ಮಡಿಕೇರಿ, ಮಾ. ೧೭: ತಾ. ೧೮ ರಿಂದ (ಇಂದಿನಿAದ) ಏಪ್ರಿಲ್ ೨ ರವರೆಗೆ ನಡೆಯುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಜಿಲ್ಲಾಡಳಿತ ಹಾಗೂ ಶಾಲಾ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಪ್ರಸಕ್ತ ಸಾಲಿನ ಪರೀಕ್ಷೆ ಸಂಬAಧ ಕಳೆದ ಬಾರಿಯಂತೆ ಈ ಬಾರಿಯೂ ಪರೀಕ್ಷೆಯನ್ನು ಅಚ್ಚುಕಟ್ಟಾಗಿ ನಡೆಸಲು ಅಗತ್ಯ ತಯಾರಿ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ೬,೧೮೩ ವಿದ್ಯಾರ್ಥಿಗಳು ನೋಂದಣಿ ಮಾಡಿದ್ದಾರೆ. ಇವರಲ್ಲಿ ಬಾಲಕರು ೩,೦೪೯, ಹಾಗೆಯೇ ಬಾಲಕಿಯರು ೩,೧೩೪ ಮಂದಿ ಪರೀಕ್ಷೆ ಬರೆಯಲಿದ್ದಾರೆ. ಹಾಗೆಯೇ ೩೯೯ ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬಸವರಾಜು ಮಾಹಿತಿ ನೀಡಿದ್ದಾರೆ.
ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಉಪ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಸಾರಿಗೆ ಜಾಗೃತ ದಳ, ಮಾರ್ಗಾಧಿಕಾರಿಗಳು, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ೨೮ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಮಡಿಕೇರಿ ೮, ವೀರಾಜಪೇಟೆ ೮ ಹಾಗೂ ಸೋಮವಾರಪೇಟೆ ೧೨ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಕೆ, ಕುಡಿಯುವ ನೀರಿನ ಸೌಲಭ್ಯ, ಬೆಳಕಿನ ವ್ಯವಸ್ಥೆ, ಶೌಚಾಲಯ, ಶುಶ್ರೂಷಕರ ನೇಮಕ, ಪೊಲೀಸರ ನಿಯೋಜನೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರದಲ್ಲಿ ಅಗತ್ಯ ಕ್ರಮವಹಿಸಲಾಗಿದೆ. ವಸತಿ ಶಾಲೆ ವಿದ್ಯಾರ್ಥಿಗಳು ಸೇರಿದಂತೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.
ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು, ಅಗತ್ಯ ಪೀಠೋಪಕರಣ, ಶೌಚಾಲಯ, ಶುದ್ಧ ಕುಡಿಯುವ ನೀರು, ಪರೀಕ್ಷಾ ಕೊಠಡಿಯಲ್ಲಿ ಗಾಳಿ-ಬೆಳಕಿನ ವ್ಯವಸ್ಥೆ, ವಿಶೇಷ ಅಗತ್ಯತೆವುಳ್ಳ ಮಕ್ಕಳಿಗೆ ಸೌಲಭ್ಯ ಹೀಗೆ ಹಲವು ಮೂಲ ಸೌಕರ್ಯ ಒದಗಿಸಲಾಗಿದೆ ಎಂದು ನೋಡಲ್ ಅಧಿಕಾರಿ ಬಿಂದು ಮಾಹಿತಿ ನೀಡಿದ್ದಾರೆ.