ವೀರಾಜಪೇಟೆ, ಮಾ. ೧೪: ವೀರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ತಮ್ಮ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದಂತೆ ಈ ಬಾರಿಯ ಆಯವ್ಯಯದಲ್ಲಿ ಮುಖ್ಯಮಂತ್ರಿಗಳ ಮೂಲಕ ಕೊಡಗು ಅಭಿವೃದ್ಧಿ ನಿಗಮ ಸ್ಥಾಪಿಸಲು ಅನುಮತಿ ಪಡೆದು ಶ್ರಮಿಸಿದ್ದಕ್ಕಾಗಿ ಅವರನ್ನು ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ ಅವರ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ಕಕ್ಕಬೆ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಿಯಂಡ ಸಂಪನ್ ಅಯ್ಯಪ್ಪ, ಪುರಸಭೆ ಮಾಜಿ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಜಿಲ್ಲಾ ಸಾಮಾಜಿಕ ಜಾಲತಾಣದ ಅಧ್ಯಕ್ಷ ಸೂರಜ್ ಹೊಸೂರು, ಪಕ್ಷದ ಮುಖಂಡರುಗಳಾದ ವಾಸಿಮ್, ಮಂಜು ಕುಂಡಚ್ಚಿರ, ಆಪುö್ರ ರವೀಂದ್ರ, ಬೇಬಿ, ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಕ್ಷಿತ್, ಮಂಜುನಾಥ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.