ಮಡಿಕೇರಿ, ಮಾ. ೧೮: ಮಡಿಕೇರಿ ಕೊಡವ ಸಮಾಜ ಪೊಮ್ಮಕ್ಕಡ ಕೂಟದ ವತಿಯಿಂದ ಕೂಟದ ಸದಸ್ಯರಿಗೆ ಕ್ರೀಡಾಕೂಟವನ್ನು ಏರ್ಪಡಿಸಲಾಗಿತ್ತು.

ಕೊಡವ ಸಮಾಜದಲ್ಲಿ ನಡೆದ ಸ್ಪರ್ಧೆಯಲ್ಲಿ ಥ್ರೋಬಾಲ್, ಶಟಲ್ ಬ್ಯಾಡ್ಮಿಂಟನ್, ಕೇರಂ ಮತ್ತಿತರ ಕ್ರೀಡೆಗಳು ಜರುಗಿದವು. ಇದರ ಬಹುಮಾನ ವಿತರಣಾ ಕಾರ್ಯಕ್ರಮ ಹಾಗೂ ಈ ಬಾರಿಯ ಪೊಮ್ಮಕ್ಕಡ ನಾಳ್ ಕಾರ್ಯಕ್ರಮ ತಾ. ೨೧ ರಂದು ಬೆಳಿಗ್ಗೆ ೧೦ ಗಂಟೆಗೆ ಮಡಿಕೇರಿ ಕೊಡವ ಸಮಾಜದಲ್ಲಿ ಜರುಗಲಿದೆ.

ಅಧ್ಯಕ್ಷೆ ಕನ್ನಂಡ ಕವಿತಾ ಬೊಳ್ಳಪ್ಪ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಅಧ್ಯಕ್ಷ ಎಂ.ಪಿ. ಮುತ್ತಪ್ಪ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಮಾಜಿ ಎಂ.ಎಲ್.ಸಿ. ವೀಣಾ ಅಚ್ಚಯ್ಯ, ಸಮಾಜ ಸೇವಕಿ ಕೊಡಂದೇರ ಮೀನಾ ಕಾರ್ಯಪ್ಪ ಪಾಲ್ಗೊಳ್ಳಲಿದ್ದಾರೆ. ಶಿಕ್ಷಣ ಇಲಾಖೆಯ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಅಜ್ಜಿಕುಟ್ಟೀರ ಸೌಮ್ಯ ಪೊನ್ನಪ್ಪ ವಿಚಾರ ಮಂಡನೆ ಮಾಡಲಿದ್ದು, ರಾಷ್ಟಿçÃಯ ಚಲನಚಿತ್ರ ಪ್ರಶಸ್ತಿ ವಿಜೇತೆ ಕೊಟ್ಟುಕತ್ತಿರ ಯಶೋದ ಕಾರ್ಯಪ್ಪ ಅವರನ್ನು ಸನ್ಮಾನಿಸಲಾಗುವುದು. ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.