ಮಡಿಕೇರಿ, ಮಾ. ೧೮; ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಲಾಗುವ ಹತ್ತನೇ ತರಗತಿ ವಾರ್ಷಿಕ ಪರೀಕ್ಷೆ ಇಂದಿನಿAದ ಆರಂಭಗೊAಡಿದೆ. ಮೊದಲನೇ ದಿನವಾದ ಇಂದು ಪ್ರಥಮ ಭಾಷೆ ಕನ್ನಡ ಪರೀಕ್ಷೆ ನಡೆದಿದ್ದು, ೬೧೯೦ ಮಂದಿ ವಿದ್ಯಾರ್ಥಿಗಳ ಪೈಕಿ ೬೧೩೨ ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ೫೮ ಮಂದಿ ವಿದ್ಯಾರ್ಥಿಗಳು ಗೈರು ಹಾಜರಾದರು. ಯಾವದೇ ಅಡ್ಡಿ ಆತಂಕಗಳಿಲ್ಲದೆ ಪರೀಕ್ಷೆ ಸುಸೂತ್ರವಾಗಿ ನಡೆದಿದ್ದು, ಏಪ್ರಿಲ್ ೨ರವರೆಗೆ ಪರೀಕ್ಷೆಗಳು ನಡೆಯಲಿವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖಾ ಉಪನಿರ್ದೇಶಕ ಬಸವರಾಜು ತಿಳಿಸಿದ್ದಾರೆ.