ಸುಂಟಿಕೊಪ್ಪ, ಮಾ.೧೬ : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ೫೮ನೇ ವರ್ಷದ ತೆರೆ ಮಹೋತ್ಸವವು ತಾ. ೨೧ರಿಂದ ೨೩ ರವರೆಗೆ ವಿಶೇಷ ಪೂಜೆಗಳು ನಡೆಯಲಿದೆ ಎಂದು ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ಮುತ್ತಪ್ಪ ದೇವಸ್ಥಾನ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್ ತಿಳಿಸಿದ್ದಾರೆ.
ಶನಿವಾರ ದಂದು ಬೆಳಿಗ್ಗೆ ೬.೩೦ ಗಂಟೆಗೆ ಗಣಪತಿ ಹವನ ೭.೧೫ ಗಂಟೆಗೆ ಶುದ್ಧಿ ಪುಣ್ಯಾಹ, ೭.೩೦ ಗಂಟೆಗೆ ಬಾವುಟವನ್ನು ಏರಿಸುವುದು, ಸಂಜೆ ೪ ಗಂಟೆಗೆ ಶ್ರೀ ಮುತ್ತಪ್ಪ ದೇವರ ಮಲೆ ಇಳಿಸುವಿಕೆ, ರಾತ್ರಿ ೬ ಗಂಟೆಗೆ ಚಂಡೆಮೇಳ, ೭. ಗಂಟೆಗೆ ಶ್ರೀಮುತ್ತಪ್ಪ ವೆಳ್ಳಾಟಂ ನಡೆಯಲಿದೆ.
ತಾ.೨೨ ಭಾನುವಾರ ದಂದು ಬೆಳಿಗ್ಗೆ ೭ ಗಂಟೆಗೆ ವಾದ್ಯಮೇಳ, ೧೧ ಗಂಟೆಗೆ ಶ್ರೀ ಶಾಸ್ತಪ್ಪನ ವೆಳ್ಳಾಟಂ, ಮಧ್ಯಾಹ್ನ ೧ ಗಂಟೆಗೆ ಶ್ರೀ ಗುಳಿಗವೆಳ್ಳಾಟಂ, ಸಂಜೆ ೪ ಗಂಟೆಗೆ ಅಡಿಯರ ಮೆರವಣಿಗೆ, ರಾತ್ರಿ ೭ ಗಂಟೆಗೆ ಶ್ರೀ ಮುತ್ತಪ್ಪ ವೆಳ್ಳಾಟಂ, ೮ ಗಂಟೆಗೆ ಶ್ರೀ ಚಾಮುಂಡೇಶ್ವರಿ ಮತ್ತು ಶ್ರೀ ರಕ್ತ ಚಾಮುಂಡಿ ವೆಳ್ಳಾಟಂ, ೮.೩೦ ಗಂಟೆಗೆ ಶ್ರೀ ವಸೂರಿಮಾಲೆ ಸ್ನಾನಕ್ಕೆ ಹೊರಡುವುದು ೯. ಗಂಟೆಗೆ ವಿಷ್ಣುಮೂರ್ತಿ ವೆಳ್ಳಾಟಂ, ೧೧ ಗಂಟೆಗೆ ಕಳಿಗ ಪಾಟ್ ಅಂದಿವೇಳ ಕಳಸಂ ಸ್ವೀಕರಿಸುವುದು, ವೆಳ್ಳಕಟ್ಟ್, ೧-೧೫ಕ್ಕೆ ಗುಳಿಗನ ಕೋಲ, ೨ ಗಂಟೆಗೆ ಶಾಸ್ತಪ್ಪನ ಕೋಲ, ಬೆಳಗಿನ ಜಾವ ೪ ಗಂಟೆಗೆ ಶ್ರೀಮುತ್ತಪ್ಪ ಮತ್ತು ಶ್ರೀ ತಿರುವಪ್ಪನ ಕೋಲ, ೫ ಗಂಟೆಗೆ ಗಂಭೀರ ಪಟಾಕಿ.
ತಾ. ೨೩. ರಂದು ಬೆಳಿಗ್ಗೆ ೭ ಗಂಟೆಗೆ ಶ್ರೀ ರಕ್ತ ಚಾಮುಂಡಿಕೋಲ, ೮ ಗಂಟೆಗೆ ಶ್ರೀ ಮುತ್ತಪ್ಪ ಮತ್ತು ಶ್ರೀ ತಿರುವಪ್ಪ ದೇವರ ಪಳ್ಳಿವೇಟ, ೯ ಗಂಟೆಗೆ ಶ್ರೀ ವಿಷ್ಣುಮೂರ್ತಿಕೋಲ, ೧೦ ಗಂ. ಶ್ರೀ ಚಾಮುಂಡೇಶ್ವರಿ ಕೋಲ, ೧೧ ಗಂಟೆಗೆ ಶ್ರೀ ವಸೂರಿ ಮಾಲೆ ಕೋಲ, ಮದ್ಯಾಹ್ನ ೧೧.೩೦ ಗಂಟೆಗೆ ಗುರು ಶ್ರೀ ದರ್ಪಣ, ಅಪರಾಹ್ನ ೧೨ ಗಂಟೆಗೆ ಬಾವುಟ ಇಳಿಸಲಾಗುವುದೆಂದು ಶ್ರೀ ಚಾಮುಂಡೇಶ್ವರಿ ಹಾಗೂ ಮುತ್ತಪ್ಪ ದೇವಾಲಯ ಸಮಿತಿ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.