ಗೋಣಿಕೊಪ್ಪಲು, ಮಾ. ೧೪: ಮಹಿಳಾ ದಿನಾಚರಣೆ ಕೇವಲ ಒಂದು ಆಚರಣೆಯಾಗಿ ಉಳಿಯದಿರಲಿ, ಸಮಾಜದಲ್ಲಿ ಮಹಿಳೆ ಸಬಲೆ ಎಂಬುದನ್ನು ಸಾಬೀತುಪಡಿಸಬೇಕು ಎಂದು ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಕರೆ ನೀಡಿದರು.
ಗೋಣಿಕೊಪ್ಪಲುವಿನ ಉಮಾಮಹೇಶ್ವರಿ ದೇವಾಲಯದ ಸಭಾಂಗಣದಲ್ಲಿ ವೀರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ ನಿರ್ವಹಣಾ ಘಟಕದವರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಸಕರು, ಅಂತರರಾಷ್ಟಿçÃಯ ಮಹಿಳಾ ದಿನಾಚರಣೆಯು ಕೇವಲ ಒಂದು ದಿನಕ್ಕೆ ಸೀಮಿತವಾದರೂ ಇದರ ಅಳವಡಿಕೆ ದಿನನಿತ್ಯದ ಜೀವನದಲ್ಲಿ ಮಾಡಿಕೊಂಡರೆ ಸಮಾಜದ ನಿರ್ಮಾಣ ಆಗುವುದರಲ್ಲಿ ಯಾವುದೇ ಸಂದೇಹ ಇಲ್ಲ ಎಂದರು.
ಮಹಿಳಾ ಸಾಧಕಿಯರನ್ನು ಸನ್ಮಾನಿಸಿ ಗೌರವಿಸಲಾಯಿತು. ರಂಗೋಲಿ ಸ್ಪರ್ಧೆ ಸೇರಿದಂತೆ ಇನ್ನಿತರ ಸ್ಪರ್ಧೆಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ವೀರಾಜಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ಪಿ.ವಿ. ಜಾನ್ಸನ್, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕೆ.ಸಿ. ಅಪ್ಪಣ್ಣ, ಪ್ರಮುಖರಾದ ಅಜ್ಜಿಕುಟ್ಟಿರ ಧನ್ಯ, ಶಾಜಿ ಅಚ್ಚುತನ್, ಖಾಲಿದ್, ಅನಿಶ್, ಮುತಣ್ಣ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.