ಕುಶಾಲನಗರ, ಮಾ. ೧೮: ವಾಣಿಜ್ಯ ಬಳಕೆಯ ಅಡುಗೆ ಅನಿಲದ ತೀವ್ರ ಕೊರತೆಯಿಂದ ರಾಷ್ಟçದ ವಾಣಿಜ್ಯ ಚಟುವಟಿಕೆಗಳಿಗೆ ಹಿನ್ನಡೆ ತರುವ ಮೂಲಕ ರಾಷ್ಟçದ ಪರಿಸ್ಥಿತಿಯನ್ನು ಕೇಂದ್ರ ಸರ್ಕಾರ ಅಯೋಮಯಗೊಳಿಸಿದೆ ಎಂದು ಆರೋಪಿಸಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಿತು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷÀ ವಿ.ಪಿ. ಶಶಿಧರ್ ನೇತೃತ್ವದಲ್ಲಿ ಪಕ್ಷದ ಕಚೇರಿಯಿಂದ ಮೆರವಣಿಗೆ ಹೊರಟ ಕಾರ್ಯಕರ್ತರು ಕುಶಾಲನಗರ ಗಣಪತಿ ದೇವಾಲಯ ಮುಂಭಾಗ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾಕಾರರು ರಸ್ತೆಯಲ್ಲಿ ಸೌದೆ ಬಳಸಿ ಒಲೆ ಉರಿಸಿ ಚಹಾ ಮಾಡುವ ಮೂಲಕ ವಿನೂತನ ರೀತಿಯಲ್ಲಿ ಪ್ರತಿಭಟಿಸಿದರು.
ಈ ಸಂದರ್ಭ ಮಾತನಾಡಿದ ವಿ.ಪಿ. ಶಶಿಧರ್. ಅಂತರರಾಷ್ಟಿçÃಯ ಮಟ್ಟದಲ್ಲಿ ಪ್ರಧಾನಿ ಮೋದಿ ಭಾರತವನ್ನು ನಗೆಪಾಟಲಿಗೆ ಈಡು ಮಾಡುತ್ತಿದ್ದಾರೆ. ಭಾರತದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ತಲುಪುತ್ತಿದೆ ಎಂದು ಆರೋಪಿಸಿದರು. ಈ ಸಂದರ್ಭ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಮನಿರ್ದೇಶಿತ ನಾಯಕರು, ಮಹಿಳಾ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಕೆಲಸಮಯ ಮಾನವ ಸರಪಳಿ ರಚಿಸಿ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.