ಸಿದ್ದಾಪುರ, ಮಾ. ೧೮: ಯುಗಾದಿ ಹಾಗೂ ರಂಜಾನ್ ಹಬ್ಬದ ಹಿನ್ನೆಲೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಮಡಿಕೇರಿ ವೃತ್ತÀ ನಿರೀಕ್ಷಕ ಪಿ.ಕೆ. ರಾಜು ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ನಡೆಸಲಾಯಿತು.

ಸಿಪಿಐ ರಾಜು ಮಾತನಾಡಿ, ಯುಗಾದಿ ಮತ್ತು ರಂಜಾನ್ ಹಬ್ಬಗಳನ್ನು ಸೌಹಾರ್ದತೆಯಿಂದ ಆಚರಿಸುವಂತೆ ಸಲಹೆ ನೀಡಿದ ಅವರು, ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಹಬ್ಬ ಆಚರಿಸುವಂತೆ ತಿಳಿಸಿದರು.

ಈ ಸಂದರ್ಭ ವಿವಿಧ ರಾಜಕೀಯ ಪಕ್ಷಗಳ ಮತ್ತು ವಿವಿಧ ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಹಾಜರಿದ್ದು ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಸಭೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಹಾಗೂ ಸಹಾಯಕ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.