ಕೊಡ್ಲಿಪೇಟೆ, ಮಾ. ೧೬: ಇಂದಿನ ಯುವ ಜನತೆಯಲ್ಲಿ ಸಾಮಾಜಿಕ ಜವಾಬ್ದಾರಿ ಮತ್ತು ಬದುಕಿನ ಸಾರ್ಥಕತೆಯ ಮೌಲ್ಯಗಳ ಕುರಿತು ಅರಿವು ಮೂಡಿಸುವ ಅಗತ್ಯ ಹೆಚ್ಚಿದೆ ಎಂದು ಕೊಡಗು ವಿಶ್ವ ವಿದ್ಯಾಲಯದ ಉಪನ್ಯಾಸಕ ಡಾ. ಜಮೀರ್ ಅಹಮದ್ ಅಭಿಪ್ರಾಯಿಸಿದರು.
ಕೊಡ್ಲಿಪೇಟೆಯ ಹಲಸಿನಮರ ಗೌರಮ್ಮ ಶಾಂತಮಲ್ಲಪ್ಪ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಕೊಡ್ಲಿಪೇಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದಲ್ಲಿ ಭಾಗವಹಿಸಿ “ಯುವ ಜನತೆ-ಅಂದು-ಇAದು” ಎಂಬ ವಿಷಯದ ಕುರಿತು ಅವರು ಮಾತನಾಡಿದರು.
ಸಂಬAಧಗಳ ಮೌಲ್ಯ, ವಿಧೇಯತೆ, ವಿನಯತೆ, ಪ್ರೀತಿ ತುಂಬಿದ ಮಾತುಗಳು ಮರೆಯಾಗುತ್ತಿವೆ. ಗುರು-ಹಿರಿಯರ ಹಾಗೂ ಪೋಷಕರ ಬಗ್ಗೆ ನಿರ್ಲಕ್ಷ್ಯ ಮನೋಭಾವ ಹೆಚ್ಚಾಗುತ್ತಿದೆ. ಈ ಹಿಂದಿನ ಸಮಾಜದಲ್ಲಿ ಯುವಜನ ಸಮೂಹವು ಗೌರವ ಮತ್ತು ಪ್ರೀತಿಯ ಬದುಕನ್ನು ಬಹಳ ಅರ್ಥಪೂರ್ಣವಾಗಿ ಕಳೆಯುವ ಮೂಲಕ ಮತ್ತು ಸಮಾಜಕ್ಕೆ ತ್ಯಾಗ ಬಲಿದಾನದ ಮೂಲಕ ತಮ್ಮದೇ ಆದ ಕೊಡುಗೆಗಳನ್ನು ನೀಡಿದೆ ಎಂದರು.
ಆದರೆ ಪ್ರಸ್ತುತ ಸಂದರ್ಭದಲ್ಲಿ ಇಂದಿನ ಯುವ ಜನರು ಆಕರ್ಷಕ ಬದುಕಿನ ಮೋಹದಲ್ಲಿ ಎಲ್ಲವನ್ನೂ ಮರೆತು ಹೋಗುವಂತಹ ವಿಷಮ ಪರಿಸ್ಥಿತಿಯನ್ನು ನಿರ್ಮಿಸಿದೆ. ಇದರಿಂದ ಹೊರಬರುವ ಪ್ರಯತ್ನ ಮಾಡಬೇಕಾಗಿದೆ ಎಂದರು.
ಕೊಡ್ಲಿಪೇಟೆ ಪ್ರಥಮ ದರ್ಜೆ ಕಾಲೇಜಿನ ಆಡಳಿತ ಮಂಡಳಿಯ ನಿರ್ದೇಶಕರಾದ ಶಿವಪ್ರಸಾದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಸಿದ್ದೇಶ್, ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವೃಂದ, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಎನ್‌ಎಸ್‌ಎಸ್ ಶಿಬಿರಾಧಿಕಾರಿ ಯೋಗೇಂದ್ರ, ಸಹ ಶಿಬಿರಾಧಿಕಾರಿ ಯೋಗಿತಾ ಹಾಗೂ ಶಿಬಿರಾರ್ಥಿಗಳು ಉಪಸ್ಥಿತರಿದ್ದರು. ಶಿಬಿರಾರ್ಥಿ ಶ್ರೇಯ ಕಾರ್ಯಕ್ರಮ ನಿರೂಪಿಸಿದರು.