ವೀರಾಜಪೇಟೆ, ಮಾ. ೧೬: ವೀರಾಜಪೇಟೆ ಪಟ್ಟಣದ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಎನ್‌ಎಸ್‌ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರ ಕಲ್ತೋಡು - ನಾಂಗಾಲದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗುತಿದ್ದು, ಅದರ ಪ್ರಯುಕ್ತ ಕಲ್ತೋಡು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ವೀರಾಜಪೇಟೆಯ ದಂತ ವೈದ್ಯಕೀಯ ಮಹಾ ವಿದ್ಯಾಲಯದ ಸಹಯೋಗದಲ್ಲಿ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ಚಿಕಿತ್ಸೆ, ವೀರಾಜಪೇಟೆಯ ಡಾ. ಅಗರವಾಲ್ಸ್ ಕ್ಲಿನಿಕ್‌ನ ಸಹಯೋಗದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ, ಕ್ರೆಡೋ ಮೆಡಿಕಲ್ ಸೆಂಟರ್ ಪ್ರೆöÊವೇಟ್ ಲಿಮಿಟೆಡ್‌ನ ಸಹಯೋಗದಲ್ಲಿ ಆರೋಗ್ಯ ತಪಾಸಣಾ ಶಿಬಿರ ಜರುಗಿತು.

ಆರೋಗ್ಯ ಜಾಗೃತಿ ಕಾರ್ಯಕ್ರಮದಡಿಯಲ್ಲಿ ಈ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳು, ಶಿಬಿರಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹಾಗೂ ಗ್ರಾಮಸ್ಥರು ಈ ಶಿಬಿರದಲ್ಲಿ ಪಾಲ್ಗೊಂಡು ಆರೋಗ್ಯ, ದಂತ ಹಾಗೂ ಕಣ್ಣಿನ ತಪಾಸಣೆ ಮಾಡಿಸಿದರು.

ಎನ್‌ಎಸ್‌ಎಸ್ ಶಿಬಿರಾರ್ಥಿಗಳು ಸಾರ್ವಜನಿಕರಲ್ಲಿ ಆರೋಗ್ಯ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಸೆಂಟ್ ಆ್ಯನ್ಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ತೃಪ್ತಿ ಬೋಪಣ್ಣ, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಬಿ.ಎನ್. ಶಾಂತಿಭೂಷಣ್, ಕೊಡಗು ದಂತ ವೈದ್ಯಕೀಯ ಕಾಲೇಜಿನ ವೈದ್ಯರಾದ ಡಾ. ಪ್ರವೀಣ ಪಿ. ಗಾಂವ್ಕರ್, ಕ್ರೆಡೋ ಮೆಡಿಕಲ್ ಪ್ರೆöÊವೇಟ್ ಲಿಮಿಟೆಡ್‌ನ ವೈದ್ಯರಾದ ಡಾ. ರಕ್ಷಾ, ಡಾ. ಅಗರ್ವಾಲ್ ಕ್ಲಿನಿಕ್‌ನ ನಿರ್ವಾಹಕರಾದ ಅರ್ಜುನ್ ದೇವಯ್ಯ, ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕಿ ಫ್ಯಾನ್ಸಿ ಲೋಬೋ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.