ಸೋಮವಾರಪೇಟೆ, ಮಾ. ೧೭: ಇಲ್ಲಿನ ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ವತಿಯಿಂದ ಅಂತರರಾಷ್ಟಿçÃಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ನಡೆಯಿತು.
ಜೇಸಿ ವಲಯ ನಿರ್ದೇಶಕಿ ರಮ್ಯ ಸಂತೋಷ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ಮಾತನಾಡಿ, ಉತ್ಸಾಹಿ ಜನರಿಗೆ ಜೇಸಿ ಸಂಸ್ಥೆ ಹಲವು ಅವಕಾಶಗಳನ್ನು ನೀಡುತ್ತಾ ಬಂದಿದೆ. ಮಹಿಳಾ ಶಕ್ತಿ ಮತ್ತು ಸಾಮರ್ಥ್ಯವನ್ನು ಹೆಚ್ಚಿಸುವುದರೊಂದಿಗೆ ಅವರಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಸಂಸ್ಥೆ ಮಾಡುತ್ತಿದೆ ಎಂದರು.
ಇAದಿಗೂ ಹೆಚ್ಚಿನ ಮಹಿಳೆಯರು ತಮ್ಮಲ್ಲಿ ಅಡಗಿರುವ ಸಾಮರ್ಥ್ಯವನ್ನು ಬಳಸಿಕೊಳ್ಳಲು ವಿಫಲರಾಗಿದ್ದಾರೆ. ಅಂತಹ ಮಹಿಳೆಯರು ಜೇಸಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ವಿಕಸನ ಮಾಡಿಕೊಳ್ಳಬಹುದು ಎಂದು ಅಭಿಪ್ರಾಯಿಸಿದರು.
ಮಹಿಳಾ ಸಮಾಜದ ನಿರ್ದೇಶಕಿ ಜಲಜಾ ಶೇಖರ್ ಮಾತನಾಡಿ, ಬ್ರಿಟೀಷರು ಭಾರತಕ್ಕೆ ಬಂದು ಆಡಳಿತ ನಡೆಸುವ ಸಂದರ್ಭ, ಮಹಿಳೆಯರ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ ನಂತರ, ಸಮಾಜದಲ್ಲಿ ಮಹಿಳಾ ಸಬಲೀಕರಣ ಪ್ರಾರಂಭ ಆಯಿತು. ಪ್ರಪಂಚದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರ ಸಾಧನೆ ಕಾಣಬಹುದು. ಅವರ ಸಾಧನೆಗೆ ಪುರುಷರು ಬೆಂಬಲ ನೀಡುತ್ತಿದ್ದಾರೆ ಎಂದರು.
ಸಾಯಿ ಆಸ್ಪತ್ರೆಯ ಸ್ತಿçà ರೋಗ ತಜ್ಞರಾದ ಡಾ. ಎಂ.ಕೆ. ಹಿಮಾನಿ ಮಾತನಾಡಿ, ಪುರುಷರಂತೆಯೇ ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ಸಾಧನೆಗಳನ್ನು ಮಾಡುತ್ತಿದ್ದಾರೆ. ಇನ್ನೂ ಹೆಚ್ಚಿನ ಸಾಧನೆ ಮಾಡುವ ಮೂಲಕ ಸಮಾಜಕ್ಕೆ ಹೆಚ್ಚಿನ ಕೊಡುಗೆ ನೀಡಬೇಕಿದೆ ಎಂದರು.
ಜೇಸಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಜಾ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಸುಮತಿ ಶೆಟ್ಟಿ, ಆರೋಗ್ಯ ಇಲಾಖೆಯ ತಸ್ಮಿಯ ಬಾನು ಮತ್ತು ಸುನಂದ, ಕಾಜೂರು ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಿ.ಇ. ಅನುಸೂಯ, ಶನಿವಾರಸಂತೆಯ ಲೇಖಕಿ ಲಾವಣ್ಯ ಮೋಹನ್ ಅವರುಗಳಿಗೆ ಜೇಸಿ ಪಂಚರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮುಖ್ಯ ಅತಿಥಿಗಳಾಗಿ ಜೇಸಿಐ ಅಧ್ಯಕ್ಷೆ ಮಂಜುಳಾ ಸುಬ್ರಮಣಿ, ಸಿಂಚನ ಉಪಸ್ಥಿತರಿದ್ದರು.