ಮಡಿಕೇರಿ, ಮಾ. ೧೭: ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.೨೧ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರ ವಲಯದ ಕ್ಯಾಪಿಟಲ್ ವಿಲೇಜ್ ನಲ್ಲಿ “ವಿಚಾರ ಸಂಕಿರಣ” ನಡೆಯಲಿದೆ ಎಂದು ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ತಿಳಿಸಿದ್ದಾರೆ. “ಭೂ-ರಾಜಕೀಯ ಸ್ವಾಯತ್ತತೆ” ಮತ್ತು “ವಿಶೇಷ ಸ್ಥಾನಮಾನ”ಕ್ಕಾಗಿ ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಶಾಸನ ರೂಪಿಸುವವರು, ನ್ಯಾಯವಾದಿಗಳು ಹಾಗೂ ಶಿಕ್ಷಣ ತಜ್ಞರು ಹಕ್ಕೊತ್ತಾಯದ ಕುರಿತು ಚರ್ಚಿಸಲಿದ್ದಾರೆ ಎಂದು ಅವರು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.