ಸೋಮವಾರಪೇಟೆ, ಮಾ. ೧೭: ಪ್ರತಿಯೊಬ್ಬರೂ ಪರಸ್ಪರ ಧರ್ಮಗಳ ಆಚರಣೆಗಳನ್ನು ಗೌರವಿಸುವುದರಿಂದ ಸಮಾಜದಲ್ಲಿ ಸೌಹಾರ್ದತೆ ಹಾಗೂ ಶಾಂತಿ ಕಾಪಾಡಲು ಸಾಧ್ಯವಾಗಲಿದೆ ಎಂದು ಶಾಸಕ ಡಾ. ಮಂತರ್‌ಗೌಡ ಅಭಿಪ್ರಾಯಿಸಿದರು.

ರಂಜಾನ್ ಹಬ್ಬದ ಪ್ರಯುಕ್ತ ಪಟ್ಟಣದ ಜಲಾಲಿಯ ಮಸೀದಿಯಲ್ಲಿ ಆಯೋಜಿಸಿದ್ದ ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜನಪ್ರತಿನಿಧಿಗಳಾಗಿ ಎಲ್ಲಾ ಧರ್ಮಗಳ ಧಾರ್ಮಿಕ ಆಚರಣೆಗಳನ್ನು ಗೌರವಿಸುವುದು ಮತ್ತು ಸಮುದಾಯಗಳ ನಡುವೆ ಸಾಮರಸ್ಯವನ್ನು ಬೆಳೆಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.

ಜಲಾಲಿಯ ಮಸೀದಿ ಅಧ್ಯಕ್ಷ ಕೆ.ಎ. ಆದಂ ಮಾತನಾಡಿ, ಡಾ. ಮಂತರ್‌ಗೌಡ ಅವರು ಶಾಸಕರಾದ ನಂತರ ಮಡಿಕೇರಿ ಕ್ಷೇತ್ರದ ಮಸೀದಿ, ಶಾದಿಮಹಲ್ ಮತ್ತು ಮದ್ರಸಗಳಿಗೆ ಸುಮಾರು ೭ ಕೋಟಿ ರೂ.ಗಳಷ್ಟು ಅನುದಾನ ಕಲ್ಪಿಸಿಕೊಟ್ಟಿದ್ದಾರೆ. ಜಲಾಲಿಯ ಮಸೀದಿ ಅಭಿವೃದ್ಧಿ ಮತ್ತು ವಿವಿಧ ಕಾಮಗಾರಿಗಳಿಗೆ ೯೬ ಲಕ್ಷ ರೂ.ಗಳ ಅನುದಾನ ಒದಗಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮಸೀದಿಯ ಧರ್ಮಗುರುಗಳಾದ ಹಮೀದ್ ಮೌಲವಿ, ಹಫಿಲ್ ಸಹದಿ, ವಕ್ಫ್ಮಂಡಳಿ ಮಾಜಿ ಜಿಲ್ಲಾಧ್ಯಕ್ಷ ಎ.ಬಿ. ಉಮ್ಮರ್ ಮತ್ತು ಮುಸ್ಲಿಂ ಸಮುದಾಯದ ಮುಖಂಡರು ಇದ್ದರು.