ವೀರಾಜಪೇಟೆ, ಮಾ.೧೪: ದಿವಂಗತ ದೇವರಾಜು ಅರಸು ಅವರ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ-ಕೊಡಗು ಜಿಲ್ಲೆ, ಇವರ ವತಿಯಿಂದ ಹಿಂದುಳಿದ ವರ್ಗಗಳ ಮಹಿಳೆಯರಿಗೆ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡುವ ಕಾರ್ಯಕ್ರಮ ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಗೃಹ ಕಚೇರಿಯಲ್ಲಿ ನಡೆಯಿತು.
ಎ.ಎಸ್ ಪೊನ್ನಣ್ಣ ಅವರು ಮಹಿಳೆಯರಿಗೆ ಶುಭ ಕೋರಿ ಹೊಲಿಗೆ ಯಂತ್ರವನ್ನು ವಿತರಿಸಿ ಮಾತನಾಡಿ, ಮಹಿಳೆಯರ ಸ್ವಾವಲಂಬಿ ಬದುಕಿಗೆ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರಕಾರ ಸತತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಮಹಿಳಾ ಸಬಲೀಕರಣವೇ ಕಾಂಗ್ರೆಸ್ ಪಕ್ಷದ ಪ್ರಮುಖ ಉದ್ದೇಶಗಳಲ್ಲೊಂದಾಗಿದೆ ಎಂದು ಹೇಳಿದರು.
ಈ ಸಂದರ್ಭ ಇಲಾಖೆ ಅಧಿಕಾರಿ ವರ್ಗದವರು, ವೀರಾಜಪೇಟೆ ಬ್ಲಾಕ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಜಾನ್ಸನ್, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಮತೀನ್, ಪುರಸಭೆ ಮಾಜಿ ಸದಸ್ಯ ರಾಫಿ, ಪಕ್ಷದ ಮುಖಂಡರಾದ ಸೂರಜ್ ಹೊಸೂರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.