ಕುಶಾಲನಗರ ನಿಸರ್ಗಧಾಮ ಪ್ರವಾಸಿ ಕೇಂದ್ರದ ಹೊರ ಆವರಣದಲ್ಲಿ ಎನ್‌ಟಿಸಿ ಸಂಸ್ಥೆಯ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಕುಶಾಲನಗರ ಸರಕಾರಿ ಆಸ್ಪತ್ರೆ ರಥ ಬೀದಿ ವ್ಯಾಪ್ತಿಯಲ್ಲಿ ಅನುಗ್ರಹ ಪದವಿಪೂರ್ವ ಕಾಲೇಜು ಭಾರತ ಸ್ಕೌಟ್ಸ್ ಗೈಡ್ಸ್ ಸಂಸ್ಥೆ, ಪುರಸಭೆ ಕೊಡಗು ಅಭಿವೃದ್ಧಿ ಸಮಿತಿ ಮತ್ತಿತರ ಸಂಘ-ಸAಸ್ಥೆಗಳ ಮೂಲಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಕುಶಾಲನಗರ ಪಟ್ಟಣದ ಸರ್ಕಾರಿ ಬಸ್ ನಿಲ್ದಾಣ ಆವರಣ ಮತ್ತಿತರ ಸ್ಥಳಗಳಲ್ಲಿ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ಮೂಲಕ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕುಶಾಲನಗರ ಪುರಸಭೆ, ಚೇಂಬರ್ ಆಫ್ ಕಾಮರ್ಸ್ ಪ್ರಮುಖರ ಮೂಲಕ ಕುಶಾಲನಗರ ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.ಕುಶಾಲನಗರ: ಸ್ವಚ್ಛ ಕೊಡಗು ಸುಂದರ ಕೊಡಗು ಸ್ವಚ್ಛತಾ ಅಭಿಯಾನ ಕಾರ್ಯಕ್ರಮದ ಸಂಬAಧ ಕುಶಾಲನಗರ ಪುರಸಭೆ ವ್ಯಾಪ್ತಿಯಲ್ಲಿ ನೂರಾರು ಸಂಖ್ಯೆಯ ಕಾಲೇಜು ವಿದ್ಯಾರ್ಥಿಗಳೊಂದಿಗೆ ಸ್ಥಳೀಯ ಹಲವು ಸಂಘ ಸಂಸ್ಥೆಗಳು ಪಾಲ್ಗೊಂಡು ಸ್ವಚ್ಛ ಪರಿಸರ ನಿರ್ಮಿಸುವಲ್ಲಿ ಕೈಜೋಡಿಸಿದರು.

ಕುಶಾಲನಗರ ಸರಕಾರಿ ಇಂಜಿನಿಯರಿAಗ್ ಕಾಲೇಜು ಸರಕಾರಿ ಪಾಲಿಟೆಕ್ನಿಕ್ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು, ಕುಶಾಲನಗರದ ಚೇಂಬರ್ ಆಫ್ ಕಾಮರ್ಸ್, ರೋಟರಿ ಲಯನ್ಸ್, ಸ್ಕೌಟ್ಸ್ ಮತ್ತು ಗೈಡ್ಸ್, ಎನ್‌ಸಿಸಿ, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿ, ಕೊಡಗು ಅಭಿವೃದ್ಧಿ ಸಮಿತಿ ಕುಶಾಲನಗರ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸಂಖ್ಯೆಯಲ್ಲಿ ಕಾರ್ಯಕರ್ತರು ವಿದ್ಯಾರ್ಥಿಗಳು ಸ್ವಚ್ಛತಾ ಅಭಿಯಾನ ಕಾರ್ಯ ಹಮ್ಮಿಕೊಂಡಿತು.

ಕೊಪ್ಪ ಭಾರತಮಾತ ವಿದ್ಯಾರ್ಥಿಗಳು ಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವಿವೇಕಾನಂದ ಕಾಲೇಜಿನ ಪಿಯು ವಿದ್ಯಾರ್ಥಿಗಳು ಮಾದಾಪಟ್ಟಣ ತಾವರೆಕೆರೆಯಿಂದ ಕುಶಾಲನಗರ ಕಡೆಗೆ ಕುಶಾಲನಗರ ಸರಕಾರಿ ಪದವಿ ಪೂರ್ವ ಕಾಲೇಜಿನ ಎನ್‌ಸಿಸಿ ವಿದ್ಯಾರ್ಥಿಗಳ ತಂಡ ಐ ಬಿ ಕಡೆಯಿಂದ ಪಟ್ಟಣದ ಕಡೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಾರಂಗಿ ರಸ್ತೆಯಲ್ಲಿ ಕುಶಾಲನಗರ ಕನ್ನಡ ಭಾರತಿ ಕಾಲೇಜಿನ ವಿದ್ಯಾರ್ಥಿಗಳು ಅಯ್ಯಪ್ಪ ಸ್ವಾಮಿ ದೇವಾಲಯ ರಸ್ತೆ ಅನುಗ್ರಹ ಕಾಲೇಜಿನ ವಿದ್ಯಾರ್ಥಿಗಳು ಪಟ್ಟಣದ ರಥ ಬೀದಿ ಮತ್ತಿತರ ಕಡೆ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡವು.

ತಾಲೂಕು ತಹಶೀಲ್ದಾರ್ ಕಿರಣ್ ಜಿ ಗೌರಯ್ಯ, ಪುರಸಭೆಯ ಮುಖ್ಯ ಅಧಿಕಾರಿ ಗಿರೀಶ್ ಮತ್ತು ಆರೋಗ್ಯ ಅಧಿಕಾರಿ ಉದಯಕುಮಾರ್, ಚೇಂಬರ್ ಆಫ್ ಕಾಮರ್ಸ್ ಜಿಲ್ಲಾ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್, ಎಸ್.ಕೆ. ಸತೀಶ್, ಕೆ.ಎಸ್. ನಾಗೇಶ್, ರಂಗಸ್ವಾಮಿ, ರೋಟರಿ ಅಧ್ಯಕ್ಷ ಮನು ಪೆಮ್ಮಯ್ಯ, ಮಂಜುನಾಥ್, ಡಾ ಹರಿ ಎ ಶೆಟ್ಟಿ ಲಯನ್ಸ್ ಕ್ಲಬ್ ಅಧ್ಯಕ್ಷ ನಾರಾಯಣ, ಕಿರಣ್ ನಿತಿನ್, ಕಾವೇರಿ ನದಿ ಸ್ವಚ್ಛತಾ ಆಂದೋಲನ ಸಮಿತಿಯ ಎಂ.ಎನ್. ಚಂದ್ರಮೋಹನ್, ಭಾÀರತ್ ಸ್ಕೌಟ್ಸ್ ಆ್ಯಂಡ್ ಗೈಡ್ಸ್ನ ಡಾ. ಪ್ರವೀಣ್ ದೇವರಗುಂಡ, ಗಣೇಶ್, ಸುಲೋಚನ ತಮ್ಮಯ್ಯ, ನರೇಶ್, ಕೊಡಗು ಅಭಿವೃದ್ಧಿ ಸಮಿತಿಯ ಯಾದವ್, ನಾಗೇಂದ್ರ, ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್‌ಸಿಸಿ ಅಧಿಕಾರಿ ಎಂ.ಎಸ್. ಮಹೇಂದ್ರ, ಕಾಫಿ ಉದ್ಯಮಿ ಸುದೀಪ್, ಧರ್ಮಸ್ಥಳ ಕ್ಷೇತ್ರ ಯೋಜನೆಯ ನಾಗರಾಜ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ಇದೇ ಸಂದರ್ಭ ಪಟ್ಟಣದ ಸ್ವಚ್ಛತೆಗೆ ಪ್ರಮುಖ ಆದ್ಯತೆ ನೀಡುತ್ತಿರುವ ಕುಶಾಲನಗರ ಪುರಸಭೆಯ ಪರವಾಗಿ ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್ ಅವರನ್ನು ಕುಶಾಲನಗರ ಕಾವೇರಿ ಸ್ವಚ್ಛತಾ ಆಂದೋಲನ ಅಭಿಯಾನದ ಪ್ರಮುಖರು ಸನ್ಮಾನಿಸಿ ಗೌರವಿಸಿದರು.