ಶ್ರೀಮಂಗಲ, ಮಾ. ೧೪: ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿಯ ನಿರ್ದೇಶಕರಾಗಿದ್ದ ಚೀರಂಡ ಕಂದಾ ಸುಬ್ಬಯ್ಯ ಅವರ ಅಕಾಲಿಕ ನಿಧನಕ್ಕೆ ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿಯಿAದ ಶ್ರದ್ಧಾಂಜಲಿ ಸಭೆ ನಡೆಯಿತು. ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಕಂದಾ ಸುಬ್ಬಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಸಭೆಯಲ್ಲಿ ಉಪಾಧ್ಯಕ್ಷೆ ಚಿರಿಯಪಂಡ ಇಮ್ಮಿ ಬೋಜಮ್ಮ, ಕಾರ್ಯದರ್ಶಿ ಕೋಟೇರ ಕಿಶನ್ ಉತ್ತಪ್ಪ, ಜಂಟಿ ಕಾರ್ಯದರ್ಶಿ ಅಲೇಮಾಡ ಸುಧೀರ್, ಖಜಾಂಚಿ ಚೆಪ್ಪುಡಿರ ಕಾರ್ಯಪ್ಪ ಮತ್ತು ಆಡಳಿತ ಮಂಡಳಿ ಸದಸ್ಯರು ಭಾಗವಹಿಸಿದ್ದರು.