ಕೂಡಿಗೆ, ಮಾ. ೧೪: ಹೆಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ವ್ಯಾಪ್ತಿಗೆ ಒಳಪಡುವ ಪ್ರಮುಖ ಗ್ರಾಮಗಳಲ್ಲಿರುವ ಅಂಗಡಿ, ಹೊಟೇಲ್, ಪಾನಿಪೂರಿ ಅಂಗಡಿ, ಬೇಕರಿ ಅಂಗಡಿಗಳಿಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹೆಬ್ಬಾಲೆ, ಹುಲಸೆ, ಹಕ್ಕೆ ಹಾಗೂ ಕಣಿವೆ ಗ್ರಾಮಗಳಲ್ಲಿರುವ ಹೊಟೇಲ್, ಛತ್ರಗಳು, ಬೇಕರಿಗಳು, ಕ್ಯಾಂಟೀನ್, ಬೀದಿ ಬದಿ ಪಾನಿಪುರಿ- ಗೋಬಿ ಮಂಚೂರಿ ಅಂಗಡಿಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿ ಸರ್ಕಾರದ ನಿಯಮದಂತೆ ಸಂಬAಧಪಟ್ಟ ಇಲಾಖೆಗಳಿಂದ ಪರವಾನಗಿ ಪ್ರಮಾಣ ಪತ್ರಗಳನ್ನು ಪಡೆದುಕೊಳ್ಳಲು ಸೂಚಿಸಿದರು.
ಬಳಕೆ ಮಾಡುವ ನೀರಿನ ಟ್ಯಾಂಕ್‌ಗಳನ್ನು ಸ್ವಚ್ಛಗೊಳಿಸಲು, ಡೆಂಗ್ಯೂ ರೋಗದ ಮುಂಜಾಗ್ರತಾ ಕ್ರಮಗಳ ಬಗ್ಗೆ, ತ್ಯಾಜ್ಯ ವಿಲೇವಾರಿ-ನಿರ್ವಹಣೆ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದರ ಬಗ್ಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಹೆಬ್ಬಾಲೆ ಆರೋಗ್ಯ ನಿರೀಕ್ಷಕ ಸಂಜಯ್ ಸೇರಿದಂತೆ ಸಿಬ್ಬಂದಿ ವರ್ಗದವರು ಇದ್ದರು.