ನಾಪೋಕ್ಲು, ಮಾ. ೧೭: ಸಮಾಜದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾದದ್ದು ಎಂದು ಮೈಸೂರಿನ ಪ್ರಾದೇಶಿಕ ಭವಿಷ್ಯ ನಿಧಿ ಕಾರ್ಯಾಲಯದ ಮುಂಡAಡ ಮೈನಾ ಮುತ್ತಮ್ಮ ಹೇಳಿದರು.

ಇಲ್ಲಿನ ಕೊಡವ ಸಮಾಜದ ಪೊಮ್ಮಕ್ಕಡ ಪರಿಷತ್ ವತಿಯಿಂದ ಭಾನುವಾರ ಕೊಡವ ಸಮಾಜದ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೊಮ್ಮಕ್ಕಡ ನಾಳ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದರು .

ಮಹಿಳೆಯರು ಜಾಗೃತರಾಗಿ ಸಮಾಜ ಸುಧಾರಣೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಬೇಕು ಎಂದರು. ಸಮಾಜದಲ್ಲಿ ಮಹಿಳೆಯರು ವಿವಿಧ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಅಂತಹ ಸವಾಲುಗಳನ್ನು ಮೆಟ್ಟಿನಿಂತು ಮಹಿಳೆಯರು ಸಾಧನೆ ಮಾಡಬೇಕಾಗಿದೆ ಎಂದು ರಾಷ್ಟç ಪ್ರಶಸ್ತಿ ವಿಜೇತೆ ಕೊಟ್ಟು ಕತ್ತಿರ ಯಶೋಧ ಪ್ರಕಾಶ್ ಹೇಳಿದರು. ಸಂಸಾರವನ್ನು ಸಮತೋಲನದಲ್ಲಿ ಸಾಗಿಸುವ ಜವಾಬ್ದಾರಿ ಮಹಿಳೆಯರದ್ದಾಗಿದೆ. ಸಮಾಜದಲ್ಲಿ ಹತ್ತು ಹಲವು ಸವಾಲುಗಳನ್ನು ಎದುರಿಸುತ್ತಿರುವ ಮಹಿಳೆಯರು ಅವುಗಳನ್ನು ಧನಾತ್ಮಕ ಮನೋಭಾವದಿಂದ ಸ್ವೀಕರಿಸಿ ಮುನ್ನಡೆಯಬೇಕು. ಮಕ್ಕಳ ಪಾಲನೆ, ಪೋಷಣೆ, ಜೊತೆಗೆ ಉತ್ತಮ ಸಂಸ್ಕೃತಿಯನ್ನು ಕಲಿಸುವ ಜವಾಬ್ದಾರಿ ಮಹಿಳೆಯರದ್ದಾಗಿದೆ. ಉದ್ಯೋಗದಲ್ಲಿರುವ ಮಹಿಳೆಯರು ಔದ್ಯೋಗಿಕ ರಂಗದಲ್ಲಿ ಮಾತ್ರವಲ್ಲದೆ ಸಾಂಸಾರಿಕವಾಗಿ ಜವಾಬ್ದಾರಿಯನ್ನು ಹೊತ್ತು ಸಮಾಜದ ಬೆಳವಣಿಗೆಗೆ ಕಾರಣರಾಗಬೇಕು ಎಂದರು.

ನಿವೃತ್ತ ಬ್ಯಾಂಕ್ ಉದ್ಯೋಗಿ ಮೂವೆರ ಮೀನ ಕಾರ್ಯಪ್ಪ ಮಾತನಾಡಿ ಮಹಿಳೆಯರು ಸ್ವಂತ ವ್ಯಕ್ತಿತ್ವವನ್ನು ಬಳಸಿಕೊಳ್ಳಬೇಕು. ಮಹಿಳೆ ತಾನು ತನ್ನ ಕುಟುಂಬದ ನಿರ್ವಹಣೆಯನ್ನು ಸರಿಯಾಗಿ ಮಾಡಿದರೆ ಸಮಾಜದ ಸುಧಾರಣೆ ಮಾಡಿದಂತೆ. ಕುಟುಂಬ ನಿರ್ವಹಣೆಯ ಜೊತೆಗೆ ಮಕ್ಕಳಿಗೆ ಉತ್ತಮ ಶಿಕ್ಷಣ ಸಂಸ್ಕಾರ ಸಂಸ್ಕೃತಿಯನ್ನು ನೀಡುವ ಜವಾಬ್ದಾರಿ ಮಹಿಳೆಯರದ್ದು ಎಂದು ಅಭಿಪ್ರಾಯಪಟ್ಟರು.

ನಾಪೋಕ್ಲು ಕೊಡವ ಸಮಾಜ ಪೊಮ್ಮಕ್ಕಡ ಪರಿಷತ್ ಅಧ್ಯಕ್ಷೆ ಬಾಳೆಯಡ ನಿಶಾ ಮೇದಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟçಪ್ರಶಸ್ತಿ ವಿಜೇತೆ ಕೊಟ್ಟುಕತ್ತಿರ ಯಶೋಧ ಪ್ರಕಾಶ್ ನಿವೃತ್ತ ಲೆಫ್ಟಿನೆಂಟ್ ಕರ್ನಲ್ ತೊತ್ಯಂಡ ಸಬಿತ ಅವರನ್ನು ಪೊಮ್ಮಕ್ಕಡ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಅರೆಯಡ ಸರಸು ಪೆಮ್ಮಯ್ಯ ಪ್ರಾರ್ಥಿಸಿ ಕೋಟೆರ ಝಾನ್ಸಿ ವೇದಪ್ಪ ಸ್ವಾಗತಿಸಿದರು. ನಾಯಕಂಡ ಜೂಬಿ ತಿಮ್ಮಯ್ಯ, ಪೆಮ್ಮಂಡ ಕೌಶಿ ದಿನೇಶ್, ಕಾಂಡAಡ ಪ್ರತಿಜಾ ಅಚ್ಚಪ್ಪ ಅತಿಥಿಗಳನ್ನು ಪರಿಚಯಿಸಿದರು. ಮುಕ್ಕಾಟಿರ ರೇಷ್ಮಾ ಮೋಹನ್. ಮಾಡಿದರು. ಬಿದ್ದಾಟಂಡ ಮಮತಾ ಚಿಣ್ಣಪ್ಪ, ಕದ್ದಣಿಯಂಡ ವಂದನಾ ಚಿಣ್ಣಪ್ಪ ಕಾರ್ಯಕ್ರಮ ನಿರೂಪಿಸಿದರು. ಕಲಿಯಂಡ ಗೀತಾ ಗಿರೀಶ್ ವಂದಿಸಿದರು. ಈ ಸಂದರ್ಭ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕೊಡವ ಸಮಾಜದ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಮತ್ತಿತರರು ಹಾಜರಿದ್ದರು.