ಮಡಿಕೇರಿ, ಮಾ. ೧೬: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ೧೯ನೇ ಎಟಿಎಂ ಘಟಕವನ್ನು ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ಪಟ್ಟಣದಲ್ಲಿ ಸುಂಟಿಕೊಪ್ಪ ಸಹಕಾರ ಸಂಘದ ಕಟ್ಟಡದ ಆವರಣದಲ್ಲಿ ಬ್ಯಾಂಕ್ ಅಧ್ಯಕ್ಷ ಕೊಡಂದೇರ ಪಿ. ಗಣಪತಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಚೆಟ್ಟಳ್ಳಿ ಸಹಕಾರ ಸಂಘದ ಅಧ್ಯಕ್ಷ ಬಲ್ಲಾರಂಡ ಮಣಿ ಉತ್ತಪ್ಪ, ಸುಂಟಿಕೊಪ್ಪ ಸಹಕಾರ ಸಂಘದ ಅಧ್ಯಕ್ಷ ಜೆರ್ಮಿ ಡಿಸೋಜ ಹಾಗೂ ಆಡಳಿತ ಮಂಡಳಿ ಸದಸ್ಯರು, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಕೆ.ಎಸ್. ಪೂವಯ್ಯ, ನಿರ್ದೇಶಕರುಗಳಾದ ಹೆಚ್.ಎಂ. ರಮೇಶ್, ಹೊಸೂರು ಸತೀಶ್ ಕುಮಾರ್, ಟಿ.ಆರ್. ಶರವಣಕುಮಾರ್, ಹೆಚ್.ಕೆ. ಮಾದಪ್ಪ, ಶರತ್ ಶೇಖರ್, ಪೂಳಂಡ ಪೆಮ್ಮಯ್ಯ, ನಾಪಂಡ ಉತ್ತಪ್ಪ, ಎಂ.ಸಿ. ನಾಣಯ್ಯ, ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ. ಬೆಳ್ಯಪ್ಪ, ಪ್ರಧಾನ ವ್ಯವಸಾಪಕಿ ಜಿ.ಎಂ. ಬೋಜಮ್ಮ, ಬ್ಯಾಂಕ್‌ನ ಅಧಿಕಾರಿ, ಸಿಬ್ಬಂದಿ ವರ್ಗ, ಗ್ರಾಹಕರು ಹಾಜರಿದ್ದರು.