ಮಡಿಕೇರಿ, ಮಾ. ೧೬: ಜಿಲ್ಲಾಡಳಿತ ಜಿಲ್ಲಾ ಪಂಚಾಯಿತಿ, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್, ಪ್ರವಾಸೋದ್ಯಮ ಪಾಲುದಾರರು ಹಾಗೂ ವಿವಿಧ ಸಂಘ-ಸAಸ್ಥೆಗಳ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ೨ನೇ ಹಂತದ ಸ್ವಚ್ಛ ಕೊಡಗು-ಸುಂದರ ಕೊಡಗು ಅಭಿಯಾನ ಯಶಸ್ವಿಯಾಗಿ ನಡೆಯಿತು. ಜಿಲ್ಲೆಯ ಹಲವೆಡೆ ಉತ್ಸಾಹದಿಂದ ಶ್ರಮದಾನದಲ್ಲಿ ಪಾಲ್ಗೊಂಡ ಸಾರ್ವಜನಿಕರು, ವಿದ್ಯಾರ್ಥಿಗಳು, ಪ್ರವಾಸೋದ್ಯಮ ಪಾಲುದಾರರು ಸ್ವಚ್ಛ ಕೊಡಗು ನಿರ್ಮಾಣದ ಸಂಕಲ್ಪ ಮಾಡಿದರು.

ಮಡಿಕೇರಿ ತಾಲೂಕಿನ ರಾಜಾಸೀಟ್, ಗದ್ದುಗೆ, ಓಂಕಾರೇಶ್ವರ ದೇವಾಲಯ, ಅಬ್ಬಿ ಜಲಪಾತ, ತಲಕಾವೇರಿ, ನಾಲ್ಕುನಾಡು ಅರಮನೆ, ಭಾಗಮಂಡಲ, ಕೋಟೆ ಅಬ್ಬಿ ಜಲಪಾತ, ಚೇಲಾವರ, ಕುಶಾಲನಗರ ತಾಲೂಕಿನ ದುಬಾರೆ, ಕಾವೇರಿ ನಿಸರ್ಗಧಾಮ, ಹಾರಂಗಿ ಜಲಾಶಯ, ಹಾರಂಗಿ ವೃಕ್ಷೆÆÃಧ್ಯಾನ, ಆನೆ ಶಿಬರ, ಚಿಕ್ಲಿಹೊಳೆ, ಸೋಮವಾರಪೇಟೆ ತಾಲೂಕಿನ ಹೊನ್ನಮ್ಮನ ಕೆರೆ, ಮಕ್ಕಳ ಗುಡಿ ಬೆಟ್ಟ, ಕೋಟೆ ಬೆಟ್ಟ,

ಸೂರ್ಲಬ್ಬಿ ಜಲಪಾತ, ಮಲ್ಲಳ್ಳಿ ಜಲಪಾತ, ಪೊನ್ನಂಪೇಟೆ ತಾಲೂಕಿನ ಬರಪೊಳೆ ರಿವರ್ ರ‍್ಯಾಫ್ಟಿಂಗ್, ಇರ್ಪು ಜಲಪಾತ ಸೇರಿದಂತೆ ವಿವಿಧೆಡೆ ಅಭಿಯಾನ ಯಶಸ್ವಿಯಾಗಿ ನಡೆಯಿತು.

ಮಡಿಕೇರಿಯಲ್ಲಿ ಚಾಲನೆ

ಮಡಿಕೇರಿಯಲ್ಲಿ ಜಿಲ್ಲಾಡಳಿತ, ಜಿ.ಪಂ, ಪ್ರವಾಸೋದ್ಯಮ ಇಲಾಖೆ, ಕೂರ್ಗ್ ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್, ಟ್ರಾವೆಲ್ ಅಸೋಸಿಯೇಷನ್, ಹೋಂ ಸ್ಟೇ ಅಸೋಸಿಯೇಷನ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್, ಟ್ಯಾಕ್ಸಿ ಮತ್ತು ಜೀಪ್ ಚಾಲಕ ಹಾಗೂ ಮಾಲೀಕರ ಸಂಘ, ಲಯನ್ಸ್ ಕ್ಲಬ್, ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆ, ಎನ್‌ಸಿಸಿ ಘಟಕ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ವತಿಯಿಂದ ಸ್ವಚ್ಛತಾ ಅಭಿಯಾನ ನಡೆಯಿತು. ನಗರದ ರಾಜಾಸೀಟು ಉದ್ಯಾನವನದಲ್ಲಿ ಅಭಿಯಾನಕ್ಕೆ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ ಚಾಲನೆ ನೀಡಿದರು. ೪ಐದನೇ ಪುಟಕ್ಕೆ

ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆ ಅಧ್ಯಕ್ಷೆ ಪಿ.ಕಲಾವತಿ, ಮಡಿಕೇರಿ ನಗರದಲ್ಲಿ ಅರ್ಧ ಲೀಟರ್ ಮತ್ತು ಒಂದು ಲೀಟರ್ ನೀರಿನ ಬಾಟಲಿ ಬಳಕೆ ನಿಷೇಧಿಸಲಾಗಿದೆ. ಇದರಿಂದ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ನಿಯಂತ್ರಣಕ್ಕೆ ಬಂದಿದೆ. ಅದೇ ರೀತಿ ಮುಂದುವರೆಯಬೇಕು. ಪ್ಲಾಸ್ಟಿಕ್ ಬಳಕೆಯನ್ನು ಹಂತ ಹಂತವಾಗಿ ಕಡಿಮೆ ಮಾಡಬೇಕು ಎಂದರು.

ಉಪ ವಿಭಾಗಾಧಿಕಾರಿ ಹಾಗೂ ಪ್ರವಾಸೋದ್ಯಮ ಇಲಾಖೆ ಉಪ ನಿರ್ದೇಶಕ ನಿತಿನ್ ಚಕ್ಕಿ ಮಾತನಾಡಿ, ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿರಬೇಕು. ಪ್ಲಾಸ್ಟಿಕ್‌ನ್ನು ಬಳಸಬಾರದು. ಶುಚಿತ್ವಕ್ಕೆ ಒತ್ತು ಕೊಟ್ಟಲ್ಲಿ ಉತ್ತಮ ಪರಿಸರ ಮತ್ತು ಆರೋಗ್ಯವನ್ನು ಕಾಣಬಹುದು ಎಂದು ತಿಳಿಸಿದರು.

ಕೂರ್ಗ್ ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಅಧ್ಯಕ್ಷ ದಿನೇಶ್ ಕಾರ್ಯಪ್ಪ ಮಾತನಾಡಿ, ಕೊಡಗು ಜಿಲ್ಲಾ, ತಾಲೂಕು ಹಾಗೂ ಪ್ರವಾಸಿ ಸ್ಥಳಗಳು ಸೇರಿದಂತೆ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳ ಜೊತೆಗೂಡಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಹಚ್ಚಹಸಿರಿನ ಕೊಡಗು ಮತ್ತಷ್ಟು ಸುಂದರವಾಗಿರಬೇಕು. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಿದ್ದಾರೆ ಎಂದು ಹೇಳಿದರು.

ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್ ಮಾತನಾಡಿ, ಉತ್ತಮ ಪರಿಸರಕ್ಕೆ ಒತ್ತು ಕೊಟ್ಟಿದ್ದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಸೆಳೆಯಬಹುದಾಗಿದೆ. ಆ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸುವಂತಾಗಬೇಕು ಎಂದರು. ಪ್ರವಾಸೋದ್ಯಮ ಪಾಲುದಾರರಾದ ಬಿ.ಜಿ.ಅನಂತಶಯನ ಮಾತನಾಡಿ, ಪ್ರವಾಸಿಗರಿಗೆ ಪ್ರವಾಸಿ ಸ್ಥಳಗಳಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಕೂರ್ಗ್ ಹೊಟೇಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಲಹೆಗಾರ ಜಿ.ಚಿದ್ವಿಲಾಸ್, ಎಫ್‌ಎಂಸಿ ಕಾಲೇಜಿನ ಪ್ರಾಂಶುಪಾಲ ಪ್ರೊ.ಬಿ.ರಾಘವ, ಓಂಕಾರೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚುಮ್ಮಿ ದೇವಯ್ಯ, ಟ್ರಾವೆಲ್ ಅಸೋಸಿಯೇಷನ್ ಅಧ್ಯಕ್ಷÀ ವಸಂತ, ಕೂರ್ಗ್ ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಕಾರ್ಯದರ್ಶಿ ನಾಸೀರ್, ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕ ಜತಿನ್ ಸೇರಿದಂತೆ ಇತರರು ಇದ್ದರು.

ಮಡಿಕೇರಿ ನಗರದಲ್ಲಿ ವೀರಾಜಪೇಟೆ ರಸ್ತೆ, ಭಾಗಮಂಡಲ-ತಲಕಾವೇರಿ ರಸ್ತೆ(ಮಂಗಳೂರು ರಸ್ತೆ), ಮಡಿಕೇರಿ-ಸಿದ್ದಾಪುರ ರಸ್ತೆ ಮತ್ತು ಮಡಿಕೇರಿ-ಮೈಸೂರು ರಸ್ತೆ ಈ ವ್ಯಾಪ್ತಿಯ ೨ ಕಿ,.ಮೀ ವರೆಗೆ ಸ್ವಚ್ಛತಾ ಅಭಿಯಾನ ನಡೆಯಿತು.