ಶನಿವಾರಸಂತೆ, ಮಾ. ೧೬: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆರ್‌ಸಿಹೆಚ್ ವತಿಯಿಂದ ಹಮ್ಮಿಕೆಂಡಿರುವ ಹೆಚ್‌ಪಿವಿ ಲಸಿಕಾ ಅಭಿಯಾನ-೨೦೨೬ ರ ಅಂಗವಾಗಿ ಕೊಡ್ಲಿಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ ೧೪ ವರ್ಷ ತುಂಬಿದ ೧೫ ವರ್ಷದ ಒಳಗಿನ ಹೆಣ್ಣುಮಕ್ಕಳಿಗೆ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಧನಿಕಾ ಮಾತನಾಡಿ, ಲಸಿಕಾ ಅಭಿಯಾನದ ಅಂಗವಾಗಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ೧೮ ಹೆಣ್ಣುಮಕ್ಕಳು ಹೆಚ್‌ಪಿವಿ ಲಸಿಕೆ ಪಡೆದಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ ಆರೋಗ್ಯ ಸಂಸ್ಥೆಗಳು ಹಾಗೂ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ. ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಯ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ವಿಶೇಷ ಅಭಿಯಾನ ಕೈಗೊಂಡಿದೆ ಎಂದರು.
ಪೋಷಕರು ತಮ್ಮ ಹೆಣ್ಣುಮಕ್ಕಳಿಗೆ ಲಸಿಕೆ ಪಡೆಯಲು ಅಗತ್ಯ ಗುರುತಿನ ಚೀಟಿ ಅಥವಾ ದಾಖಲೆಗಳೊಂದಿಗೆ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡುವಂತೆ ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸುವAತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.