ಶ್ರೀಮತಿ ಕುಮಾರಿ ಮುಂತಾದ ದಾಖಲಾತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‌ಪುಸ್ತಕದಲ್ಲಿಯೂ ಇದ್ದು, ಹೊಂದಾಣಿಕೆಯಾಗಬೇಕು.

ಒAದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಒಕ್ಕಲಿಗ ಸಮುದಾಯದ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸಲು ತಾ. ೨೦ ರವರೆಗೆ ಅರ್ಜಿ ಸಲ್ಲಿಸಬಹುದು. ಯೋಜನೆಯ ಅರ್ಹತೆ ಮತ್ತು ಸಲ್ಲಿಸುವ ದಾಖಲಾತಿಗಳ ಹೆಚ್ಚಿನ ಮಾಹಿತಿಗೆ ಕರ್ನಾಟಕ ಒಕ್ಕಲಿಗ ನಿಗಮದ ವೆಬ್‌ಸೈಟ್ hಣಣಠಿs://ಞvಛಿಜಛಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದು. ನಿಗಮದ ಸಹಾಯವಾಣಿ ಸಂಖ್ಯೆ:೦೮೦-೨೯೯೦೪೩೫೦ ಮತ್ತು ೨೯೯೦೪೨೬೮ ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಖುದ್ಧಾಗಿ ಅಥವಾ ದೂರವಾಣಿ ಸಂಖ್ಯೆ:೦೮೨೭೨-೨೨೧೬೫೬ ರ ಮೂಲಕ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.