ಮಡಿಕೇರಿ, ಮಾ. ೧೬: ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಮರ್ಪಕ ಸಂಗ್ರಹವಿದ್ದು, ಗೃಹ ಬಳಕೆಯ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ. ಗ್ರಾಹಕರುಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಹಾಗೂ ಯಾವುದೇ ಆತಂಕಕ್ಕೆ ಒಳಗಾಗದೇ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಬುಕ್ ಮಾಡಿ ಗ್ಯಾಸ್ ಸಿಲಿಂಡರ್ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

ಅಡುಗೆ ಅನಿಲವನ್ನು ಮಿತ ಬಳಕೆ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಗೃಹ ಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿದ್ದು, ಎಂದಿನAತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲಿದ್ದಾರೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಗ್ಯಾಸ್ ಸಿಲಿಂಡರ್ ಪಡೆಯಬಹುದು. ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ವಿತರಣೆಯಲ್ಲಿ ಏನಾದರೂ ಕುಂದುಕೊರತೆಗಳು ಕಂಡುಬAದಲ್ಲಿ ಪರಿಹರಿಸಲು ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿಯಲ್ಲಿ ಸಹಾಯವಾಣಿಯನ್ನು ತೆರೆಯಲಾಗಿದ್ದು, ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ, ಪರಿಹಾರ ಕಂಡುಕೊಳ್ಳಬಹುದು.

ಉಪ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ ದೂ.ಸಂ.೯೮೪೫೭೦೬೯೮೦, ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಐಒಸಿ ೯೫೮೫೫೧೫೩೮೯, ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಬಿಪಿಸಿ ದೂ.ಸಂ.೯೮೫೩೭೩೫೯೪೪ ಮತ್ತು ಸಹಾಯಕ ಮಾರಾಟ ವ್ಯವಸ್ಥಾಪಕರು(ಎಲ್‌ಪಿಜಿ)-ಎಚ್‌ಪಿಸಿ ೭೦೦೧೬೪೨೫೫೬, ತಾಲೂಕು ಕಚೇರಿ ಮಡಿಕೇರಿ ೯೪೮೦೫೪೪೫೩೧, ವೀರಾಜಪೇಟೆ ೮೧೦೫೦೭೨೮೬೯, ಸೋಮವಾರಪೇಟೆ ೯೪೮೦೦೭೨೬೩೨, ಕುಶಾಲನಗರ ೯೩೮೦೦೩೨೭೨೧ ಹಾಗೂ ಪೊನ್ನಂಪೇಟೆ ೯೧೦೮೯೪೦೮೭೫ ಈ ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದು.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬAದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಸಹಕರಿಸಿ ಗೃಹಬಳಕೆ ಗ್ಯಾಸ್ ಸಿಲಿಂಡರ್ ವಿತರಣೆಯ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ವಿನಂತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.